Tag: NCB Recruitment 2024

  • NCB Recruitment 2024: ಕೇಂದ್ರ ಸರಕಾರಿ ಉದ್ಯೋಗಾವಕಾಶ; ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋದಲ್ಲಿ ಹುದ್ದೆ; ತಡಮಾಡದೇ ಈ ಕೂಡಲೇ ಅರ್ಜಿ ಸಲ್ಲಿಸಿ

    NCB Recruitment 2024: ಕೇಂದ್ರ ಸರಕಾರಿ ಉದ್ಯೋಗಾವಕಾಶ; ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋದಲ್ಲಿ ಹುದ್ದೆ; ತಡಮಾಡದೇ ಈ ಕೂಡಲೇ ಅರ್ಜಿ ಸಲ್ಲಿಸಿ

    NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲ್ಲಿ ಖಾಲಿ ಇರುವ ಅರ್ಜಿಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 05 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಕ್ಷನ್‌ ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗುತ್ತಿದ್ದು, ಈ ಕೆಳಗೆ ನೀಡಿದ ಮಾಹಿತಿಯನ್ನು ಆಧರಿಸಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆಯಾದವರಿಗೆ ಭಾರತದಾದ್ಯಂತ ಪೋಸ್ಟಿಂಗ್‌ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ದಿ.27-Jul-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 28-05-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-07-2024

    ಹುದ್ದೆಯ ಕುರಿತ ಮಾಹಿತಿ ಇಲ್ಲಿದೆ;
    ಸಂಸ್ಥೆಯ ಹೆಸರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲ್ಲಿ ಖಾಲಿ ಇರುವ ಸೆಕ್ಷನ್‌ ಆಫೀಸರ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂ.44900-142400/- ವೇತನ ದೊರಕಲಿದೆ.

    ವಿದ್ಯಾರ್ಹತೆ: NCB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ಮೀರಿರಬಾರದು. ಉಳಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

  • Job Alerts: ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಪಾಸಾದವರಿಗೆ ಆದ್ಯತೆ

    Job Alerts: ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ; ಪದವಿ ಪಾಸಾದವರಿಗೆ ಆದ್ಯತೆ

    NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 14 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಸಬ್‌ ಇನ್ಸ್‌ಪೆಕ್ಟರ್‌ ಪೋಸ್ಟ್‌ ಗೆ ಆಸಕ್ತಿ ಇರುವ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅಖಿಲ ಭಾರತ ಸರ್ಕಾರದಲ್ಲಿ ಪೋಸ್ಟಿಂಗ್‌ ನಡೆಯಲಿದೆ. ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ದಿ.16-Jul-2024 ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 17-05-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 16-07-2024

    ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇಲ್ಲಿ ಖಾಲಿ ಇರುವ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.9300-34800/- ವೇತನ ದೊರಕಲಿದೆ. ಭಾರತದಾದ್ಯಂತ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಿದ್ಯಾರ್ಹತೆ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ತೇರ್ಗಡೆ ಹೊಂದಿರಬೇಕು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 16-ಜುಲೈ-2024 ರಂತೆ 56 ವರ್ಷಗಳನ್ನು ಮೀರಿರಬಾರದು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ: ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.
    ವಿಳಾಸ ಇಲ್ಲಿದೆ;
    Director (Admn.), Narcotics Control Bureau, 2nd Floor, August Kranti Bhawan, Bhikaji Cama Place, New Delhi-110066 ಇಲ್ಲಿಗೆ 16-07-2024 ದಿನಾಂಕದೊಳಗೆ ತಲುಪಬೇಕು.

  • NCB Recruitment 2024: ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋದಲ್ಲಿ 31 ಡ್ರೈವರ್‌ ಹುದ್ದೆಗಳು; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    NCB Recruitment 2024: ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋದಲ್ಲಿ 31 ಡ್ರೈವರ್‌ ಹುದ್ದೆಗಳು; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

    NCB Recruitment 2024: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 31 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸ್ಟಾಫ್‌ ಕಾರ್‌ ಡ್ರೈವರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅಖಿಲ ಭಾರತ ಸರ್ಕಾರದಲ್ಲಿ ಪೋಸ್ಟಿಂಗ್‌ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 12-Apr-2024 ರಂದು ಅಥವಾ ಮೊದಲು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು;
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12-02-2024
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-04-2024

    ಹುದ್ದೆಯ ವಿವರ ಇಲ್ಲಿದೆ;
    ಹುದ್ದೆಯ ಹೆಸರು ಮತ್ತು ಸಂಖ್ಯೆ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ತನ್ನಲ್ಲಿ ಖಾಲಿ ಇರುವ ಸ್ಟಾಫ್‌ ಕಾರ್‌ ಡ್ರೈವರ್‌ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 31 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಖಿಲ ಭಾರತ ಸರಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.

    ವೇತನ: ಮೇಲೆ ತಿಳಿಸಿದ ಹುದ್ದೆಗೆ ಅಭ್ಯರ್ಥಿಗಳಿಗೆ ಮಾಸಿಕ ರೂ.5200-20200/- ವೇತನವಿರಲಿದೆ.

    ಶೈಕ್ಷಣಿಕ ಅರ್ಹತೆ: NCB ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

    ವಯೋಮಿತಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆಯ ಪ್ರಕಾರ, ಮೇಲೆ ತಿಳಿಸಿದ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 12-Apr-2024 ರಂತೆ 56 ವರ್ಷಗಳನ್ನು ಮೀರಿರಬಾರದು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ: ಸ್ಟಾಫ್‌ ಕಾರ್‌ ಡ್ರೈವರ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಚಾಲನಾ ಪರವಾನಗಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು.
    ವಿಳಾಸ ಇಲ್ಲಿದೆ:
    Deputy Director (Admn), Narcotics Control Bureau, 2nd Floor, August Kranti Bhawan, Bhikaji Cama Place, New Delhi-110066 ಇಲ್ಲಿದೆ ದಿನಾಂಕ 12-Apr-2024 ರೊಳಗೆ ತಲುಪುವಂತೆ ಕಳುಹಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಿ.