Tag: kea recruitment 2024

  • 1000 VA Jobs:ಉದ್ಯೋಗಾಕಾಂಕ್ಷಿಗಳ ಗಮನಕ್ಕೆ; ಕೆಇಎ ಇಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಲಿಂಕ್‌ ಬಿಡುಗಡೆ

    1000 VA Jobs:ಉದ್ಯೋಗಾಕಾಂಕ್ಷಿಗಳ ಗಮನಕ್ಕೆ; ಕೆಇಎ ಇಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಲಿಂಕ್‌ ಬಿಡುಗಡೆ

    Karnataka Revenue Department Recruitment: ಕರ್ನಾಟಕ ಸರಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಹುದ್ದೆಗೆ ಸಂಬಂಧಿಸಿದ ತಯಾರಿ ಮಾಡಿಕೊಳ್ಳಬಹುದು. ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಕರ್ನಾಟಕದಲ್ಲಿ ಪೋಸ್ಟಿಂಗ್‌ ನಡೆಯಲಿದೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಎಪ್ರಿಲ್‌ 5, 2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 04, 2024
    ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: ಮೇ, 07, 2024

    ಹುದ್ದೆಯ ವಿವರ ಇಲ್ಲಿದೆ; ಉಳಿಕೆ ಮೂಲ ವೃಂದ- 869 ಹುದ್ದೆಗಳು ಮತ್ತು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ- 131 ಹುದ್ದೆಗಳು

    ವೇತನ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಯಾಗುವವರಿಗೆ ಮಾಸಿಕ ರೂ.21,400-42000ರೂ. ವೇತನ ದೊರಕಲಿದೆ.

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ-2ಎ/2ಬಿ/3ಎ/3ಬಿ) ಹುದ್ದೆಗೆ ಅಭ್ಯರ್ಥಿಗಳು ರೂ.750 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
    (ಓಮ್ಮೆ ಪಾವತಿ ಮಾಡಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ)

    ವಿದ್ಯಾರ್ಹತೆ: ವಿದ್ಯಾರ್ಹತೆಯ ಕುರಿತ ಹೆಚ್ಚಿನ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

    ವಯೋಮಿತಿ: ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ.
    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
    ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

    ಆಯ್ಕೆ ವಿಧಾನ: ಮೇಲ್ಕಂಡ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್‌ -ಒಎಂಆರ್‌ ಮಾದರಿ ಮೂಲಕ ಪರೀಕ್ಷೆ ನಡೆಸಲಾಗುವುದು.

    ಆನ್ಲೈನ್‌ ಅರ್ಜಿ ಸಲ್ಲಿಕೆ ವೇಳಾಪಟ್ಟಿಯ ನೋಟಿಫಿಕೇಶನ್‌

    ಅರ್ಜಿ ಸಲ್ಲಿಕೆಯ ನೇರ ಲಿಂಕ್‌

    ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯ ಈ ಲಿಂಕ್‌ ಕ್ಲಿಕ್‌ ಮಾಡಿ

  • KUWSDB Jobs 2024: ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಹುದ್ದೆಗಳ ಅರ್ಜಿಗೆ ಅವಧಿ ವಿಸ್ತರಣೆ; ಎಇ, ಗ್ರೂಪ್‌ ಸಿ ಹುದ್ದೆಗಳ ನೇಮಕ

    KUWSDB Jobs 2024: ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಹುದ್ದೆಗಳ ಅರ್ಜಿಗೆ ಅವಧಿ ವಿಸ್ತರಣೆ; ಎಇ, ಗ್ರೂಪ್‌ ಸಿ ಹುದ್ದೆಗಳ ನೇಮಕ

    KUWSDB Recruitment 2024: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್‌) ಹಾಗೂ 14 ‘ಸಿʼ ಗ್ರೂಪ್‌ ವೃಂದದ ಹುದ್ದೆಗಳಿಗೆ ದಿನಾಂಕ 10-03-2024 ರವರೆಗೆ ಅರ್ಜಿಗೆ ಅವಕಾಶ ನೀಡಿತ್ತು. ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಕೋರಿದ್ದರಿಂದ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವಿಸ್ತರಿಸಿದ ಕೊನೆಯ ದಿನಾಂಕ: 11-03-2024 ರಿಂದ 21-03-2024
    ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 22-03-2024

    ಹುದ್ದೆಗಳ ವಿವರ:
    ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಉದ್ಯೋಗ ಇಲಾಖೆಯಿಂದ
    ಸಹಾಯಕ ಇಂಜಿನಿಯರ್‌ (ಸಿವಿಲ್‌) : 50, ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್‌ ಸಿ): 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 64 ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವೇತನ ಶ್ರೇಣಿ:
    ಸಹಾಯಕ ಇಂಜಿನಿಯರ್‌ (ಸಿವಿಲ್‌: ರೂ.43,100-ರೂ.83,900
    ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್‌ ಸಿ): ರೂ.27,650-ರೂ.52,650

    ಶೈಕ್ಷಣಿಕ ಅರ್ಹತೆ; ಸಹಾಯಕ ಇಂಜಿನಿಯರ್‌ (ಸಿವಿಲ್)‌ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್‌ ಇಂಜಿನಿಯರಿಂಗ್‌ ಪದವಿಯನ್ನು ಸಿವಿಲ್‌ ವಿಭಾಗದಲ್ಲಿ ಪಡೆದಿರಬೇಕು
    ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಕಾಂ ಪದವಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು, ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ -2ಎ/2ಬಿ/3ಎ/3ಬಿ) ರೂ.750
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500 ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ.

    ಅರ್ಜಿ ಸಲ್ಲಿಸುವ ವಿಧಾನ; ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಿ ಅಲ್ಲಿ ಆನ್‌ಲೈನ್‌ ಮುಖಾಂತರ ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಪ್ರತ್ಯೇಕ ಅರ್ಜಿಯ ಮುಖಾಂತರ ಸಲ್ಲಿಸಬೇಕು. ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕ ಶುಲ್ಕವನ್ನು ಕೂಡಾ ಪಾವತಿ ಮಾಡಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

  • KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಫ್‌ಡಿಎ, ಸಹಾಯಕ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ವಿವರ

    KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಎಫ್‌ಡಿಎ, ಸಹಾಯಕ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ವಿವರ

    KUWSDB: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇದೀಗ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್‌) ಹಾಗೂ 14 ‘ಸಿʼ ಗ್ರೂಪ್‌ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಕುರಿತು ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-02-2024
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2024
    ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 14-03-2024