Tag: Hescom

  • ಹೆಸ್ಕಾಂನಲ್ಲಿ 200 ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

    ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಬಿ.ಇ ಪದವಿ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಂದ 2021-22 ನೇ ಸಾಲಿಗೆ 200 ಶಿಶುಕ್ಷು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅ.20 ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿಯ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿದೆ ಮಾಹಿತಿ.

    ಬಿ.ಇ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಪಡೆದಿರಬೇಕು.

    ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೇಮಕಾತಿಯ ಶಿಶುಕ್ಷು ತರಬೇತಿಗಾಗಿ ಆಯ್ಕೆಯಾದ ಪದವಿ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.7000/- ರೂ ಮತ್ತು ಡಿಪ್ಲೋಮಾ ಅಭ್ಯರ್ಥಿಗಳಿಗೆ ರೂ.5000/- ಸ್ಟೈಫೆಂಡ್ ನ್ನು ನೀಡಲಾಗುವುದು.

    ಶಿಶಿಕ್ಷು ತರಬೇತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಿ ತದನಂತರ ಪ್ರವೇಶ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-10-2021

    ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ.