Tag: Mysore zilla panchayath

  • ಮೈಸೂರು ಜಿಲ್ಲಾ ಪಂಚಾಯತಿನಲ್ಲಿ 14 ಹುದ್ದೆಗಳು: ವಿವರ ಇಲ್ಲಿದೆ

    ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿಯಿರುವ ಎಡಿಪಿಸಿ ಮತ್ತು ತಾಂತ್ರಿಕ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ NIC ಯ ಜಿಲ್ಲಾ ವೆಬ್‌ಸೈಟ್‌ ನಲ್ಲಿ ನಿಗದಿತ ನಮೂನೆಯು ಲಭ್ಯವಿದ್ದು ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ವೆಬ್‌ಸೈಟ್‌ mysore.nic.in ಆಗಿರುತ್ತದೆ. ಸದರಿ ಹುದ್ದೆಗಳು ತಾತ್ಕಾಲಿಕವಾಗಿರುತ್ತದೆ.

    ಹುದ್ದೆ : ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿ ( ಎಡಿಪಿಸಿ ) 01ಹುದ್ದೆ: ಅಭ್ಯರ್ಥಿಗಳು ಈ ಹುದ್ದೆಗೆ ಬಿ.ಇ/ಬಿಟೆಕ್ ಅಥವಾ ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು. ವಯೋಮಿತಿ ಗರಿಷ್ಠ 35 ವರ್ಷ. ಅಭ್ಯರ್ಥಿಗಳು ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 36 ತಿಂಗಳ ಅನುಭವ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.38,000/- ವೇತನವಿರುತ್ತದೆ.

    ತಾಂತ್ರಿಕ ಸಹಾಯಯ ಇಂಜಿನಿಯರ್ – 13 ಹುದ್ದೆಗಳು. ಇಂಜಿನಿಯರಿಂಗ್ ಪದವೀಧರರು (ಸಿವಿಲ್) ಗಣಕಯಂತ್ರ ಜ್ಞಾನ ಕಡ್ಡಾಯ. ಈ ಹುದ್ದೆಗೆ ಮಾಸಿಕ ರೂ.24,000/- ವೇತನವಿರುತ್ತದೆ. ವಯೋಮಿತಿ ಗರಿಷ್ಠ 35 ಹೊಂದಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 2,3 ವರ್ಷ ಅನುಭವ ಇರಬೇಕು. ಡಿಪ್ಲೋಮಾ ಇನ್ ಸಿವಿಲ್ ( ಗಣಕಯಂತ್ರ ಜ್ಞಾನ ಕಡ್ಡಾಯ) ಪಡೆದಿರಬೇಕು. ವಯೋಮಿತಿ ಗರಿಷ್ಠ 35 ಹೊಂದಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 2,3 ವರ್ಷ ಅನುಭವ ಇರಬೇಕು. ಈ ಹುದ್ದೆಗೆ ಮಾಸಿಕ ರೂ. 19,000/- ವೇತನವಿರುತ್ತದೆ.

    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08-07-2021
    ದಾಖಲಾತಿ ಪರಿಶೀಲನೆ: 13-07-2021

  • ಮೈಸೂರು ಜಿಲ್ಲಾ ಪಂಚಾಯತ್ : ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

    ಕೋವಿಡ್ -19 ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿ ಬರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಮೈಸೂರು ಜಿಲ್ಲೆ ಮೈಸೂರು ಇವರ ಅಧೀನ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಲು ಖಾಲಿ ಇರುವ ಶುಶ್ರೂಷಕರು ಹುದ್ದೆಗಳಿಗೆ ತಾತ್ಕಾಲಿಕವಾಗಿ ದಿನಾಂಕ 30-09-2021 ರವರೆಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಂ ರೊಸ್ಟರ್ ಆಧಾರದಲ್ಲಿ ನೇರ ಸಂದರ್ಶನದ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತರು ದಿನಾಂಕ 17-06-2021 ರಂದು ಬೆಳಿಗ್ಗೆ 10.00 ಗಂಟೆಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎನ್.ಪಿ.ಸಿ. ಆಸ್ಪತ್ರೆ ‌ಆವರಣ, ಮೈಸೂರು ‌ಇಲ್ಲಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹಿಂದೆ ಈ ಉದ್ದೇಶಕ್ಕಾಗಿ ದಿನಾಂಕ ‌04-06-2021 ರಂದು ‌ಸಂದರ್ಶನಕ್ಕೆ ಹಾಜರಾಗಿದ್ದ‌ ಅಭ್ಯರ್ಥಿಗಳನ್ನು ಈ ಹುದ್ದೆಗೆ ಪರಿಗಣಿಸಲಾಗುವುದರಿಂದ ಈ ಸಂದರ್ಶನಕ್ಕೆ ‌ಹಾಜರಾಗುವಂತಿಲ್ಲ.

    ಹುದ್ದೆ : ನರ್ಸಿಂಗ್ ‌ಆಫೀಸರ್
    ವಿದ್ಯಾರ್ಹತೆ : ಬಿ.ಎಸ್ಸಿ/ಜಿಎನ್ ಎಂ/ ಡಿಪ್ಲೋಮಾ ನರ್ಸಿಂಗ್
    ಹುದ್ದೆ ಸಂಖ್ಯೆ : 13
    ವೇತನ : ಅಭ್ಯರ್ಥಿಗಳಿಗೆ ಮಾಸಿಕ‌ ರೂ.25,000/- ವೇತನವಿರುತ್ತದೆ.
    ವಯೋಮಿತಿ : ಜನರಲ್ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.

    ಈ ಮೇಲ್ಕಂಡ ಹುದ್ದೆಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ಅಂಕಪಟ್ಟಿಗಳು/ ಎಲ್ಲಾ ಪ್ರಮಾಣ ಪತ್ರಗಳೊಂದಿಗೆ ಐಡಿ ಪ್ರೂಫ್ ಮತ್ತು ಅಡ್ರೆಸ್ ಪ್ರೂಫ್ ನೊಂದಿಗೆ ಹಾಗೂ ಇವುಗಳ ಒಂದು ಜೆರಾಕ್ಸ್ ಪ್ರತಿಯೊಂದಿಗೆ ತಿಳಿಸಿರುವ ದಿನಾಂಕದಂದು ಹಾಗೂ ಸಮಯದೊಳಗೆ ಹಾಜರಿರತಕ್ಕದ್ದು.

  • ಮೈಸೂರು ಜಿಲ್ಲಾ ಪಂಚಾಯತ್ : “ಗ್ರಾಮ ಕಾಯಕ ಮಿತ್ರ” ಹುದ್ದೆಗೆ ಅರ್ಜಿ ಆಹ್ವಾನ

    ಮೈಸೂರು ಜಿಲ್ಲಾ ಪಂಚಾಯತ್ : “ಗ್ರಾಮ ಕಾಯಕ ಮಿತ್ರ” ಹುದ್ದೆಗೆ ಅರ್ಜಿ ಆಹ್ವಾನ

    ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮೈಸೂರು ಜಿಲ್ಲೆಗೆ ಒಟ್ಟು 57 ಗ್ರಾಮ ಪಂಚಾಯತಿಗಳಿಗೆ ” ಗ್ರಾಮ ಕಾಯಕ ಮಿತ್ರ” ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಗೆ ಅರ್ಜಿಗಳನ್ನು ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ 08 ತಾಲ್ಲೂಕು ವ್ಯಾಪ್ತಿಯಲ್ಲಿರುವ ಆಯಾ ಗ್ರಾಮ ಪಂಚಾಯಿತಿಗಳನ್ನು ಸಂಪರ್ಕಿಸುವುದು.

    ಅರ್ಹತೆಗಳು : 1. “ಗ್ರಾಮ ಕಾಯಕ ಮಿತ್ರ” ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

    1. ಕನಿಷ್ಠ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
    2. ಅಭ್ಯರ್ಥಿಯು ದಿ.01.01.2021 ಕ್ಕೆ ಅನ್ವಯಿಸುವಂತೆ ಅರ್ಜಿ ಸಲ್ಲಿಸುವ ಗ್ರಾ.ಪಂ.ಯಲ್ಲಿ ನರೇಗಾ ಯೋಜನೆಯಡಿ ಕ್ರಿಯಾ ಶೀಲ ಜಾಬ್‌ ಕಾರ್ಡ್ ಹೊಂದಿರಬೇಕು.
    3. ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ ( 2018-19, 2019-20, 2020-21) ಕನಿಷ್ಠ ಎರಡು ವರ್ಷಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಬೇಕು.
    4. ವಯೋಮಿತಿ ದಿ. 01.01.2021 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಬಾರದು.
    5. ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು.
    6. ಹುದ್ದೆಗೆ ಅರ್ಜಿ ಸಲ್ಲಿಸುವವರು ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    7. ಅಭ್ಯರ್ಥಿಯು ಪರಿಣಾಮಕಾತಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣಗಳನ್ನುಹೊಂದಿರಬೇಕು.
    8. ಗ್ರಾಮ ರೋಜ್‌ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು ಇದಕ್ಕೆ ಗ್ರಾಮ ರೋಜ್‌ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

    ಗೌರವಧನ : ಗ್ರಾಮ ಕಾಯಕ ಮಿತ್ರರಿಗೆ ಮಾಸಿಕ ರೂ. 6೦೦೦/- ನಿಗದಿತ ಗೌರವಧನ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-04-2021

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್ ಮಾಡಿ

  • ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ

    ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ

    ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 31, ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆಫ್ ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-03-2021

    ಹುದ್ದೆಗಳ ವಿವರ : ಟೆಕ್ನಿಕಲ್ ಅಸಿಸ್ಟೆಂಟ್ಸ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಟೆಕ್ನಿಕಲ್ ಅಸಿಸ್ಟೆಂಟ್ (ಅರಣ್ಯ) -3 ಹಾಗೂ ಟೆಕ್ನಿಕಲ್ ಅಸಿಸ್ಟೆಂಟ್ ( ಅಗ್ರಿಕಲ್ಚರ್) -1

    ಹುದ್ದೆ ಸ್ಥಳ: ಮೈಸೂರು-ಕರ್ನಾಟಕ

    ಹುದ್ದೆ ಸಂಖ್ಯೆ : 04

    ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ವೇತನ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ: ಅಂಗೀಕೃತ ಬೋರ್ಡ್/ಯುನಿವರ್ಸಿಟಿ ಯಿಂದ ಅಭ್ಯರ್ಥಿಗಳು ಬಿ.ಎಸ್ಸಿ, ಎಂಎಸ್ಸಿ ಪಾಸಾಗಿರಬೇಕು.

    ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 40 ವಯೋಮಿತಿಯನ್ನು ಮೀರಿರಬಾರದು.

    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

    ವಿಳಾಸ:

    Chief Executive Officer, Zilla Panchayat, Mysore – 570005, Karnataka.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ