Tag: Hassan anganawadi helper and worker post

  • ಹಾಸನ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗವಕಾಶ

    ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 24 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಕ್ಟೋಬರ್ 13 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 14-09-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-10-202
    1

    ಹುದ್ದೆ ವಿವರ : ಅಂಗನವಾಡಿ ಕಾರ್ಯಕರ್ತೆ – 07
    ಅಂಗನವಾಡಿ ಸಹಾಯಕಿಯರು – 24

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ SSLC ಪಾಸ್ ಆಗಿರಬೇಕು.
    ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4 ನೇ ತರಗತಿ ಪಾಸ್ ಆಗಿರಬೇಕು. ಗರಿಷ್ಠ 9 ನೇ ತರಗತಿ ತೇರ್ಗಡೆ ಹೊಂದಿದವರು ಕೂಡಾ ಅರ್ಜಿ ಸಲ್ಲಿಸಬಹುದು.

    ಯಾವುದೇ ಹುದ್ದೆಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

    ವಯೋಮಿತಿ : ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

  • ಹಾಸನ ಅಂಗನವಾಡಿಯಲ್ಲಿ 109 ಹುದ್ದೆ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಜಿಲ್ಲೆಯ 8 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ‌ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ‌ಕೇಂದ್ರಗಳಲ್ಲಿ ಖಾಲಿಯಿರುವ 22 ಅಂಗನವಾಡಿ ಕಾರ್ಯಕರ್ತೆ ಯರು ಮತ್ತು 87 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆದೇಶ ಹೊರಡಿಸಿದೆ.

    ಆದೇಶ ಮತ್ತು ಮಾರ್ಗಸೂಚಿ ಪ್ರಕಾರ ಗೌರವಧನ ಸೇವೆಯ ಆಧಾರದಲ್ಲಿ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ‌ಆಹ್ವಾನಿಸಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-07-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-08-2021 ಗಂಟೆ 5.30

    ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು.

    ವಯೋಮಿತಿ ‌18 ರಿಂದ 35 ವರ್ಷ ( ಈ ಅಧಿಸೂಚನೆಯ ಕೊನೆಯ ದಿನಾಂಕಕ್ಕೆ 35 ವರ್ಷ ಮೀರಿರಬಾರದು, ಮತ್ತು ವಿಕಲಚೇತನ ‌ಅಭ್ಯರ್ಥಿಗಳಿಗೆ 10/ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಹಾಗೂ ಎಸ್ ಎಸ್ ಎಲ್ ಸಿ‌ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ ಮಾತ್ರ ಪರಿಗಣಿಸಲಾಗುವುದು.

    ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು.

    ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಉತ್ತೀರ್ಣರಾಗಿರಬೇಕು. ಗರಿಷ್ಠ 9 ನೇ ತರಗತಿಯವರೆಗೆ ತೇರ್ಗಡೆ ಯಾಗಿರಬೇಕು. 9 ನೇ ತರಗತಿಯಿಂದ ಹೆಚ್ಚಿನ ವಿದ್ಯಾರ್ಹತೆ ಹೊಂದಿದ್ದಲ್ಲಿ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

    ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಯು ವಿಧವೆ ಆದಲ್ಲಿ ‌ಪತಿಯ ಮರಣ ಪ್ರಮಾಣ ಪತ್ರ ಲಗತ್ತಿಸಬೇಕು. ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು ‌ಸಹಾಯಕಿ‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ‌ ಸಂಬಂಧಿಸಿದ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.

    ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಹುದ್ದೆಗೆ ವಿಕಲಚೇತನ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ.