Tag: nbcc 2021

  • NBCC ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    NBCC ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟ್ರಕ್ಷನ್ ಕೋರ್ಪರೇಶನ್ ಲಿಮಿಟೆಡ್ (ಎನ್ ಬಿಸಿಸಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 30, ಮಾರ್ಚ್ 2021 ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 30, ಎಪ್ರಿಲ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 31-03-2021 (10.00 am)
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-04-2021(5pm)

    ಹುದ್ದೆ : ಅಡಿಶನಲ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಪ್ರಾಜೆಕ್ಟ್ ಮ್ಯಾನೇಜರ್, ಡೆಪ್ಯುಟಿ ಪ್ರೊಜೆಕ್ಟ್ ಮ್ಯಾನೇಜರ್, ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯುಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಸ್ಟೆನೋಗ್ರಾಫರ್, ಆಫೀಸ್ ಅಸಿಸ್ಟೆಂಟ್ ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ವಯೋಮಿತಿ : ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳಿಗೆ ಕನಿಷ್ಠ 28 ರಿಂದ ಗರಿಷ್ಠ 52 ವರ್ಷ ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.nbccindia.com ಗೆ ಭೇಟಿ ನೀಡಿ.

  • NBCC ನಲ್ಲಿ 120 ಹುದ್ದೆ: ಸಂಪೂರ್ಣ ವಿವರ ಇಲ್ಲಿದೆ

    NBCC ನಲ್ಲಿ 120 ಹುದ್ದೆ: ಸಂಪೂರ್ಣ ವಿವರ ಇಲ್ಲಿದೆ

    ನ್ಯಾಷನಲ್ ಬಿಲ್ಡಿಂಗ್ಸ್ ಕನ್ಸ್ಟ್ರಕ್ಷನ್ ಕೋರ್ಪರೇಶನ್ ಲಿಮಿಟೆಡ್ (ಎನ್ ಬಿಸಿಸಿ)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 14, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-04-2021
    ಅರ್ಜಿ ಶುಲ್ಕ : ಆನ್ಲೈನ್ ಮೂಲಕ.

    ಹುದ್ದೆ: ಸೈಟ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ: 120

    ಹುದ್ದೆ ಸ್ಥಳ : ಆಲ್ ಇಂಡಿಯಾ

    ವೇತನ : ಈ‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.31,000/- ವೇತನ ನಿಗದಿಪಡಿಸಲಾಗಿದೆ.

    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸಲು ಜನರಲ್/ ಒಬಿಸಿ ಅಭ್ಯರ್ಥಿಗಳಿಗೆ ರೂ. 500/- ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪಿಡ್ಬ್ಯುಬಿಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಬೇಸ್ಡ್ ಟೆಸ್ಟ್ (ಸಿಬಿಟಿ) ಮೂಲಕ ಆಯ್ಕೆ ಮಾಡಲಾಗುತ್ತದೆ.

    ವಿದ್ಯಾರ್ಹತೆ: ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆ/ಬೋರ್ಡ್/ಯುನಿವರ್ಸಿಟಿಯಿಂದ ಡಿಪ್ಲೋಮಾ ಪದವಿಯನ್ನು ಹೊಂದಿರಬೇಕು.

    ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 35 ವರ್ಷ ಮೀರಿರಬಾರದು.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್ಲೈನ್ ಮೂಲಕ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

    ಆನ್ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ

  • NBCC (ನ್ಯಾಷನಲ್ ಬಿಲ್ಡಿಂಗ್ ಕನ್ಸ್ಟಕ್ಷನ್ಸ್ ಕಾರ್ಪೋರೇಷನ್) ಸಂಸ್ಥೆಯಲ್ಲಿ ಹುದ್ದೆಗೆ ಅರ್ಜಿ ಆಹ್ವಾನ

    ನ್ಯಾಷನಲ್ ಬಿಲ್ಡಿಂಗ್ಸ್ ಕನ್ಟ್ರಕ್ಷನ್ಸ್ ಕಾರ್ಪೋರೇಷನ್ (NBCC) ತನ್ನಲ್ಲಿರುವ ಖಾಲಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗೆ ನೀಡಲಾಗಿರುವ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : ಮಾರ್ಕೆಟಿಂಗ್ ಎಕ್ಸಿಕ್ಯುಟಿವ್

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.42,500/- ವೇತನವನ್ನು ತಿಂಗಳಿಗೆ ನೀಡಲಾಗುವುದು

    ಹುದ್ದೆಯ ಒಟ್ಟು ಸಂಖ್ಯೆ : 20

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 1, ಮಾರ್ಚ್ 2021.

    ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಆಗಿರಬೇಕು.

    ವಿದ್ಯಾಭ್ಯಾಸ : ಅಂಗೀಕೃತ ವಿಶ್ವವಿದ್ಯಾಲಯಯದಿಂದ ಮಾನ್ಯತೆ ಪಡೆದ ಎಂ.ಬಿ.ಎ, ಡಿಪ್ಲೋಮಾ, ಪೋಸ್ಟ್ ಗ್ರಾಜ್ಯುಯೇಟ್ ವಿದ್ಯಾರ್ಹತೆ ಯನ್ನು ಹೊಂದಿರಬೇಕು.

    ಅರ್ಜಿ ಶುಲ್ಕ : ಪ.ಜಾತಿ/ಪ‌.ಪಂಗಡ , ಅಂಗವಿಕಲ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ನೀಡುವಂತಿಲ್ಲ. ಉಳಿದ ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

    ಆಯ್ಕೆ ಪ್ರಕ್ರಿಯೆ : ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಕಂಪನಿಯ ಅಧಿಕೃತ ವೆಬ್‌ಸೈಟ್‌ https://nbccindia.com/ ಗೆ ಭೇಟಿ ನೀಡಿ , ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಕಳುಹಿಸಬೇಕು.

    ಕಚೇರಿ ವಿಳಾಸ:
    General Manager(HRM)
    NBCC(I)ltd,
    NBCC Bhavan,2nd floor,
    Corporate Office,
    Near Lodhi Hotel,
    Lodhi Road,
    New Delhi-110003