Tag: JRF Jobs in Mangalore

  • NIT Karnataka Jobs: ಜೂನಿಯರ್‌ ರಿಸರ್ಚ್‌ ಫೆಲೋ ಹುದ್ದೆ ಖಾಲಿ ಇದೆ, ಆಸಕ್ತರು ಅರ್ಜಿ ಹಾಕಿ

    NIT Karnataka Jobs: ಜೂನಿಯರ್‌ ರಿಸರ್ಚ್‌ ಫೆಲೋ ಹುದ್ದೆ ಖಾಲಿ ಇದೆ, ಆಸಕ್ತರು ಅರ್ಜಿ ಹಾಕಿ

    NIT Karnataka Recruitment 2024: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT) ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 01 ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸುರತ್ಕಲ್ – ಕರ್ನಾಟಕದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು 30-Apr-2024 ರಂದು ಅಥವಾ ಮೊದಲು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಅಧಿಸೂಚನೆ ಬಿಡುಗಡೆ ಮಾಡಿದ ದಿನಾಂಕ: 24-04-2024
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 30-Apr-2024
    ಸಂದರ್ಶನದ ದಿನಾಂಕ: 01-ಮೇ-2024 (ಬೆಳಗ್ಗೆ 09:00)

    ಹುದ್ದೆಯ ವಿವರ ಇಲ್ಲಿದೆ;
    ಹುದ್ದೆಯ ಹೆಸರು ಮತ್ತು ಸಂಖ್ಯೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಇಲ್ಲಿ 01 ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನಿಯರ್‌ ರಿಸರ್ಚ್‌ ಫೆಲೋ (JRF) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾಸಿಕ ರೂ.31,000 ವೇತನ ಈ ಹುದ್ದೆಗೆ ಆಯ್ಕೆಯಾದವರಿಗೆ ದೊರಕಲಿದೆ. ಮಂಗಳೂರಿನ ಸುರತ್ಕಲ್‌ನಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದೆ.

    ವಿದ್ಯಾರ್ಹತೆ: NIT ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಇಂಜಿನಿಯರಿಂಗ್‌ ವಿದ್ಯಾಭ್ಯಾಸ ಹೊಂದಿರಬೇಕು. ವಿದ್ಯಾರ್ಹತೆಯ ಹೆಚ್ಚಿನ ವಿವರವನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

    ವಯೋಮಿತಿ: ಅಧಿಸೂಚನೆಯ ಪ್ರಕಾರ, ಜೂನಿಯರ್‌ ರಿಸರ್ಚ್‌ ಫೆಲೋ ಹುದ್ದೆಗೆ ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ತಮ್ಮ ಭರ್ತಿ ಮಾಡಿದ ಅರ್ಜಿಯನ್ನು ಇ-ಮೇಲ್ ಐಡಿ, [email protected] ಗೆ 30-Apr-2024 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.

    ನೇರ ಸಂದರ್ಶನದ ವಿಳಾಸ: Dept. of Mechanical Engineering, NITK, Surathkal, Mangalore

    ನೋಟಿಫಿಕೇಶನ್‌ ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • Mangalore Jobs:  ಮಂಗಳೂರು ವಿವಿಯಲ್ಲಿ ನೇಮಕಾತಿ; 6 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಮಾಸಿಕ ರೂ.61ಸಾವಿರ ವೇತನ

    Mangalore Jobs: ಮಂಗಳೂರು ವಿವಿಯಲ್ಲಿ ನೇಮಕಾತಿ; 6 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಮಾಸಿಕ ರೂ.61ಸಾವಿರ ವೇತನ

    Mangalore University Recruitment 2024: ಮಂಗಳೂರು ವಿಶ್ವವಿದ್ಯಾನಿಲಯವು ಅಧಿಸೂಚನೆಯ ಮೂಲಕ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 6 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸಂಶೋಧನಾ ಸಹಾಯಕ, JRF ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮಂಗಳೂರು – ಕರ್ನಾಟಕ ಸರ್ಕಾರದಲ್ಲಿ ಪೋಸ್ಟಿಂಗ್‌ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 25-Apr-2024 ರಂದು ಅಥವಾ ಮೊದಲು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಕೆಯ ಆರಂಭಿಕ ದಿನಾಂಕ; 23-04-2024
    ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 25-04-2024

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಒಟ್ಟು 6 ಹುದ್ದೆಗಳು ಖಾಲಿ ಇದ್ದು, ಮಂಗಳೂರು – ಕರ್ನಾಟಕದಲ್ಲಿ ಹುದ್ದೆ ಹುಡುಕುವವರು ಅರ್ಜಿ ಸಲ್ಲಿಸಬಹುದು. ಸಂಶೋಧನಾ ಸಹಾಯಕ, JRF ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.12000-61000/- ವೇತನ ಸಿಗಲಿದೆ.

    ಹುದ್ದೆ ಹೆಸರು ಮತ್ತು ಸಂಖ್ಯೆ:
    ಪೋಸ್ಟ್-ಡಾಕ್ಟರಲ್ ರಿಸರ್ಚ್ ಫೆಲೋ/ಪ್ರಾಜೆಕ್ಟ್ ಸೈಂಟಿಸ್ಟ್ – 1 ಹುದ್ದೆ
    ಹಿರಿಯ ಸಂಶೋಧನಾ ಫೆಲೋ (SRF) – 1 ಹುದ್ದೆ
    ಜೂನಿಯರ್ ರಿಸರ್ಚ್ ಫೆಲೋ (JRF) – 1 ಹುದ್ದೆ
    ಸಂಶೋಧನಾ ಸಹಾಯಕ – 2 ಹುದ್ದೆಗಳು
    ತಾಂತ್ರಿಕ ಸಹಾಯಕ – 1 ಹುದ್ದೆ

    ವಿದ್ಯಾರ್ಹತೆ:
    ಪೋಸ್ಟ್-ಡಾಕ್ಟರಲ್ ರಿಸರ್ಚ್ ಫೆಲೋ/ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗೆ ಪಿಎಚ್.ಡಿ ಮಾಡಿರುವವರು ಅರ್ಜಿ ಸಲ್ಲಿಸಬೇಕು.
    ಹಿರಿಯ ಸಂಶೋಧನಾ ಫೆಲೋ (SRF) ಹುದ್ದೆಗೆ ಭೌತಶಾಸ್ತ್ರ/ವೈದ್ಯಕೀಯ ಭೌತಶಾಸ್ತ್ರದಲ್ಲಿ M.Sc ಮಾಡಿರುವವರು ಅರ್ಜಿ ಸಲ್ಲಿಸಬಹುದು.
    ಜೂನಿಯರ್ ರಿಸರ್ಚ್ ಫೆಲೋ (JRF), ಸಂಶೋಧನಾ ಸಹಾಯಕ ಹುದ್ದೆಗೆ B.Sc, B.A, M.Sc, M.A ತೇರ್ಗಡೆ ಹೊಂದಿರಬೇಕು.
    ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ ಮಾಡಿರಬೇಕು.

    ವಯೋಮಿತಿ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಮಂಗಳೂರು ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ಅನ್ವಯವಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ವೇತನ: ಪೋಸ್ಟ್-ಡಾಕ್ಟರಲ್ ರಿಸರ್ಚ್ ಫೆಲೋ/ಪ್ರಾಜೆಕ್ಟ್ ಸೈಂಟಿಸ್ಟ್ – ರೂ.61000/-
    ಹಿರಿಯ ಸಂಶೋಧನಾ ಫೆಲೋ (SRF) – ರೂ.42000/-
    ಜೂನಿಯರ್ ರಿಸರ್ಚ್ ಫೆಲೋ (JRF) – ರೂ.37000/-
    ಸಂಶೋಧನಾ ಸಹಾಯಕ – ರೂ.20000/-
    ತಾಂತ್ರಿಕ ಸಹಾಯಕ – ರೂ.12000/- ಮಾಸಿಕ ವೇತನ ನೀಡಲಾಗುವುದು.

    ಮಂಗಳೂರು ವಿಶ್ವವಿದ್ಯಾನಿಲಯ ನೇಮಕಾತಿ (ಸಂಶೋಧನಾ ಸಹಾಯಕ, ಜೆಆರ್ಎಫ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗೆ ನೀಡಲಾದ ವಿಳಾಸಕ್ಕೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.
    ವಿಳಾಸ: Prof. Karunakara N, Coordinator & Principal Investigator, NPCIL Consultancy Research Project, Center for Advanced Research in Environmental Radioactivity (CARER), Mangalore University, Mangalagangotri-574199 ಗೆ ಪೋಸ್ಟ್‌ ಮೂಲಕ ಅಥವಾ [email protected] ಗೆ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.

    ನೋಟಿಫಿಕೇಶನ್‌ ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • Jobs: ಮಂಗಳೂರು ಯುನಿವರ್ಸಿಟಿಯಲ್ಲಿ ಉದ್ಯೋಗ; ವೇತನ ರೂ.31ಸಾವಿರ; ಎ.25 ಕ್ಕೆ ನೇರ ಸಂದರ್ಶನ

    Jobs: ಮಂಗಳೂರು ಯುನಿವರ್ಸಿಟಿಯಲ್ಲಿ ಉದ್ಯೋಗ; ವೇತನ ರೂ.31ಸಾವಿರ; ಎ.25 ಕ್ಕೆ ನೇರ ಸಂದರ್ಶನ

    Mangalore University Recruitment 2024: ಮಂಗಳೂರು ವಿಶ್ವವಿದ್ಯಾನಿಲಯವು ತನ್ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 01 ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಪೋಸ್ಟ್‌ಗಳನ್ನು ಭರ್ತಿ ಮಾಡಲಾಗುವುದು ಎಂದು ತನ್ನ ಅಧಿಸೂಚನೆಯಲ್ಲಿ ಸಂಸ್ಥೆ ತಿಳಿಸಿದೆ. ಹಾಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮಂಗಳೂರು – ಕರ್ನಾಟಕ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 25-Apr-2024 ರಂದು ಅಥವಾ ಮೊದಲು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 20-04-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-04-2024

    ಹುದ್ದೆಯ ವಿವರ ಇಲ್ಲಿದೆ;
    ಹುದ್ದೆ ವಿವಿರ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಜೂನಿಯರ್‌ ರಿಸರ್ಚ್‌ ಫೆಲೋ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 01 ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.31,000 ವೇತನ ಸಿಗಲಿದೆ.

    ವಿದ್ಯಾರ್ಹತೆ: ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ವಿಶ್ವವಿದ್ಯಾಲಯಗಳಿಂದ ಭೌತಶಾಸ್ತ್ರ / ವೈದ್ಯಕೀಯ ಭೌತಶಾಸ್ತ್ರದಲ್ಲಿ M.Sc ತೇರ್ಗಡೆ ಹೊಂದಿರಬೇಕು..

    ವಯೋಮಿತಿ: ಮಂಗಳೂರು ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ಅಭ್ಯರ್ಥಿಗಳು ವಯೋಮಿತಿ ಹೊಂದಬೇಕು. ಹಾಗೆನೇ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ಮಂಗಳೂರು ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಆಫ್‌ಲೈನ್‌ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
    ವಿಳಾಸ ಇಲ್ಲಿದೆ.
    Prof. Karunakara N,
    Coordinator & Principal Investigator,
    BRNS Research Project,
    Center for Advanced Research in Environmental Radioactivity (CARER),
    Mangalore University,
    Mangalagangotri – 574199 ಇಲ್ಲಿಗೆ ಸಲ್ಲಿಸಬೇಕು. ಅಥವಾ [email protected] ಇಮೇಲ್‌ ಮಾಡಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25-Apr-2024 ಅಥವಾ ಮೊದಲು ಅರ್ಜಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್‌ ಲಿಂಕ್‌ ಕ್ಲಿಕ್‌ ಮಾಡಿ