Tag: hal jobs

  • HAL ಸಂಸ್ಥೆಯಲ್ಲಿ ಇಂಜಿನಿಯರ್‌ ಹುದ್ದೆಗೆ ಅರ್ಜಿ ಆಹ್ವಾನ; 16 ಹುದ್ದೆಗಳು ಖಾಲಿ ಇದೆ, ಭರ್ಜರಿ ವೇತನ

    HAL ಸಂಸ್ಥೆಯಲ್ಲಿ ಇಂಜಿನಿಯರ್‌ ಹುದ್ದೆಗೆ ಅರ್ಜಿ ಆಹ್ವಾನ; 16 ಹುದ್ದೆಗಳು ಖಾಲಿ ಇದೆ, ಭರ್ಜರಿ ವೇತನ

    HAL India Recruitment 2024: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 16 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇಂಜಿನಿಯರ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಹುದ್ದೆಯ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಮಾಡಲಿಚ್ಛಿಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು 07-Jun-2024 ಕೊನೆಯ ದಿನಾಂಕವಾಗಿದ್ದು. ಅದರೊಳಗೆ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 29-05-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 07-06-2024

    ಹುದ್ದೆಯ ಕುರಿತ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ಇಂಡಿಯಾ) ಇಲ್ಲಿ ಇಂಜಿನಿಯರ್‌ ಹುದ್ದೆ ಖಾಲಿ ಇದ್ದು, ಒಟ್ಟು 16 ಪೋಸ್ಟ್‌ಗಳಿಗೆ ಭರ್ತಿ ನಡೆಯಲಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 – 60,000/- ವೇತನ ದೊರಕಲಿದೆ.

    ಹುದ್ದೆ ಹೆಸರು ಮತ್ತು ಸಂಖ್ಯೆ:
    CMM (ಹಂತ5) ಇಂಜಿನಿಯರ್ 4 ಹುದ್ದೆಗಳು
    ಮಧ್ಯಮ ತಜ್ಞ 6 ಹುದ್ದೆಗಳು
    ಜೂನಿಯರ್ ಸ್ಪೆಷಲಿಸ್ಟ್ 6 ಹುದ್ದೆಗಳು

    ವಿದ್ಯಾರ್ಹತೆ: HAL ಭಾರತದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ, BE/ B.Tech ತೇರ್ಗಡೆ ಹೊಂದಿರಬೇಕು.

    ವೇತನ:
    CMM (ಹಂತ5) ಎಂಜಿನಿಯರ್ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 60,000/- ವೇತನವಿರಲಿದೆ.
    ಮಧ್ಯಮ ತಜ್ಞ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000/- ಸಂಬಳವಿರಲಿದೆ.
    ಜೂನಿಯರ್ ಸ್ಪೆಷಲಿಸ್ಟ್ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000/- ವೇತನ ಸಿಗಲಿದೆ.

    ವಯೋಮಿತಿ:
    CMM (ಹಂತ5) ಇಂಜಿನಿಯರ್ – 45 ವರ್ಷ ಮೀರಿರಬಾರದು.
    ಮಧ್ಯಮ ತಜ್ಞ 40 ವರ್ಷ ಮೀರಿರಬಾರದು.
    ಜೂನಿಯರ್ ಸ್ಪೆಷಲಿಸ್ಟ್ 35 ವರ್ಷ ಮೀರಿರಬಾರದು.

    ವಯೋಮಿತಿ ಸಡಿಲಿಕೆ:
    OBC ಅಭ್ಯರ್ಥಿಗಳಿಗೆ 3 ವರ್ಷ, PWBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಎಲ್ಲಾ ಇತರ ಅಭ್ಯರ್ಥಿಗಳಿಗೆ ರೂ. 500/-, SC/ST/PwB ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರವೇ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

    ಆಯ್ಕೆ ಪ್ರಕ್ರಿಯೆ: HAL ನಲ್ಲಿ ಇಂಜಿನಿಯರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

  • HAL Jobs: ಬೆಂಗಳೂರು ಎಚ್‌ಎಎಲ್‌ ನಲ್ಲಿ ಉದ್ಯೋಗ; ಕೈ ತುಂಬಾ ಸಂಬಳ, ಕೂಡಲೇ ಅರ್ಜಿ ಸಲ್ಲಿಸಿ

    HAL Jobs: ಬೆಂಗಳೂರು ಎಚ್‌ಎಎಲ್‌ ನಲ್ಲಿ ಉದ್ಯೋಗ; ಕೈ ತುಂಬಾ ಸಂಬಳ, ಕೂಡಲೇ ಅರ್ಜಿ ಸಲ್ಲಿಸಿ

    HAL India Recruitment 2024: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೈದ್ಯಕೀಯ ಅಧಿಕಾರಿ, ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 13-ಮೇ-2024 ರಂದು ಅಥವಾ ಮೊದಲು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-04-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-05-2024

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಲ್ಲಿ ಖಾಲಿ ಇರುವ 04 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಇಲ್ಲಿ ಅರ್ಜಿ ಸಲ್ಲಿಸಬಹುದು. ವೈದ್ಯಕೀಯ ಅಧಿಕಾರಿ, ಹಿರಿಯ ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿ ನಡೆಯಲಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.40000-160000/- ವೇತನ ಸಿಗಲಿದೆ.

    ಹುದ್ದೆ ಹೆಸರು ಮತ್ತು ಸಂಖ್ಯೆ:
    ಹಿರಿಯ ವೈದ್ಯಾಧಿಕಾರಿ – 3 ಹುದ್ದೆ
    ವೈದ್ಯಕೀಯ ಅಧಿಕಾರಿ – 1 ಹುದ್ದೆ

    ವಿದ್ಯಾರ್ಹತೆ:
    ಹಿರಿಯ ವೈದ್ಯಕೀಯ ಅಧಿಕಾರಿ: MBBS, M.D, M.S, DNB, DLO, ಸ್ನಾತಕೋತ್ತರ ಪದವಿ ಮಾಡಿರಬೇಕು.
    ವೈದ್ಯಕೀಯ ಅಧಿಕಾರಿ: ಎಂಬಿಬಿಎಸ್ ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: ಹಿರಿಯ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 45ವರ್ಷ ಮೀರಿರಬಾರದು.
    ವೈದ್ಯಕೀಯ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು 35ವರ್ಷ ಮೀರಿರಬಾರದು. OBC (NCL) ಅಭ್ಯರ್ಥಿಗಳಿಗೆ 03 ವರ್ಷ, PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : SC/ST/PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಎಲ್ಲಾ ಇತರ ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕ ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಹಿರಿಯ ವೈದ್ಯಾಧಿಕಾರಿ (ಪ್ರತಿ ತಿಂಗಳಿಗೆ) ರೂ.50000-160000/- ವೇತನ ನೀಡಲಾಗುವುದು.
    ವೈದ್ಯಾಧಿಕಾರಿ ( ಪ್ರತಿ ತಿಂಗಳಿಗೆ) ರೂ.40000-140000/- ವೇತನ ನೀಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗೆ ನೀಡಲಾದ ವಿಳಾಸಕ್ಕೆ 13-ಮೇ-2024 ಅಥವಾ ಮೊದಲು ಕಳುಹಿಸಬೇಕು.
    ವಿಳಾಸ: Chief Manager (HR)
    Hindustan Aeronautics Limited,
    Industrial Health Center,
    Suranjandas Road,
    Vimanapura Post,
    Bangalore – 560017

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • HAL Recruitment 2024: ಹೆಚ್‌ಎಎಲ್‌ನಲ್ಲಿ 160 ಡಿಪ್ಲೋಮಾ, ಏರ್‌ಕ್ರಾಫ್ಟ್ ತಂತ್ರಜ್ಞರ ಹುದ್ದೆಗೆ ನೇಮಕಾತಿ; ಮಾಸಿಕ ರೂ.57,000 ವೇತನ

    HAL Recruitment 2024: ಹೆಚ್‌ಎಎಲ್‌ನಲ್ಲಿ 160 ಡಿಪ್ಲೋಮಾ, ಏರ್‌ಕ್ರಾಫ್ಟ್ ತಂತ್ರಜ್ಞರ ಹುದ್ದೆಗೆ ನೇಮಕಾತಿ; ಮಾಸಿಕ ರೂ.57,000 ವೇತನ

    HAL India Recruitment 2024: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 160 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಮತ್ತು ಏರ್‌ಕ್ರಾಫ್ಟ್ ತಂತ್ರಜ್ಞರ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ಸರ್ಕಾರದಲ್ಲಿ ಉದ್ಯೋಗ ಹುಡುಕಲು ಇಚ್ಛಿಸುವವರು ಅರ್ಜಿ ಸಲ್ಲಿಸಲು ಉತ್ತಮ ಅವಕಾಶ. ಆಸಕ್ತ ಅಭ್ಯರ್ಥಿಗಳು 16-Mar-2024 ರಂದು ಅಥವಾ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-03-2024
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-ಮಾರ್ಚ್-2024
    ಲಿಖಿತ ಪರೀಕ್ಷೆಯ ತಾತ್ಕಾಲಿಕ ದಿನಾಂಕ: 24-ಮಾರ್ಚ್-2024

    ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
    ಹುದ್ದೆ ಹೆಸರು: ಡಿಪ್ಲೊಮಾ ಮತ್ತು ವಿಮಾನ ತಂತ್ರಜ್ಞರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ: ಡಿಪ್ಲೊಮಾ ಟೆಕ್ನಿಷಿಯನ್‌ ಗೆ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 137 ಹುದ್ದೆಗಳು ಖಾಲಿ ಇದೆ. ಮತ್ತು ವಿಮಾನ ತಂತ್ರಜ್ಞರು ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 23 ಹುದ್ದೆಗಳು ಖಾಲಿ ಇದೆ.

    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23000-57000/- ವೇತನ ದೊರಕಲಿದೆ.

    ವಿದ್ಯಾರ್ಹತೆ: ಡಿಪ್ಲೊಮಾ ತಂತ್ರಜ್ಞರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಸಿಇ/ಇಇಇ/ಮೆಕ್ಯಾನಿಕಲ್‌ನಲ್ಲಿ ಡಿಪ್ಲೊಮಾ ತೇರ್ಗಡೆ ಹೊಂದಿರಬೇಕು. ಏರ್‌ಕ್ರಾಫ್ಟ್ ಟೆಕ್ನಿಷಿಯನ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಇನ್ ಎಲೆಕ್ಟ್ರಿಕಲ್/ಮೆಕ್ಯಾನಿಕಲ್ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಗರಿಷ್ಠ ವಯಸ್ಸು 31-ಡಿಸೆಂಬರ್-2023 ರಂತೆ 28 ವರ್ಷಗಳನ್ನು ಮೀರಿರಬಾರದು. OBC-NCL- 03 ವರ್ಷ, SC/ST 05 ವರ್ಷ, PwBD (ಸಾಮಾನ್ಯ) 10 ವರ್ಷ, PwBD (OBC) 13 ವರ್ಷ, PwBD (SC/ST) 15 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಉದ್ಯೋಗ ಪೂರ್ವ ವೈದ್ಯಕೀಯ ಪರೀಕ್ಷೆ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಮೇಲ್ಕಂಡ ಹುದ್ದೆಗೆ ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ಲಿಂಕ್‌ ಕ್ಲಿಕ್‌ ಮಾಡಿ;