Tag: Government Job

  • Job Alerts: ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಪಾಸಾದವರಿಗೆ ಆದ್ಯತೆ

    Job Alerts: ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಪಾಸಾದವರಿಗೆ ಆದ್ಯತೆ

    NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಸಬ್‌ ಇನ್ಸ್‌ಪೆಕ್ಟರ್‌ ಪೋಸ್ಟ್‌ ಗೆ ಆಸಕ್ತಿ ಇರುವ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಖಿಲ ಭಾರತ ಸರ್ಕಾರದಲ್ಲಿ ಪೋಸ್ಟಿಂಗ್‌ ನಡೆಯಲಿದೆ. ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ದಿ.16-Jul-2024 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 17-05-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 16-07-2024

    ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲ್ಲಿ ಖಾಲಿ ಇರುವ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.9300-34800/- ವೇತನ ದೊರಕಲಿದೆ. ಭಾರತದಾದ್ಯಂತ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಿದ್ಯಾರ್ಹತೆ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ತೇರ್ಗಡೆ ಹೊಂದಿರಬೇಕು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 16-ಜುಲೈ-2024 ರಂತೆ 56 ವರ್ಷಗಳನ್ನು ಮೀರಿರಬಾರದು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.
    ವಿಳಾಸ ಇಲ್ಲಿದೆ;
    Director (Admn.), Narcotics Control Bureau, 2nd Floor, August Kranti Bhawan, Bhikaji Cama Place, New Delhi-110066 ಇಲ್ಲಿಗೆ 16-07-2024 ದಿನಾಂಕದೊಳಗೆ ತಲುಪಬೇಕು.

  • IAF Recritment 2024: ಭಾರತೀಯ ವಾಯುಪಡೆಯಲ್ಲಿ ಉದ್ಯೋಗ ಹುಡುಕುವವರಿಗೆ ಸುವರ್ಣಾವಕಾಶ; 304 ವಿವಿಧ ಹುದ್ದೆಗಳು, ಮಾಸಿಕ ಲಕ್ಷಕ್ಕೂ ಹೆಚ್ಚು ಸಂಬಳ

    IAF Recritment 2024: ಭಾರತೀಯ ವಾಯುಪಡೆಯಲ್ಲಿ ಉದ್ಯೋಗ ಹುಡುಕುವವರಿಗೆ ಸುವರ್ಣಾವಕಾಶ; 304 ವಿವಿಧ ಹುದ್ದೆಗಳು, ಮಾಸಿಕ ಲಕ್ಷಕ್ಕೂ ಹೆಚ್ಚು ಸಂಬಳ

    IAF Recritment2024: ಭಾರತೀಯ ವಾಯುಪಡೆಯಲ್ಲಿ (IAF) ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 304 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಕಮಿಷನ್ಡ್ ಆಫೀಸರ್ ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅಖಿಲ ಭಾರತ ಸರ್ಕಾರದಲ್ಲಿ ಪೋಸ್ಟಿಂಗ್‌ ನಡೆಯಲಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಲು ದಿನಾಂಕ 28-Jun-2024 ಕೊನೆಯ ದಿನವಾಗಿದ್ದು, ಇದಕ್ಕೂ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 30-05-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-06-2024

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಇಂಡಿಯನ್ ಏರ್ ಫೋರ್ಸ್ (IAF) ಕಮಿಷನ್ಡ್‌ ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 304 ಹುದ್ದೆಗಳ ಭರ್ತಿ ನಡೆಯಲಿದೆ. ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.56100-177500/- ವೇತನ ಸಿಗಲಿದೆ.

    ಹುದ್ದೆಯ ಹೆಸರು ಮತ್ತು ಪೋಸ್ಟ್‌ಗಳ ಸಂಖ್ಯೆ
    ಫ್ಲೈಯಿಂಗ್ ಬ್ರಾಂಚ್ – 29 ಹುದ್ದೆಗಳು
    ಗ್ರೌಂಡ್ ಡ್ಯೂಟಿ (ತಾಂತ್ರಿಕ) – 156 ಹುದ್ದೆಗಳು
    ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ)- 119 ಹುದ್ದೆಗಳು

    ವಿದ್ಯಾರ್ಹತೆ: ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳಿಗೆ IAF ಮಾನದಂಡಗಳ ಪ್ರಕಾರ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ವಯೋಮಿತಿ:
    ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-24 ವರ್ಷದೊಳಗಿರಬೇಕು.
    ಗ್ರೌಂಡ್ ಡ್ಯೂಟಿ (ತಾಂತ್ರಿಕ), ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 20-26 ವರ್ಷದೊಳಗಿರಬೇಕು.
    ಭಾರತೀಯ ವಾಯುಪಡೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯಿಸಲಾಗುತ್ತದೆ.

    ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.550/-ನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬೇಕು. ಬೇರೆ ಯಾವುದೇ ವಿಧಾನದಿಂದ ಪಾವತಿ ಮಾಡಬಾರದು.

    ಆಯ್ಕೆ ಪ್ರಕ್ರಿಯೆ: ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ವೇತನ:
    ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100-177500/- ವೇತನ ಇರಲಿದೆ.
    ಗ್ರೌಂಡ್ ಡ್ಯೂಟಿ (ತಾಂತ್ರಿಕ), ಗ್ರೌಂಡ್ ಡ್ಯೂಟಿ (ತಾಂತ್ರಿಕವಲ್ಲದ) ಹುದ್ದೆಗೆ ಆಯ್ಕೆಯಾದವರಿಗೆ IAF ಮಾನದಂಡಗಳ ಪ್ರಕಾರ ವೇತನ ನಿಗದಿಪಡಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • NIMHANS Recruitment 2024: ಡಾಟಾ ಎಂಟ್ರಿ ಅಪರೇಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ರೂ.18 ಸಾವಿರ ಸಂಬಳ, ಈ ಕೂಡಲೇ ಅಪ್ಲೈ ಮಾಡಿ

    NIMHANS Recruitment 2024: ಡಾಟಾ ಎಂಟ್ರಿ ಅಪರೇಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ರೂ.18 ಸಾವಿರ ಸಂಬಳ, ಈ ಕೂಡಲೇ ಅಪ್ಲೈ ಮಾಡಿ

    NIMHANS Recruitment 2024: ನಿಮ್ಹಾನ್ಸ್‌ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಡೇಟಾ ಎಂಟ್ರಿ ಅಪರೇಟರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಫೆ.23, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್‌ ನಡೆಯಲಿದೆ.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 09-02-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-02-2024

    ಹುದ್ದೆ ಹೆಸರು: ನಿಮ್ಹಾನ್ಸ್‌ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಅಪರೇಟರ್‌ (DEO) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ: 01 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ: ನಿಮ್ಹಾನ್ಸ್‌ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೋಗಿಗಳು ಮತ್ತು ಡೇಟಾ ಎಂಟ್ರಿ (ಜಿಸಿಪಿ ತರಬೇತಿ, ಕ್ಲಿನಿಕಲ್‌ ರಿಸರ್ಚ್‌ ಎಕ್ಸ್‌ಪೋಸರ್‌) ಒಳಗೊಂಡ ಆರು ತಿಂಗಳ ಸಂಶೋಧನಾ ಅನುಭವವನ್ನು ಹೊಂದಿರಬೇಕು.

    ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 40 ವರ್ಷ ಮೀರಿರಬಾರದು.

    ಆಯ್ಕೆ ವಿಧಾನ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಡಾಟಾ ಎಂಟ್ರಿ ಅಪರೇಟರ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,000 ವೇತನ ದೊರಕಲಿದೆ.

    ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆಫ್‌ಲೈನ್‌/ಪೋಸ್ಟ್‌ ಮೂಲಕ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ The Director, NIMHANS, P.B. No. 2900, D.R.College Post, Hosur Road. Bengaluru-560 029 ಇಲ್ಲಿಗೆ ಕಳುಹಿಸಬೇಕು. ಅಥವಾ [email protected] ಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಅಧಿಸೂಚನೆ ಸಂಖ್ಯೆ, ದಿನಾಂಕ, ಇಮೇಲ್ ಐಡಿ, ಸಂಪರ್ಕ ಸಂಖ್ಯೆ ಮತ್ತು ಅಂಚೆ ವಿಳಾಸವನ್ನು ನಮೂದಿಸಬೇಕು, ಇಲ್ಲದಿದ್ದರೆ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಸಂಬಂಧಿತ ದಾಖಲೆಗಳೊಂದಿಗೆ ಅರ್ಜಿಗಳನ್ನು ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • Cochin Shipyard Limited Recruitment 2024: ಉಡುಪಿಯಲ್ಲಿ ಉದ್ಯೋಗಾವಕಾಶ; ಮಾಸಿಕ 1 ಲಕ್ಷಕ್ಕೂ ಮೀರಿದ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

    Cochin Shipyard Limited Recruitment 2024: ಉಡುಪಿಯಲ್ಲಿ ಉದ್ಯೋಗಾವಕಾಶ; ಮಾಸಿಕ 1 ಲಕ್ಷಕ್ಕೂ ಮೀರಿದ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

    Cochin Shipyard Limited Recruitment 2024: ಕೇಂದ್ರ ಸರಕಾರದ ಹುದ್ದೆ ಹುಡುಕುವವರಿಗೆ ಇದೊಂದು ಸುವರ್ಣಾವಕಾಶ. ಹೌದು, ಕೊಚ್ಚಿನ ಶಿಪ್‌ಯಾರ್ಡ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಿಂದಿ ಟ್ರಾನ್ಸ್‌ಲೇಟರ್‌ ಹುದ್ದೆಯ ಭರ್ತಿಗೆ ನೇಮಕಾತಿ ನಡೆಯಲಿದ್ದು, ಫೆ.26, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಈ ಹುದ್ದೆಯ ಪೋಸ್ಟಿಂಗ್‌ ಉಡುಪಿಯಲ್ಲಿ ನೀಡಲಾಗುತ್ತದೆ.

    ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ಹುದ್ದೆಯ ಕುರಿತು ಹೆಚ್ಚಿನ ಮಾಹಿತಿ ಅಂದರೆ ವೇತನ, ಅರ್ಜಿ ಶುಲ್ಕ, ವಯೋಮಿತಿ ಇತ್ಯಾದಿ ತಿಳಿದುಕೊಳ್ಳುವುದು ಮುಖ್ಯ. ಈ ಕೆಳಗೆ ಹುದ್ದೆಯ ಕುರಿತ ಮಾಹಿತಿಯನ್ನು ಸವಿವರವಾಗಿ ನೀಡಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 05-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-02-2024

    ವೇತನ: ಈ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ 28,000 ರೂ.-ರೂ.1,10,000 ವೇತನವಿರುತ್ತದೆ.

    ಹುದ್ದೆ: ಹಿಂದಿ ಟ್ರಾನ್ಸ್‌ಲೇಟರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
    ಹುದ್ದೆ ಸಂಖ್ಯೆ: 01 ಹುದ್ದೆ

    ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿಯಲ್ಲಿ ಇಂಗ್ಲಿಷ್ ಕಡ್ಡಾಯ ಆಯ್ಕೆ ವಿಷಯವಾಗಿ ಪಡೆದಿರಬೇಕು. ಹಾಗೂ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಅನುವಾದದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಹೊಂದಿರಬೇಕು.

    ಅನುಭವ: ಕೇಂದ್ರ/ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇಂಗ್ಲಿಷ್‌ನಿಂದ ಹಿಂದಿಗೆ ಭಾಷಾಂತರದಲ್ಲಿ ಐದು ವರ್ಷಗಳ ಅನುಭವ ಹೊಂದಿರುವವರಿಗೆ ಆದ್ಯತೆ.

    ವಯೋಮಿತಿ: ಕೊಚ್ಚಿನ್‌ ಶಿಪ್‌ಯಾರ್ಡ್‌ ಲಿಮಿಟೆಡ್‌ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯಸ್ಸು 45 ವರ್ಷ ಮೀರಿರಬಾರದು. PwBD ಅಭ್ಯರ್ಥಿಗಳಿಗೆ ಹತ್ತು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಪವರ್‌ ಪಾಯಿಂಟ್‌ ಪ್ರೆಸೆಂಟೇಶನ್‌, ಸಂದರ್ಶನದ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಕೊಚ್ಚಿನ್‌ ಶಿಪ್‌ ಯಾರ್ಡ್‌ ಲಿಮಿಟೆಡ್‌ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಪ್ಲೈ ಮಾಡಲು ತಿಳಿಸಲಾಗಿದೆ. ಈ ಲಿಂಕ್‌ ಕ್ಲಿಕ್‌ ಮಾಡುವ ಮೂಲಕ ಅಭ್ಯರ್ಥಿಗಳು ನೇರವಾಗಿ ಅಪ್ಲೈ ಮಾಡಬಹುದು.

    ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಅಂಚೆ ಮೂಲಕ ಸಂದರ್ಶನದ ಲೆಟರ್‌ ಕಳುಹಿಸಲಾಗುವುದಿಲ್ಲ. ಇ-ಮೇಲ್ ಮೂಲಕ ತಿಳಿಸಲಾಗುವುದು. ಆಯ್ಕೆಯ ವೇಳಾಪಟ್ಟಿಯನ್ನು ಇ-ಮೇಲ್/CSL ವೆಬ್‌ಸೈಟ್ www.cochinshipyard.in ಮೂಲಕ ಶಾರ್ಟ್‌ಲಿಸ್ಟ್ ಮಾಡಿದ ಅರ್ಜಿದಾರರಿಗೆ ತಿಳಿಸಲಾಗುತ್ತದೆ. ಆಯ್ಕೆಗೆ ಸಂಬಂಧಿಸಿದ ಕುರಿತ ಎಲ್ಲಾ ಮಾಹಿತಿಗಳನ್ನು ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ ಮೂಲಕ ಆಗಾಗ್ಗೆ ಪರಿಶೀಲಿಸಲು ವಿನಂತಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ