Tag: Karnataka Jobs

  • NMPA Recruitment: ಮಂಗಳೂರಿನಲ್ಲಿ ಕೇಂದ್ರ ಸರಕಾರಿ ಉದ್ಯೋಗ; ಮಾಸಿಕ ರೂ. 75,000 – 2,18,750/- ವೇತನ

    NMPA Recruitment: ಮಂಗಳೂರಿನಲ್ಲಿ ಕೇಂದ್ರ ಸರಕಾರಿ ಉದ್ಯೋಗ; ಮಾಸಿಕ ರೂ. 75,000 – 2,18,750/- ವೇತನ

    NMPA Recruitment 2024: ನವ ಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎನ್‌ಎಂಪಿಎ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ಪೈಲಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶ. ಆಸಕ್ತ ಅಭ್ಯರ್ಥಿಗಳು 31-ಮೇ-2024 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

    ಪ್ರಮುಖ ದಿನಾಂಕಗಳು;
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 27-05-2024
    ನೇರ ಸಂದರ್ಶನದ ದಿನಾಂಕ; 31-05-2024

    ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ;
    ಸಂಸ್ಥೆಯ ಹೆಸರು: ನವ ಮಂಗಳೂರು ಬಂದರು ಪ್ರಾಧಿಕಾರ (NMPA) ದಲ್ಲಿ ಖಾಲಿ ಇರುವ ಪೈಲಟ್‌ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ. 75,000 – 2,18,750/- ದೊರಕಲಿದೆ.

    ವಿದ್ಯಾರ್ಹತೆ: NMPA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷ ಮೀರಿರಬಾರದು. ನವ ಮಂಗಳೂರು ಬಂದರು ಪ್ರಾಧಿಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿದ ವಿಳಾಸಕ್ಕೆ ತಮ್ಮ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
    ವಿಳಾಸ ಇಲ್ಲಿದೆ;
    Chairperson, New Mangalore Port Authority at Panambur, Mangalore, Karnataka – 575010 ದಿ. 31-May-2024 ರಂದು ನೇರ ಸಂದರ್ಶನವಿರಲಿದೆ.

  • Court Jobs: ಮಂಡ್ಯದ ಕೋರ್ಟ್‌ನಲ್ಲಿ 41 ಹುದ್ದೆಗಳು ಖಾಲಿ ಇದೆ; ಈಗಲೇ ಅರ್ಜಿ ಸಲ್ಲಿಸಿ

    Court Jobs: ಮಂಡ್ಯದ ಕೋರ್ಟ್‌ನಲ್ಲಿ 41 ಹುದ್ದೆಗಳು ಖಾಲಿ ಇದೆ; ಈಗಲೇ ಅರ್ಜಿ ಸಲ್ಲಿಸಿ

    Mandya District Court Peon Recruitment 2024: ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 41 ಹುದ್ದೆಗಳು ಖಾಲಿ ಇದ್ದು ಆಸಕ್ತರು ಈ ಕೆಳಗೆ ನೀಡಲಾದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. 41 ಜವಾನರು (ಪೀವನ್‌) ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಆರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 03-05-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-06-2024 (11.59 ರಾತ್ರಿ)
    ಆನ್‌ಲೈನ್‌ ಮೂಲಕ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 04-06-2024 (ರಾತ್ರಿ 11.59 ರವರೆಗೆ)

    ಹುದ್ದೆಯ ಕುರಿತ ವಿವರ ಇಲ್ಲಿದೆ: ಮಂಡ್ಯ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ 41 ಹುದ್ದೆಗಳು ಇದ್ದು, ಜವಾನ ಹುದ್ದೆಗೆ ಭರ್ತಿ ಮಾಡಲಾಗುವುದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17 ಸಾವಿರದಿಂದ ರೂ.28950 ರವರೆಗೆ ವೇತನ ಸಿಗಲಿದೆ.

    ಶೈಕ್ಷಣಿಕ ಅರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಮಾಡಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.

    ವಯೋಮಿತಿ: ಕನಿಷ್ಠ 18 ವರ್ಷ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗದವರಿಗೆ 35 ವರ್ಷ, ಒಬಿಸಿ ವರ್ಗದವರಿಗೆ 38 ವರ್ಷ, ಎಸ್‌ಸಿ/ಎಸ್‌ಟಿ, ಪ್ರವರ್ಗ-1-40 ವರ್ಷ ಗರಿಷ್ಠ ವಯೋಮಿತಿಯನ್ನು ಮೀರರಬಾರದು.

    ಆಯ್ಕೆ ಪ್ರಕ್ರಿಯೆ: ಎಸ್‌ಎಸ್‌ಎಲ್‌ಸಿ ತರಗತಿಯ ಗರಿಷ್ಠ ಅಂಕಗಳ ಆಧಾರದಲ್ಲಿ, ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್‌ ಮಾಡಲಾಗುವುದು. ನಂತರ ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.150, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಾಗಿಲ್ಲ.

  • Post Office Jobs: ಅಂಚೆ ಇಲಾಖೆಯಲ್ಲಿ ಡ್ರೈವರ್‌ ಹುದ್ದೆಗಳ ನೇಮಕಾತಿ, ಮಾಸಿಕ ರೂ.63,200 ವೇತನ

    Post Office Jobs: ಅಂಚೆ ಇಲಾಖೆಯಲ್ಲಿ ಡ್ರೈವರ್‌ ಹುದ್ದೆಗಳ ನೇಮಕಾತಿ, ಮಾಸಿಕ ರೂ.63,200 ವೇತನ

    Post Office Driver Recruitment 2024: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 27 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಟಾಫ್‌ ಕಾರ್‌ ಡ್ರೈವರ್‌ ಹುದ್ದೆಗೆ ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕದೆಲ್ಲೆಡೆ ಈ ಹುದ್ದೆಯ ಪೋಸ್ಟಿಂಗ್‌ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಎಪ್ರಿಲ್‌ 08,2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ, 14, 2024

    ಹುದ್ದೆಯ ವಿವರ ಇಲ್ಲಿದೆ;
    ಹುದ್ದೆಯ ಹೆಸರು: ಸ್ಟಾಫ್‌ ಕಾರ್‌ ಡ್ರೈವರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 27 ಹುದ್ದೆಗಳು ಖಾಲಿ ಇದೆ. ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಚಿಕ್ಕೋಡಿ, ಕಲಬುರಗಿ, ಹಾವೇರಿ, ಕಾರವಾರ, ಎಂಎಂಎಸ್‌ ಬೆಂಗಳೂರು, ಮಂಡ್ಯ, ಎಂಎಂಎಸ್‌ ಮೈಸೂರು, ಪುತ್ತೂರು, ಶಿವಮೊಗ್ಗ, ಉಡುಪಿ ಹಾಗೂ ಕೋಲಾರ ಡಿವಿಷನ್‌ಗಳಲ್ಲಿ ಪೋಸ್ಟಿಂಗ್‌ ಆಗಲಿದೆ.

    ಎಲ್ಲೆಲ್ಲಿ ಎಷ್ಟೆಷ್ಟು ಹುದ್ದೆ ಖಾಲಿ ಇದೆ?
    ಚಿಕ್ಕೋಡಿ – 1
    ಕಲಬುರಗಿ – 1
    ಹಾವೇರಿ – 1
    ಕಾರವಾರ – 1
    ಎಂಎಂಎಸ್‌ ಬೆಂಗಳೂರು – 15
    ಮಂಡ್ಯ – 1
    ಎಂಎಂಎಸ್‌ ಮೈಸೂರು – 3
    ಪುತ್ತೂರು – 1
    ಶಿವಮೊಗ್ಗ – 1
    ಉಡುಪಿ – 1
    ಕೋಲಾರ – 1

    ವಿದ್ಯಾರ್ಹತೆ: 10 ನೇ ತರಗತಿಯಲ್ಲಿ ಪಾಸಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಲಘು ಹಾಗೂ ಭಾರೀ ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ಮೂರು ವರ್ಷಗಳ ಕಾರ್ಯಾನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಮೋಟಾರ್‌ ಮೆಕ್ಯಾನಿಸಮ್‌ ಜ್ಞಾನ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

    ವಯೋಮಿತಿ: 18 ಕನಿಷ್ಠ ವರ್ಷ ಪೂರೈಸಿರಬೇಕು. ಹಾಗೆನೇ ಅಭ್ಯರ್ಥಿಗಳು 27 ವರ್ಷ ಮೀರಿರಬಾರದು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವೇತನ: ಮಾಸಿಕ ರೂ.19,900-ರೂ.63,200 ಶ್ರೇಣಿಯಲ್ಲಿ ಮೇಲ್ಕಂಡ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುವುದು.

    ಆಯ್ಕೆ ವಿಧಾನ: ಚಾಲನಾ ಪರೀಕ್ಷೆ ಹಾಗೂ ಮೋಟಾರ್‌ ಮೆಕ್ಯಾನಿಸಮ್‌ ಜ್ಞಾನಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ: ಮೇಲ್ಕಂಡ ಹುದ್ದೆಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

    ಅರ್ಜಿ ಸಲ್ಲಿಸುವುದು ಹೇಗೆ?
    ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಭ್ಯರ್ಥಿಗಳು ಕಳುಹಿಸಬೇಕು.
    ಮ್ಯಾನೇಜರ್‌, ಮೇಲ್‌ ಮೋಟಾರ್‌ ಸರ್ವಿಸ್‌, ಬೆಂಗಳೂರು- 560001

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

  • UIDAI Recruitment 2024: ಬೆಂಗಳೂರಿನಲ್ಲಿ ಕೆಲಸ ಹುಡುಕುವವರಿಗೆ ಉದ್ಯೋಗಾವಕಾಶ-ಮಾಸಿಕ ಲಕ್ಷಕ್ಕಿಂತ ಹೆಚ್ಚು ಸಂಬಳ

    UIDAI Recruitment 2024: ಬೆಂಗಳೂರಿನಲ್ಲಿ ಕೆಲಸ ಹುಡುಕುವವರಿಗೆ ಉದ್ಯೋಗಾವಕಾಶ-ಮಾಸಿಕ ಲಕ್ಷಕ್ಕಿಂತ ಹೆಚ್ಚು ಸಂಬಳ

    UIDAI Recruitment 2024: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು ಮೂರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಆಹ್ವಾನಿಸಿದೆ. ಸಹಾಯಕ ಖಾತೆ ಅಧಿಕಾರಿ, ಖಾಸಗಿ ಕಾರ್ಯದರ್ಶಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 15-ಮೇ-2024 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-03-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2024

    ಹುದ್ದೆಯ ವಿವರ ಈ ಕೆಳಗೆ ನೀಡಲಾಗಿದೆ;
    ಹುದ್ದೆಯ ಹೆಸರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಬೆಂಗಳೂರು – ಕರ್ನಾಟಕದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದೆ. ಸಹಾಯಕ ಖಾತೆ ಅಧಿಕಾರಿ, ಖಾಸಗಿ ಕಾರ್ಯದರ್ಶಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ವೇತನ: ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ ರೂ.47600-151100/- ವೇತನ ಸಿಗಲಿದೆ.

    ಹುದ್ದೆಯ ಹೆಸರು, ಸಂಖ್ಯೆ:
    ಸಹಾಯಕ ಲೆಕ್ಕಾಧಿಕಾರಿ 1 ಹುದ್ದೆ
    ಖಾಸಗಿ ಕಾರ್ಯದರ್ಶಿ 1 ಹುದ್ದೆ
    ಸೆಕ್ಷನ್ ಆಫೀಸರ್ 1 ಹುದ್ದೆ

    ವಿದ್ಯಾರ್ಹತೆ: ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗು ಸಿಎ, ಕಾಸ್ಟ್ ಅಕೌಂಟೆಂಟ್, ಎಂಬಿಎ ಮಾಡಿರಬೇಕು.
    ಖಾಸಗಿ ಕಾರ್ಯದರ್ಶಿ, ಸೆಕ್ಷನ್ ಆಫೀಸರ್ ಹುದ್ದೆಗಳಿಗೆ UIDAI ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಮಾಡಿರಬೇಕು

    ವಯಸ್ಸಿನ ಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 15-ಮೇ-2024 ರಂತೆ 56 ವರ್ಷಗಳಿಗಿಂತ ಕಡಿಮೆಯಿರಬೇಕು. ಈ ಮೇಲ್ಕಂಡ ಹುದ್ದೆಗಳಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    UIDAI ನೇಮಕಾತಿ (ಸಹಾಯಕ ಖಾತೆ ಅಧಿಕಾರಿ, ಖಾಸಗಿ ಕಾರ್ಯದರ್ಶಿ) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಇವರಿಗೆ (HR), Unique Identification Authority of India, Aadhaar Complex, NTI Layout, Tata Nagar, Kodigehalli, Technology Centre, Bengaluru-560092 15-May-2024 ಮೊದಲು ಕಳುಹಿಸಬೇಕು.

  • Karnataka Jobs: ಗ್ರಾಮ ಪಂಚಾಯತ್‌ನಲ್ಲಿ ಕೆಲಸ, ಪಿಯು ಪಾಸಾದವರಿಗೆ ಉದ್ಯೋಗ

    Karnataka Jobs: ಗ್ರಾಮ ಪಂಚಾಯತ್‌ನಲ್ಲಿ ಕೆಲಸ, ಪಿಯು ಪಾಸಾದವರಿಗೆ ಉದ್ಯೋಗ

    Uttara Kannada Grama Panchayat Recruitment 2024: ಉತ್ತರ ಕನ್ನಡ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿವಿಧ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಉತ್ತರ ಕನ್ನಡ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 20-Mar-2024 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-03-2024

    ಹುದ್ದೆಗಳ ವಿವರ ಈ ಕೆಳಗೆ ನೀಡಲಾಗಿದೆ;
    ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಷ್ಟು ಹುದ್ದೆಗಳು ಖಾಲಿ ಇದೆ ಎಂದು ಇನ್ನೂ ಕೂಡಾ ನಿರ್ದಿಷ್ಟಪಡಿಸಿಲ್ಲ.

    ವೇತನ: ಉತ್ತರ ಕನ್ನಡ ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ ವೇತನ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ: ಉತ್ತರ ಕನ್ನಡ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳಾಗಿರಬೇಕು.

    ಆಯ್ಕೆ ಪ್ರಕ್ರಿಯೆ; ಮೆರಿಟ್‌ ಲಿಸ್ಟ್‌ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Office of Gram Panchayat Development Officer, Uttar Kannada, Karnataka ಇಲ್ಲಿಗೆ 20-Mar-2024 ರಂದು ಅಥವಾ ಮೊದಲು ಕಳುಹಿಸಬೇಕು.

  • MRPL Recruitment 2024: ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ನಲ್ಲಿ ಹುದ್ದೆ; 50 ಸಾವಿರದಿಂದ 1 ಲಕ್ಷದ 60 ಸಾವಿರದವರಗೆ ವೇತನ!

    MRPL Recruitment 2024: ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ನಲ್ಲಿ ಹುದ್ದೆ; 50 ಸಾವಿರದಿಂದ 1 ಲಕ್ಷದ 60 ಸಾವಿರದವರಗೆ ವೇತನ!

    MRPL Recruitment 2024: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಜನವರಿ 2024 ರ MRPL ರ ಅಧಿಸೂಚನೆಯ ಮೂಲಕ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಮಂಗಳೂರು – ಕರ್ನಾಟಕ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆ.24 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಹುದ್ದೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 25-01-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-02-2024

    ಹುದ್ದೆ: ಸಹಾಯಕ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಒಟ್ಟು 11 ಹುದ್ದೆಗಳಿದೆ.

    ವಿದ್ಯಾರ್ಹತೆ: ಎಂಆರ್‌ಪಿಎಲ್‌ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮಾರ್ಕೆಟಿಂಗ್/ಆಪರೇಷನ್ ಮ್ಯಾನೇಜ್‌ಮೆಂಟ್/ಸಪ್ಲೈ ಚೈನ್/ಬಿಸಿನೆಸ್ ಮ್ಯಾನೇಜ್‌ಮೆಂಟ್/ಅನಾಲಿಟಿಕ್ಸ್/ಇಂಟರ್‌ನ್ಯಾಶನಲ್ ಟ್ರೇಡ್‌ನಲ್ಲಿ ಎರಡು ವರ್ಷಗಳ ಎಂಬಿಎ ಅಥವಾ ಮಾರ್ಕೆಟಿಂಗ್/ಇಂಟರ್‌ನ್ಯಾಶನಲ್ ಟ್ರೇಡ್/ಸಪ್ಲೈ ಚೈನ್‌ನಲ್ಲಿ ಎರಡು ವರ್ಷದ ಸ್ನಾತಕೋತ್ತರ ಡಿಪ್ಲೊಮಾದೊಂದಿಗೆ ಪದವಿ ಪಡೆದಿರಬೇಕು.

    ವೇತನ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ ಅಧಿಸೂಚನೆಯ ಪ್ರಕಾರ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳಿಗೆ 50,000 ರಿಂದ 1,60,000 ರೂ. ವೇತನ ನೀಡಲಾಗುತ್ತದೆ.

    ಅರ್ಜಿ ಶುಲ್ಕ: ಸಾಮಾನ್ಯ, OBC, EWS ವರ್ಗದ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ರೂ.118 (ರೂ. 100 ಅರ್ಜಿ ಶುಲ್ಕ ಮತ್ತು ರೂ. 18 ಜಿಎಸ್‌ಟಿ) ಪಾವತಿಸಬೇಕಾಗುತ್ತದೆ. ಯಾವುದೇ ಹೆಚ್ಚುವರಿ ಶುಲ್ಕಗಳನ್ನು (ಬ್ಯಾಂಕ್ ಸೇವಾ ಶುಲ್ಕಗಳು ಇತ್ಯಾದಿ) ಅರ್ಜಿದಾರರು ಭರಿಸಬೇಕಾಗುತ್ತದೆ
    SC/ST/PwBD/ ಮಾಜಿ ಸೈನಿಕ ವರ್ಗಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

    ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 27 ವರ್ಷ ಮೀರಿರಬಾರದು.
    OBC (NCL) ಅಭ್ಯರ್ಥಿಗಳಿಗೆ 03 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
    ಯುಆರ್/ಇಡಬ್ಲ್ಯೂಎಸ್/ಒಬಿಸಿ(ಎನ್‌ಸಿಎಲ್) ಅಭ್ಯರ್ಥಿಗಳಿಗೆ ಮೇಲೆ ನಿರ್ದಿಷ್ಟಪಡಿಸಿದ ಗರಿಷ್ಠ ವಯಸ್ಸಿನ ಮಿತಿಯ ಜೊತೆಗೆ, 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
    ಮಾಜಿ ಸೈನಿಕರಿಗೆ ವಯೋಮಿತಿಯಲ್ಲಿ ಸಡಿಲಿಕೆಯು ಭಾರತ ಸರ್ಕಾರದ ನಿಯಮಗಳ ಪ್ರಕಾರ ಇರುತ್ತದೆ.

    ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ