Tag: IOCL Recruitment

  • IOCL : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿ.27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

    ಭಾರತೀಯ ತೈಲ ನಿಗಮ ನಿಯಮಿತದಲ್ಲಿ ( IOCL) ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ : 300 ತಾಂತ್ರಿಕ ಹುದ್ದೆ.

    ಭಾರತದಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 10, 2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 27, 2021 ಸಂಜೆ 5 ಗಂಟೆಯೊಳಗೆ

    ಖಾಲಿ ಹುದ್ದೆಗಳ ವಿವರ :

    ತಾಂತ್ರಿಕೇತರ ಅಪ್ರೆಂಟಿಸ್ – 245 ಹುದ್ದೆಗಳು
    ತಾಂತ್ರಿಕ ಅಪ್ರೆಂಟಿಸ್ – 55 ಹುದ್ದೆಗಳು

    ಒಟ್ಟು ಹುದ್ದೆಗಳು – 300 ಹುದ್ದೆಗಳು

    ವಿದ್ಯಾರ್ಹತೆ : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ 10 ನೇ ತರಗತಿ/ ಮೆಟ್ರಿಕ್ಯುಲೇಷನ್ ಅಥವಾ ಐಟಿಐ ವಿದ್ಯಾರ್ಹತೆ, 12 ನೇ ತರಗತಿ, ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಒಬಿಸಿಯ ಗರಿಷ್ಠ 27 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಗರಿಷ್ಠ 29 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • IOCL ನಲ್ಲಿ ಉದ್ಯೋಗ : ಆನ್ಲೈನ್ ಮೂಲಕ‌ 469 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸಲು ಅ.25 ಕೊನೆಯ ದಿನಾಂಕ

    ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ( ಐಒಸಿಎಲ್) ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನಿಶಿಯನ್ ಅಪ್ರೆಂಟಿಸ್ ಮತ್ತು ಡಿಇಒ ಪೋಸ್ಟ್ ಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆಯ ಹೆಸರು : ಐಟಿಐ, ಡಿಪ್ಲೊಮಾ ಅಪ್ರೆಂಟಿಸ್

    ಹುದ್ದೆಗಳ ಸಂಖ್ಯೆ : 469

    ಟೆಕ್ನಿಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೊಮಾ ಪಾಸ್ ಮಾಡಿರಬೇಕು. ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಯಾವುದೇ ಡಿಗ್ರಿ ಪಾಸ್ ಮಾಡಿರಬೇಕು. ಡಿಇಒ ಮತ್ತು ಡೊಮೆಸ್ಟಿಕ್ ಡಿಇಒ ಹುದ್ದೆಗಳಿಗೆ ಪಿಯುಸಿ ತೇರ್ಗಡೆ ಹೊಂದಿರಬೇಕು.

    ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

    ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 05-10-2021

    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-10-2021

    ಲಿಖಿತ ಪರೀಕ್ಷೆ ದಿನಾಂಕ : 21-11-2021

    ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ದಿನಾಂಕ : ನವೆಂಬರ್ 5 ರಿಂದ 21, 2021

    ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ಶಿಕ್ಷಣದಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ, ಆಯ್ಕೆ ಮಾಡಲಾಗುತ್ತದೆ. ನಂತರ ಸಂದರ್ಶನ/ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

  • IOCL : ವಿವಿಧ ಹುದ್ದೆ, ಈ ಕೂಡಲೇ ಅರ್ಜಿ ಸಲ್ಲಿಸಿ

    ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಒಸಿಎಲ್) ನಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ 30, ಜೂನ್ 2021 ರೊಳಗೆ ಸಲ್ಲಿಸಬಹುದು.

    ಭೂಗರ್ಭ ಶಾಸ್ತ್ರ ಸಲಹೆಗಾರ : 1 ಹುದ್ದೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 65 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿಯಿಂದ ಜಿಯಾಲಜಿ ತೇರ್ಗಡೆ ಹೊಂದಿರಬೇಕು.ಅಭ್ಯರ್ಥಿಗಳಿಗೆ ಕನಿಷ್ಠ ಇಪ್ಪತ್ತು ವರ್ಷ ಪೆಟ್ರೋಲಿಯಂ ಎಕ್ಸ್‌ಪ್ಲೋರೇಷನ್ ನಲ್ಲಿ ಅನುಭವವಿರಬೇಕು.
    ಡ್ರಿಲ್ಲಿಂಗ್ ಇಂಜಿನಿಯರ್ ( ಕನ್ಸಲ್ಟೆಂಟ್ ) : 1 ಹುದ್ದೆ: ಹುದ್ದೆಯ ಸ್ಥಳ : ಡೆಲ್ಲಿ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 65 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಬಿಇ/ಬಿಟೆಕ್‌(ಮೆಕ್ಯಾನಿಕಲ್/ಪೆಟ್ರೋಲಿಯಂ ಇಂಜಿನಿಯರಿಂಗ್) ಡಿಗ್ರಿಯನ್ನು ಪಡೆದುಕೊಂಡಿರಬೇಕು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಇ-ಮೇಲ್ ಮಾಡಬೇಕು.
    ಇ-ಮೇಲ್ ವಿಳಾಸ : [email protected]

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2021
    ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    ಅಧಿಕೃತ ವೆಬ್‌ಸೈಟ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • IOCL Recruitment- 51 Junior Engineering Assistant Posts

    Company- Indian Oil Corporation Limited (IOCL)
    Job- Junior Engineering Assistant for Ex- Apprentices
    Last Date for apply : 13 December 2017
    Salary- Rs. 11900-32000/
    Educational Qualification- Diploma in
    relevant Engg. or BSc (Math, Physics, Chemistry or Industrial Chemistry)
    Job Place: All India
    How to apply: Post (Candidates may apply in prescribed application form along with all relevant document).
    Address- DGM (HR), Indian Oil Corporation Limited (AOD), DIGBOI-78617

    IOCL Website

    Full Notification Attached Bellow (Downloadable)