Tag: NIFT

  • NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ

    ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎ‌ನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಸಹಾಯಕ ಪ್ರಾಧ್ಯಾಪಕ

    ಹುದ್ದೆ ಸಂಖ್ಯೆ : 190

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-12-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022 ಸಂಜೆ‌ 5.30 ರೊಳಗೆ.

    ವಿದ್ಯಾರ್ಹತೆ : ನಿಫ್ಟ್ ನಲ್ಲಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ : ಜನವರಿ 31, 2022 ರ ಅನ್ವಯ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು‌. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರೂ. ವೇತನವನ್ನು ನಿಗದಿಪಡಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1,180/- ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.

    ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಅರ್ಜಿ ಸಲ್ಲಿಕೆ ಹೇಗೆ ?

    ಆನ್ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಮಾಹಿತಿಯನ್ನು ಭರ್ತಿ ಮಾಡಬೇಕು. ಆನ್ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15, 2022 ರೊಳಗೆ ಅರ್ಜಿಯನ್ನು ತಲುಪಿಸಬಹುದು.

    ಕಚೇರಿ ವಿಳಾಸ : Office of Registrar, Head Office, NIFT Campus, Hauz Khas, New Delhi – 110016

    ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ.

  • NIFT ನಲ್ಲಿ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

    NIFT ನಲ್ಲಿ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

    ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟಕ್ನಾಲಜಿ (ಎನ್‌ಐಎಫ್‌ಟಿ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 07,2021

    ಅರ್ಜಿ ಶುಲ್ಕ : ರೂ.1,180/- ಅರ್ಜಿ ಶುಲ್ಕವನ್ನು ಡಿಡಿ/ಬ್ಯಾಂಕ್‌ ಚೆಕ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

    ಹುದ್ದೆ : ಎನ್‌ಐಎಫ್‌ಟಿ ನಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಒಟ್ಟು ಹುದ್ದೆ : 42

    ವಿದ್ಯಾರ್ಹತೆ : ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ವಯೋಮಿತಿ : ಗರಿಷ್ಠ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹದು. ನೇಮಕಾತಿ ನಿಯಮಾನುಸರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ಅಭ್ಯರ್ಥಿಗಳಿಗೆ ನೀಡಲಾಗಿದೆ.

    ವೇತನ : ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.37,400/- ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 7, ಮೇ 2021 ರೊಳಗ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

    ಕಚೇರಿ ವಿಳಾಸ : The Registrar,NIFT Campus,Hauz Khas,Near Gulmohar Park, NEW DELHI – 110016.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ