Tag: Project Assiciate Posts 2024

  • NIT Karnataka Jobs 2024: ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಆಹ್ವಾನ; ಅರ್ಹತೆ, ವೇತನ ವಿವರ ಇಲ್ಲಿದೆ

    NIT Karnataka Jobs 2024: ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಆಹ್ವಾನ; ಅರ್ಹತೆ, ವೇತನ ವಿವರ ಇಲ್ಲಿದೆ

    NIT Karnatka Recruitment 2024: ಕರ್ನಾಟಕದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT) ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆ ಭರ್ತಿ ಮಾಡಲಾಗುತ್ತಿದ್ದು, ಹುದ್ದೆ ಸಂಖ್ಯೆಯನ್ನು ಇನ್ನೂ ನಿರ್ದಿಷ್ಟ ಪಡಿಸಿಲ್ಲ. ಸುರತ್ಕಲ್ – ಕರ್ನಾಟಕ ಸರ್ಕಾರದಲ್ಲಿ ಈ ಹುದ್ದೆಗೆ ಪೋಸ್ಟಿಂಗ್‌ ನಡೆಯಲಿದ್ದು, ಅಭ್ಯರ್ಥಿಗಳು 20-Jun-2024 ರಂದು ಅಥವಾ ಮೊದಲು ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 20-05-2024
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 20-ಜೂನ್-2024

    ಹುದ್ದೆಯ ವಿವರ ಇಲ್ಲಿದೆ;
    ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ) ಇಲ್ಲಿ ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.25,000 ವೇತನ ನಿಗದಿಪಡಿಸಲಾಗಿದೆ.

    ವಿದ್ಯಾರ್ಹತೆ: ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಕಂಪ್ಯೂಟರ್ ಸೈನ್ಸ್/ಮಾಹಿತಿ ವಿಜ್ಞಾನದಲ್ಲಿ B.E ಅಥವಾ B.Tech ತೇರ್ಗಡೆ ಹೊಂದಿರಬೇಕು.

    ವಯೋಮಿತಿ: ಪ್ರಾಜೆಕ್ಟ್‌ ಅಸೋಸಿಯೇಟ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು NIT ಕರ್ನಾಟಕ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು ಎಂದು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 20-Jun-2024 ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

    ಅಧಿಕೃತ ವೆಬ್‌ಸೈಟ್: nitk.ac.in
    ನೋಟಿಫಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ