Tag: employment news in kannada

  • RPF Recruitment 20204: ಎಸ್‌ಐ ಮತ್ತು ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ, 4500 ಕ್ಕೂ ಹೆಚ್ಚು ಹುದ್ದೆ, ಹೆಚ್ಚಿನ ಮಾಹಿತಿ ಇಲ್ಲಿದೆ

    RPF Recruitment 20204: ಎಸ್‌ಐ ಮತ್ತು ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ, 4500 ಕ್ಕೂ ಹೆಚ್ಚು ಹುದ್ದೆ, ಹೆಚ್ಚಿನ ಮಾಹಿತಿ ಇಲ್ಲಿದೆ

    RPF Recruitment 2024: ಆರ್‌ಪಿಎಫ್ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆರ್‌ಪಿಎಫ್‌ ನಲ್ಲಿ ಖಾಲಿ ಇರುವ ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲಿಚ್ಛಿಸುವವರು ಈ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು 14-ಮೇ-2024 ರಂದು ಅಥವಾ ಮೊದಲು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024

    ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
    ಸಂಸ್ಥೆಯ ಹೆಸರು: ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF)
    ಹುದ್ದೆಗಳ ಸಂಖ್ಯೆ: ಒಟ್ಟು 4660 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ಹೆಸರು: ರೈಲ್ವೇ ಪ್ರೊಟೆಕ್ಷನ್‌ ಫೋರ್ಸ್‌ (RPF) ನಲ್ಲಿ ಸಬ್ ಇನ್ಸ್‌ಪೆಕ್ಟರ್, ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವೇತನ: ಸಬ್‌ ಇನ್ಸ್‌ಪೆಕ್ಟರ್‌, ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21700-ರೂ.35400/- ವೇತನ ದೊರಕಲಿದೆ.

    ವಿದ್ಯಾರ್ಹತೆ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಷನ್‌ (ಪದವಿ) ಹೊಂದಿರಬೇಕು. ಕಾನ್‌ಸ್ಟೇಬಲ್‌ ಹುದ್ದಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ವರ್ಷ, ಹಾಗೂ ಗರಿಷ್ಠ 28ವರ್ಷ ಮೀರಿರಬಾರದು. ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಠ 28 ವರ್ಷ ಮೀರಿರಬಾರದು. ಉಳಿದಂತೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ಸಂಸ್ಥೆಯ ನಿಯಮಾನುಸಾರ ನೀಡಲಾಗುತ್ತದೆ.

    ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ/ಎಕ್ಸ್‌ ಸರ್ವಿಸ್‌ಮೆನ್/ಮಹಿಳೆಯರು/ ಮೈನಾರಿಟೀಸ್/ಇಬಿಸಿ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಉಳಿದ ಎಲ್ಲಾ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾತ್ರ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್‌ ಪರೀಕ್ಷೆ, ಫಿಸಿಕಲ್‌ ಎಫಿಶಿಯೆನ್ಸಿ ಟೆಸ್ಟ್‌ (ದೈಹಿಕ ದಕ್ಷತೆ ಪರೀಕ್ಷೆ) ಮತ್ತು ಫಿಸಿಕಲ್‌ ಮೆಷರ್‌ಮೆಂಟ್‌ ಟೆಸ್ಟ್‌ (ದೈಹಿಕ ಮಾಪನ ಪರೀಕ್ಷೆ) ಮೂಲಕ ಅಭ್ಯರ್ಥಿಗಳು ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.

    ವೇತನ: ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35,400/-, ಕಾನ್‌ಸ್ಟೇಬಲ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21,700/- ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವ ಇದ್ದವರು ದಾಖಲೆಗಳನ್ನು ಅರ್ಜಿ ಸಲ್ಲಿಸುವ ಮೊದಲು ರೆಡಿಮಾಡಿ ಇಡಬೇಕು.
    ಆರ್‌ಪಿಎಫ್ ಸಬ್ ಇನ್‌ಸ್ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೆಳಗೆ ನೀಡಲಾದ ಲಿಂಕ್‌ ಕ್ಲಿಕ್‌ ಮಾಡಿ.
    ನಂತರ ಆರ್‌ಪಿಎಫ್ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
    ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
    ಅರ್ಜಿ ಶುಲ್ಕ ಪಾವತಿ ಮಾಡುವ ಕಾಲಂ ಕ್ಲಿಕ್‌ ಮಾಡಿ.
    ನಂತರ ಎಲ್ಲಾ ವಿವಿರಗಳನ್ನು ಭರ್ತಿ ಮಾಡಿದ ನಂತರ ಸಲ್ಲಿಸು ಬಟನ್‌ ಕ್ಲಿಕ್‌ ಮಾಡಿ.
    ಕೊನೆಯದಾಗಿ ಕ್ಲಿಕ್ ಬಟನ್‌ ಮೇಲೆ ಕ್ಲಿಕ್ ಮಾಡಿ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ


    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ

  • CMMAC Recruitment 2024: ಬೆಂಗಳೂರಲ್ಲಿ ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗಳಲ್ಲಿ ಆಸಕ್ತಿ ಇರುವವರಿಗೆ ಇಲ್ಲಿದೆ ಸುವರ್ಣವಕಾಶ

    CMMAC Recruitment 2024: ಬೆಂಗಳೂರಲ್ಲಿ ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗಳಲ್ಲಿ ಆಸಕ್ತಿ ಇರುವವರಿಗೆ ಇಲ್ಲಿದೆ ಸುವರ್ಣವಕಾಶ

    CMMACS Recruitment 2024: CMMACS ತನ್ನ ಅಧಿಕೃತ ಅಧಿಸೂಚನೆಯಲ್ಲಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 06 ಹುದ್ದೆಗಳಿದ್ದು, ಆಸಕ್ತರು ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಅಸೋಸಿಯೇಟ್-I ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಹುಡುಕುವವರು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಈ ಹುದ್ದೆಗೆ 05-Mar-2024 09:00 (ಬೆಳಗ್ಗೆ) ನೇರ ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ.

    ಪ್ರಮುಖ ದಿನಾಂಕಗಳು;
    ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ: 21-02-2024
    ನೇರ ಸಂದರ್ಶನಕ್ಕೆ ಹಾಜರಾಗಬೇಕಾದ ದಿನಾಂಕ: 05-03-2024 (ಬೆಳಗ್ಗೆ 9.00)

    ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
    ಹುದ್ದೆ: ಸೀನಿಯರ್‌ ಪ್ರಾಜೆಕ್ಟ್‌ ಅಸೋಸಿಯೇಟ್‌, ಪ್ರಾಜೆಕ್ಟ್‌ ಅಸೋಸಿಯೇಟ್-I ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ:
    ಸೀನಿಯರ್‌ ಪ್ರಾಜೆಕ್ಟ್‌ ಅಸೋಸಿಯೇಟ್‌-1 ಹುದ್ದೆ
    ಪ್ರಾಜೆಕ್ಟ್‌ ಅಸೋಸಿಯೇಟ್-I – 5 ಹುದ್ದೆ
    ಒಟ್ಟು 06 ಹುದ್ದೆಗಳು

    ವಿದ್ಯಾರ್ಹತೆ: ಸೀನಿಯರ್‌ ಪ್ರಾಜೆಕ್ಟ್‌ ಅಸೋಸಿಯೇಟ್‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಎಸ್ಸಿ, ಎಂಟೆಕ್‌, ಪಿಎಚ್‌ಡಿ ತೇರ್ಗಡೆ ಹೊಂದಿರಬೇಕು
    ಪ್ರಾಜೆಕ್ಟ್‌ ಅಸೋಸಿಯೇಟ್‌-I ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿ.ಟೆಕ್‌, ಎಂಸಿಎ, ಎಂಎಸ್ಸಿ ಮಾಡಿರಬೇಕು.

    ವಯೋಮಿತಿ: ಸೀನಿಯರ್‌ ಪ್ರಾಜೆಕ್ಟ್‌ ಅಸೋಸಿಯೇಟ್‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 40ವರ್ಷ ಮೀರಿರಬಾರದು. ಪ್ರಾಜೆಕ್ಟ್‌ ಅಸೋಸಿಯೇಟ್-I ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತಿಯು ಗರಿಷ್ಠ 35 ವರ್ಷ ಆಗಿರಬೇಕು. ಈ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಯನ್ನು ನಿಯಮಾನುಸಾರ ನೀಡಲಾಗುತ್ತದೆ.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಸೀನಿಯರ್‌ ಪ್ರಾಜೆಕ್ಟ್‌ ಅಸೋಸಿಯೇಟ್‌- ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿ ಮಾಸಿಕ ರೂ.42,000 ವೇತನ ಇರಲಿದೆ.
    ಪ್ರಾಜೆಕ್ಟ್‌ ಅಸೋಸಿಯೇಟ್-I- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ.31,000 ಮಾಸಿಕ ವೇತನ ಸಿಗಲಿದೆ.

    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಇಲ್ಲಿ ನೀಡಲಾದ ವಿಳಾಸದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.
    ವಿಳಾಸ: CSIR-4PI, NAL ಬೇಲೂರು ಕ್ಯಾಂಪಸ್, ವಿಂಡ್ ಟನಲ್ ರಸ್ತೆ, ಬೆಂಗಳೂರು-560037. ಈ ವಿಳಾಸದಲ್ಲಿ ದಿನಾಂಕ 05-ಮಾರ್ಚ್-2024 ಬೆಳಗ್ಗೆ 09:00ಗೆ ನೇರ ಸಂದರ್ಶನ ನಡೆಯಲಿದೆ.

    ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ನೋಟಿಫಿಕೇಶನ್‌ ಕ್ಲಿಕ್‌ ಮಾಡಿ

  • NTPC Recruitment 2024: ಅಸಿಸ್ಟೆಂಟ್‌ ಮ್ಯಾನೇಜರ್‌ಗಳ ನೇಮಕಾತಿ-ಮಾಸಿಕ ಭರ್ಜರಿ ಸಂಬಳ, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ

    NTPC Recruitment 2024: ಅಸಿಸ್ಟೆಂಟ್‌ ಮ್ಯಾನೇಜರ್‌ಗಳ ನೇಮಕಾತಿ-ಮಾಸಿಕ ಭರ್ಜರಿ ಸಂಬಳ, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ

    NTPC Recruitment 2024: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 20 ಅಸಿಸ್ಟೆಂಟ್‌ ಮ್ಯಾನೇಜರ್‌ (ಸುರಕ್ಷತೆ) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 08-Mar-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-03-2024

    ಹುದ್ದೆಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ;
    ಸಂಸ್ಥೆಯ ಹೆಸರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
    ಒಟ್ಟು ಹುದ್ದೆಗಳ ಸಂಖ್ಯೆ: 20
    ಹುದ್ದೆಯ ಹೆಸರು: ಅಸಿಸ್ಟೆಂಟ್‌ ಮ್ಯಾನೇಜರ್‌ (ಸುರಕ್ಷತೆ)

    ಸಂಬಳ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.60000-180000/- ವೇತನ ಸಿಗಲಿದೆ.

    ಶೈಕ್ಷಣಿಕ ಅರ್ಹತೆ: ಮೇಲೆ ತಿಳಿಸಿದ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಇಂಜಿನಿಯರಿಂಗ್, ಡಿಪ್ಲೊಮಾ, ಕೈಗಾರಿಕಾ ಸುರಕ್ಷತೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು.

    ವಯೋಮಿತಿ: ನೇಮಕಾತಿ ಅಧಿಸೂಚನೆಯಲ್ಲಿ ನೀಡಲಾಗಿರುವ ಪ್ರಕಾರ, ಅಭ್ಯರ್ಥಿಯು ಗರಿಷ್ಠ ವಯಸ್ಸು 40 ವರ್ಷಗಳನ್ನು ಮೀರಿರಬಾರದು. OBC ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಯಮಾನುಸಾರ ನೀಡಲಾಗಿದೆ.

    ಅರ್ಜಿ ಶುಲ್ಕ:
    SC/ST/XSM/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಸಾಮಾನ್ಯ/EWS/OBC ಅಭ್ಯರ್ಥಿಗಳು ರೂ.300/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಮೇಲ್ಕಂಡ ಹುದ್ದೆಗೆ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅಭ್ಯರ್ಥಿಗಳು ಆನ್‌ಲೈನ್/ಆಫ್‌ಲೈನ್‌ ಮೂಲಕ ಪಾವತಿಸಬಹುದು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಮೇಲೆ ತಿಳಿಸಲಾದ ಹುದ್ದೆಗೆ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ. ಆನ್‌ಲೈನ್‌ ಮೂಲಕ ಅಪ್ಲೈ ಮಾಡಲು ಈ ಲಿಂಕ್‌ ಕ್ಲಿಕ್‌ ಮಾಡಿ

  • Grama Panchayat: ಗ್ರಾ.ಪಂಚಾಯಿತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ; ಮಾಸಿಕ ರೂ.15ಸಾವಿರಕ್ಕಿಂತ ಹೆಚ್ಚು ಸಂಬಳ, ಅರ್ಜಿ ಸಲ್ಲಿಕೆಗೆ ಮಾ.22 ಕಡೆಯ ದಿನ

    Grama Panchayat: ಗ್ರಾ.ಪಂಚಾಯಿತಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ; ಮಾಸಿಕ ರೂ.15ಸಾವಿರಕ್ಕಿಂತ ಹೆಚ್ಚು ಸಂಬಳ, ಅರ್ಜಿ ಸಲ್ಲಿಕೆಗೆ ಮಾ.22 ಕಡೆಯ ದಿನ

    Hassan District Grama Panchayath Recruitment 2024: ಹಾಸನ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ಚಿಚಾರಕರ ಹುದ್ದೆಗಳನ್ನು ನೇಮಕಾತಿ ಮಾಡಲಾಗುವುದೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಹಾಸನ ಜಿಲ್ಲೆಯ ವೆಬ್‌ಸೈಟ್‌ನಲ್ಲಿ https://hassan.nic.in ಆನ್‌ಲೈನ್‌ ಮೂಲಕ ಭರ್ತಿ ಮಾಡಿ ಅಗತ್ಯ ದೃಢೀಕರಿಸಿದ ದಾಖಲೆಗಳೊಂದಿಗೆ ಸಲ್ಲಿಸಲು ಹೇಳಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 22-02-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-03-2024

    ಹುದ್ದೆಗಳ ವಿವರ:
    ಹುದ್ದೆ: ಗ್ರಾಮಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
    ಕರ್ತವ್ಯ ನಿರ್ವಹಿಸುವ ಸ್ಥಳ: ಹಾಸನ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಣೆ

    ವಿದ್ಯಾರ್ಹತೆ: ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿಯುಸಿ) ಯಲ್ಲಿ ಉತ್ತೀರ್ಣರಾಗಿರಬೇಕು. ಮತ್ತು ಸರ್ಟಿಫಿಕೇಷನ್‌ ಕೋರ್ಸ್‌ ಇನ್‌ ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಹಾಗೂ ಕನಿಷ್ಠ ಮೂರು ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್‌ ಕೋರ್ಸ್‌ನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಗ್ರಾಮಪಂಚಾಯತ್‌ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತತ್ಸಮಾನ ವಿದ್ಯಾರ್ಹತೆ ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

    ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗೆ ನೀಡಲಾಗಿದೆ.
    ಸಾಮಾನ್ಯ ವರ್ಗ -35 ವರ್ಷ, 2ಎ,2ಬಿ,3ಎ,3ಬಿ 38 ವರ್ಷ, ಪ.ಜಾ/ಪ.ಪಂ/ಪ್ರ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500, ಪ್ರವರ್ಗ 2(ಎ),2(ಬಿ),3(ಎ),3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.200, ಎಲ್ಲಾ ವಿಧಗಳ ವಿಕಲಚೇತನ/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ಪಾವತಿ ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು, ಮುಖ್ಯ ಲೆಕ್ಕಾಧಿಕಾರಿ, ಜಿಲ್ಲಾ ಪಂಚಾಯತ್‌ ಹಾಸನ ಇವರ ಬ್ಯಾಂಕ್‌ ಖಾತೆಗೆ ಜಮಾ ಮಾಡಬೇಕು. ಅಥವಾ ಅಧಿಸೂಚನೆಯಲ್ಲಿ ನೀಡಲಾಗಿರುವ QR ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.

    ವೇತನ: ಗ್ರಾಮಪಂಚಾಯತ್‌ ಗ್ರಂಥಾಲಯ ಮೇಲ್ಚಿಚಾರಕರಿಗೆ ಪ್ರತಿ ಮಾಹಿ ಮಾಸಿಕ ಕನಿಷ್ಠ ವೇತನ ರೂ.15196.72/- ಹಾಗೂ ಕನಿಷ್ಠ ವೇತನ ಜೊತೆಗೆ ಕಾರ್ಮಿಕ ಇಲಾಖೆ ಕಾಲ ಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿಭತ್ಯೆಯನ್ನು (VDA) ಪಾವತಿಸಲಾಗುವುದು.

    ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್‌ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ಕ್ಲಿಕ್‌ ಮಾಡಿ

  • Bank Jobs: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 3000 ಹುದ್ದೆಗಳು; ಅರ್ಜಿ ಸಲ್ಲಿಸಲು ಮಾರ್ಚ್‌ 06, 2024 ಕೊನೆ ದಿನ

    Bank Jobs: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 3000 ಹುದ್ದೆಗಳು; ಅರ್ಜಿ ಸಲ್ಲಿಸಲು ಮಾರ್ಚ್‌ 06, 2024 ಕೊನೆ ದಿನ

    Central Bank Of India Recruitment 2024: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಹುದ್ದೆ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್‌. ಹೌದು, ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 21-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-03-2024
    ಆನ್‌ ಲೈನ್‌ ಪರೀಕ್ಷಾ ದಿನಾಂಕ: 10-03-2024

    ವಯೋಮಿತಿ: ಅಭ್ಯರ್ಥಿಯು 01.04.1996 ರಿಂದ 31.03.2004 ರ ನಡುವೆ ಜನಿಸಿರಬೇಕು. SC/ST/OBC/PWBD ಇತ್ಯಾದಿ ವರ್ಗಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನಿಯಮಗಳು ಭಾರತದ ಮಾರ್ಗಸೂಚಿಗಳು ಅನ್ವಯವಾಗುತ್ತವೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ-5 ವರ್ಷಗಳು
    ಇತರೆ ಹಿಂದುಳಿದ ವರ್ಗಗಳು – 8 ವರ್ಷಗಳು ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆಯ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್‌ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

    ಸ್ಟೈಫಂಡ್‌ ವಿವರ: ಗ್ರಾಮೀಣ/ಅರೆ-ನಗರ ಶಾಖೆಗಳು-ರೂ.15,000
    ನಗರ ಶಾಖೆಗಳು-ರೂ.15,000
    ಮೆಟ್ರೋ ಶಾಖೆಗಳು-ರೂ.15,000
    ಅಪ್ರೆಂಟಿಸ್‌ಗಳು ಯಾವುದೇ ಇತರ ಭತ್ಯೆಗಳು/ಸವಲತ್ತುಗಳಿಗೆ ಅರ್ಹರಾಗಿರುವುದಿಲ್ಲ.

    ಅರ್ಜಿ ಶುಲ್ಕ: PwBD ಅಭ್ಯರ್ಥಿಗಳಿಗೆ ರೂ.400/-, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಎಲ್ಲಾ ಮಹಿಳಾ ಅಭ್ಯರ್ಥಿಗಳು/EWS ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.600 ರೂಪಾಯಿ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಇತರೆ ಅಭ್ಯರ್ಥಿಗಳಿಗೆ ರೂ. 800 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ www.nats.education.gov.in ನಲ್ಲಿ ಅಪ್ರೆಂಟ್ಶಿಪ್‌ ಪೋರ್ಟಲ್‌ಗೆ ಭೇಟಿ ನೀಡಬೇಕು.
    ಅನಂತರ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಪ್ರೆಂಟಿಶಿಪ್‌ ನ ಆನ್‌ಲೈನ್‌ ಅರ್ಜಿಯ ಲಿಂಕ್‌ ಕ್ಲಿಕ್‌ ಮಾಡಿ
    ಅಭ್ಯರ್ಥಿಗಳು ಮೊದಲು ಅಪ್ರೆಂಟಿಶಿಪ್‌ ಪೋರ್ಟಲ್‌ಗೆ ಲಾಗಿನ್‌ ಆಗಬೇಕು.
    ಅಲ್ಲಿ ನೀವು ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸುವುದಕ್ಕೆ ನ್ಯಾವಿಗೇಟ್‌ ಮಾಡಿ
    ನಂತರ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಪ್ರೆಂಟಿಶಿಪ್‌ ಬಟನ್‌ ಕ್ಲಿಕ್‌ ಮಾಡಬೇಕು. ನಂತರ ಆಕ್ಷನ್‌ ಕಾಲಮ್‌ನಲ್ಲಿ ಅಪ್ಲೈ ಬಟನ್‌ ಇರುತ್ತದೆ. ಅದನ್ನು ಆಯ್ಕೆ ಮಾಡಬೇಕು.

    ಅಭ್ಯರ್ಥಿಗಳು ನೋಟಿಫಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • Home Guards Jobs: ನೂತನ ಸ್ವಯಂ ಸೇವಕ ಗೃಹರಕ್ಷರ ಹುದ್ದೆಗಳು ಖಾಲಿ; ಅರ್ಜಿ ಆಹ್ವಾನ, ಎಸ್‌.ಎಸ್‌.ಎಲ್‌.ಸಿ ಪಾಸಾದವರಿಗೆ ಆದ್ಯತೆ

    Home Guards Jobs: ನೂತನ ಸ್ವಯಂ ಸೇವಕ ಗೃಹರಕ್ಷರ ಹುದ್ದೆಗಳು ಖಾಲಿ; ಅರ್ಜಿ ಆಹ್ವಾನ, ಎಸ್‌.ಎಸ್‌.ಎಲ್‌.ಸಿ ಪಾಸಾದವರಿಗೆ ಆದ್ಯತೆ

    Uttara kannada District Home Guards Recruitment 2024: ಉತ್ತರಕನ್ನಡ ಜಿಲ್ಲಾ ಗೃಹರಕ್ಷದ ದಳದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಾರವಾರ, ಚೆಂಡಿಯಾ, ಮಲ್ಲಾಪುರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೊಯಿಡಾ ಘಟಕ, ಉಪಘಟಕಗಳಲ್ಲಿ ಗೃಹರಕ್ಷಕ, ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 202 ಹುದ್ದೆಗಳಿದ್ದು, ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸ ಬಹುದು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20-02-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-02-2024 ರವರೆಗೆ ಜಿಲ್ಲಾ ಸಮಾದೇಷ್ಟರ ಕಚೇರಿ, ಗೃಹರಕ್ಷಕದಳ, ಸರ್ವೋದಯ ನಗರ ದಿವೇಕರ್‌, ಕಾಮರ್ಸ ಕಾಲೇಜು ಎದುರಿಗೆ, ಕೋಡಿಬಾಗ, ಕಾರವಾರದಲ್ಲಿ ಅರ್ಜಿಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಹತ್ತನೇ ತರಗತಿಯ ಅಂಕಪಟ್ಟಿ ದೃಡೀಕೃತ ಪ್ರತಿ, ಆಧಾರ್‌ ಕಾರ್ಡ್‌ ಪ್ರತಿಯನ್ನು ತೋರಿಸಿ ಅರ್ಜಿ ಪಡೆದುಕೊಳ್ಳಲು ಸೂಚಿಸಲಾಗಿದೆ.

    ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಕನಿಷ್ಠ 19 ವರ್ಷ, ಹಾಗೂ ಗರಿಷ್ಠ 50 ಆಗಿರಬೇಕು.

    ಎತ್ತರ ಕನಿಷ್ಠ 163 ಸೆಂ.ಮೀ ಪುರುಷರಿಗೆ, 150 ಸೆಂ.ಮೀ. ಮಹಿಳೆಯರಿಗೆ ಇರಬೇಕು.

    ವಿದ್ಯಾರ್ಹತೆ: 10 ನೇ ತರಗತಿ ಉತ್ತೀರ್ಣ ಹೊಂದಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

    ಆದ್ಯತೆ: ಕೌಶಲ್ಯ ತರಬೇತಿ (ಕಂಪ್ಯೂಟ್‌ ಜ್ಞಾನ, ಹೆವಿ ಡ್ರೈವಿಂಗ್‌ ಲೈಸೆನ್ಸ್‌, ಅಡುಗೆ ಭಟ್ಟರು, ಮೆಕಾನಿಕ್‌, ಪೈಂಟರ್‌ ಮತ್ತು ಪ್ಲಂಬರ್)‌, ಎನ್‌.ಸಿ.ಸಿ. ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

    ವೇತನ: ಗೃಹರಕ್ಷಕ ದಳ ಸಂಸ್ಥೆಯು ಸ್ವಯಂ ಸೇವಕ ಸಂಸ್ಥೆಯಾಗಿದ್ದು, ಇದು ಖಾಯಂ ನೌಕರಿಯಾಗುವುದಿಲ್ಲ. ಮತ್ತು ಯಾವುದೇ ರೀತಿಯ ಮಾಸಿಕ ಸಂಬಳ/ವಿಶೇಷ ಭತ್ಯೆಗಳನ್ನು ಈ ಸಂಸ್ಥೆ ನೀಡುವುದಿಲ್ಲ. ಸರಕಾರವು ನಿಗದಿ ಪಡಿಸಿರುವ ಗೌರವ ಧನವನ್ನು ಕರ್ತುವ್ಯ ನಿರ್ವಹಿಸುವ ಅವಧಿಗೆ ಮಾತ್ರ ಪಾವತಿ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಗಳನ್ನು ಪಡೆದುಕೊಂಡು ಅಲ್ಲಿ ಕೇಳಲಾದ ವಿವರಗಳನ್ನು ಭರ್ತಿ ಮಾಡಿ ಪತ್ರಾಂಕಿತ ಅಧಿಕಾರಿಗಳಿಂಂದ ದೃಢೀಕರಿಸಲ್ಪಟ್ಟ ಆಧಾರ್‌ ಕಾರ್ಡ್‌ ಪ್ರತಿ, ಎಸ್‌.ಎಸ್‌.ಎಲ್‌.ಸಿ. ಅಂಕಪಟ್ಟಿಯ ನಕಲು ಪ್ರತಿ ಮತ್ತು ತಾಲೂಕಾ ವೈದ್ಯಾಧಿಕಾರಿಗಳಿಂದ ದೈಹಿಕ ಸಧೃಡತೆ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಸಲ್ಲಿಸಬೇಕು. ಅಪರಾಧಿ ಹಿನ್ನೆಲೆ ಉಳ್ಳವರು ಅರ್ಜಿ ಸಲ್ಲಿಸುವಂತಿಲ್ಲ.

    ಅರ್ಜಿ ಸಲ್ಲಿಸಲು 28-02-2024 ರ ಸಂಜೆ 5 ಗಂಟೆ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾ ಗೃಹರಕ್ಷಕ ದಳ ಕಚೇರಿ ಕಾರವಾರ, ಸಂಪರ್ಕ ಸಂಖ್ಯೆ 0832-200137/226361 ನ್ನು ಸಂಪರ್ಕಿಸಲು ಸೂಚಿಸಲಾಗಿದೆ.