ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ರಾಜ್ಯ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.
ಕೇಂದ್ರ ಕಚೇರಿ , ಬೆಂಗಳೂರು
ಜ್ಯೂನಿಯರ್ ಕನ್ಸಲ್ಟೆಂಟ್, ಯೋಜನಾ ವ್ಯವಸ್ಥಾಪಕರು, ಮೇಲ್ವಿಚಾರಕ ಹಾಗೂ ಮೌಲ್ಯಮಾಪನ ತಜ್ಞರು, ಸ್ಯಾನಿಟೈಸೇಶನ್ ಆಂಡ್ ಹೈಜಿನ್ ಪ್ರಮೋಶನ್ ಕನ್ಸಲ್ಟೆಂಟ್,ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ,ಎಂಎಚ್ ಎಂ ಕನ್ಸಲ್ಟೆಂಟ್.
ಜಿಲ್ಲಾ ಪಂಚಾಯತಿ ಕಚೇರಿ- ಜಲಜೀವನ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್
ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಎಂಐಎಸ್ ಸಮಾಲೋಚಕರು, ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು, ಘನ ಹಾಗೂ ದ್ರವ ತ್ಯಾಜ್ಯ ನಿರ್ವಹಣೆ ಸಮಾಲೋಚಕರು
ವಯೋಮಿತಿ : ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 45 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-09-2021
ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಲಾದ ನೋಟಿಫಿಕೇಶನ್ ನೋಡಿ
ಕರ್ನಾಟಕ ರಾಜ್ಯ ಕುಡಿಯುವ ನೀರು ಮತ್ತು ಗ್ರಾಮಿಣ ನೈರ್ಮಲ್ಯ ಇಲಾಖೆಯು ಸ್ವಚ್ಛ ಭಾರತ್ ಮಿಶನ್ – ಗ್ರಾಮೀಣ ಜಲಜೀವನ ಯೋಜನೆ ಅನುಷ್ಠಾನಕ್ಕೆ ತಂದು ಅಭಿವೃದ್ಧಿ ಪಡಿಸುತ್ತಿದೆ. ಈ ಯೋಜನೆಯ ಅಭಿವೃದ್ಧಿಯ ಸಲುವಾಗಿ ಇಲಾಖೆಯು ಅಗತ್ಯ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ( RDPR) ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.
ಕೇಂದ್ರ ಕಚೇರಿ: ಹುದ್ದೆ : ಜ್ಯೂನಿಯರ್ ಕನ್ಸಲ್ಟೆಂಟ್ ( ಎಕ್ಸಿಕ್ಯುಟಿವ್ ಇಂಜಿನಿಯರ್ ಲೆವಲ್) – 1 ಹುದ್ದೆ ಮಾನಿಟರಿಂಗ್ ಆಂಡ್ ಇವ್ಯಾಲ್ಯುಯೇಷನ್ ಎಕ್ಸೊರ್ಟ್ – 1 ಹುದ್ದೆ
ಜಿಲ್ಲಾ ಪಂಚಾಯತ ಕಚೇರಿ: ಜಲ ಜೀವನ್ ಮಿಶನ್ ಮತ್ತು ಸ್ವಚ್ಛ ಭಾರತ ಮಿಶನ್ ( ಗ್ರಾಮೀಣ) ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜರ್ – 02 ಹುದ್ದೆ ಎಂಐಎಸ್ ಕನ್ಸಲ್ಟೆಂಟ್ – 03 ಹುದ್ದೆ ಡಿಸ್ಟ್ರಿಕ್ಟ್ ಸ್ಯಾನಿಟೈಜೇಶನ್ ಮತ್ತು ಹೈಜಿನ್ ಪ್ರೊಮಿಷನ್ ಕನ್ಸಲ್ಟೆಂಟದ (ಎಸ್ ಹೆಚ್ )- 02 ಹುದ್ದೆ ಸಾಲಿಡ್ ಆಂಡ್ ಲಿಕ್ವಿಡ್ ವೇಸ್ಟ್ ಮ್ಯಾನೆಜ್‌ಮೆಂಟ್ ಕನ್ಸಲ್ಟೆಂಟ್ – 03 ಹುದ್ದೆ
ವಯೋಮಿತಿ : ಈ ಪ್ರಕಟಣೆ ಪ್ರಕಟಗೊಂಡ ದಿನದಂದು ಅಭ್ಯರ್ಥಿಗಳ ವಯೋಮಿತಿಯು 45 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-08-2021 ಸಂಜೆ 5.30 ರೊಳಗೆ.
ಅರ್ಜಿ ಸಲ್ಲಿಕೆ ಹೇಗೆ? ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಫೀಶಿಯಲ್ ವೆಬ್ ಸೈಟ್ ನಲ್ಲಿ ನೀಡಲಾದ ನಿಗದಿತ ಅರ್ಜಿ ನಮೂನೆಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ : ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ.ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು -560009
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
ಕೊಪ್ಪಳ ಜಿಲ್ಲೆಯ ಗ್ರಾ.ಕು.ನಿ&ನೈ ಇಲಾಖೆಯ ಪ್ರಯೋಗಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಹಿರಿಯ ವಿಶ್ಲೇಷಣಗಾರರು , ಕಿರಿಯ ವಿಶ್ಲೇಷಣಗಾರರು ಮತ್ತು ಸಂಗ್ರಹಣಾಕೋಶ ಉಸ್ತುವಾರಿ ಹುದ್ದೆಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದಲ್ಲಿ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿರಿಯ ವಿಶ್ಲೇಷಣಗಾರರು ( ಸೀನಿಯರ್ ಅನಾಲಿಸ್ಟ್ ) ( 1ಹುದ್ದೆ) ಹುದ್ದೆಗೆ ಅಭ್ಯರ್ಥಿಗಳು ಎಂ.ಎಸ್ಸಿ ಕೆಮಿಸ್ಟ್ರಿ ತೇರ್ಗಡೆ ಹೊಂದಿರಬೇಕು. ಕನಿಷ್ಠ ಮೂರು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30,000/- ವೇತನ ನಿಗದಿಪಡಿಸಲಾಗಿದೆ. ( ವಾರ್ಷಿಕ ರೂ.3,60,000/-)
ಕಿರಿಯ ವಿಶ್ಲೇಷಕ ಹುದ್ದೆಗೆ (ಜ್ಯೂನಿಯರ್ ಅನಾಲಿಸ್ಟ್) (1 ಹುದ್ದೆ) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿಯನ್ನು ಕನಿಷ್ಠ 60% ( ಕೆಮಿಸ್ಟ್ರಿ) ಅಂಕಗಳೊಂದಿಗೆ ಪಾಸಾಗಿರಬೇಕು. ಕನಿಷ್ಠ 3 ವರ್ಷ ಪ್ರಯೋಗಾಲಯದಲ್ಲಿ ಕೆಲಸ ಮಾಡಿರುವ ಅನುಭವ ಇರಬೇಕು. ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.15,000/- ರಿಂದ ರೂ.22,000/- ವೇತನ ನಿಗದಿಪಡಿಸಲಾಗಿದೆ.
ಸಂಗ್ರಹಣಾಕೋಶದ ಉಸ್ತುವಾರಿ ( sample cell In charge) ( 1) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ( ಕೆಮಿಸ್ಟ್ರಿ) ಪಾಸಾಗಿರಬೇಕು. ಪ್ರಯೋಗಾಲಯದಲ್ಲಿ ಕೆಲಸ ಮಾಡಿರುವ ಅನುಭವ ಇರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,000/-ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಮತ್ತು ವಿಳಾಸ : 26-07-2021 ರವರೆಗೆ ಸಂಜೆ 5 ಗಂಟೆಗೆ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರಗಳು, ಕಾರ್ಯಾನುಭವ, ವಿದ್ಯಾರ್ಹತೆಗಳನ್ನು ಈ ಕೆಳಗೆ ನೀಡಲಾಗಿದೆ.
ಜಿಲ್ಲಾ ಪಂಚಾಯತಿ ಕಚೇರಿ – ಜಲ ಜೀವನ ಮಿಷನ್ ಹುದ್ದೆ : ಜಿಲ್ಲಾ MIS ಸಮಾಲೋಚಕರು – 05 ಹುದ್ದೆಗಳು
ಜಿಲ್ಲಾ ಪಂಚಾಯತಿ ಕಚೇರಿ – ಸ್ವಚ್ಛ ಭಾರತ್ ಮಿಷನ್ ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು – 01 ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು – 01
ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷ ಮೀರಿರಬಾರದು.
ಹುದ್ದೆ ಸ್ಥಳ : ಬೆಂಗಳೂರು-ಚಿಕ್ಕಬಳ್ಳಾಪುರ-ಹರಪನಹಳ್ಳಿ- ಕೊಡಗು
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ಅರ್ಜಿ ಜೊತೆಗೆ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಪ್ರಮುಖ ಸಾಮರ್ಥ್ಯ ಗಳು, ಅನುಭವ ಮತ್ತು resume ನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ ಬೆಂಗಳೂರು- 5600- 009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ 05-07-2021 ರ ಸಂಜೆ 5:30 ರೊಳಗೆ ಸಲ್ಲಿಸಬೇಕು. ನಂತರ ಬಂದ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ ಮಿಷನ್ ( ಗ್ರಾಮೀಣ ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲು ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರಗಳು, ವಿದ್ಯಾರ್ಹತೆ ಹಾಗೂ ಕಾರ್ಯಾನುಭವದ ವಿವರಗಳನ್ನು ಕೆಳಕಂಡಂತೆ ನೀಡಲಾಗಿದೆ.
ಕೇಂದ್ರ ಕಚೇರಿ :
ಕಿರಿಯ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸುವವರು ಗ್ರಾಜ್ಯುಯೇಶನ್ ಇನ್ ಸಿವಿಲ್ ಇಂಜಿನಿಯರಿಂಗ್ ಮಾಡಿರಬೇಕು. ಈ ಹುದ್ದೆಗೆ ಮಾಸಿಕ ರೂ.60,000/- ಮತ್ತು ರೂ. 15,000/- ರವರೆಗೆ ವೇತನವಿರುತ್ತದೆ.
ಪ್ರಾನೌನ್ಸ್ ಮೆಂಟ್ ಕನ್ಸಲ್ಟೆಂಟ್ – ಹುದ್ದೆಗೆ ಅರ್ಜಿ ಸಲ್ಲಿಸುವವರು ಪೋಸ್ಟ್ ಗ್ರಾಜ್ಯುಯೇಶನ್ ಇನ್ ಕಾಮರ್ಸ್ / ಮ್ಯಾನೇಜ್ಮೆಂಟ್ ಅಥವಾ ಗ್ರಾಜ್ಯುಯೇಶನ್ ಇನ್ ಇಂಜಿನಿಯರಿಂಗ್ ಮಾಡಿರಬೇಕು. ಈ ಹುದ್ದೆಗೆ ರೂ.65,000/- ರಿಂದ ರೂ. 1,00,000/- ವರೆಗೆ ವೇತನವಿರುತ್ತದೆ.
ಘನ ಹಾಗೂ ದ್ರವ ತ್ಯಾಜ್ಯ ನಿರ್ವಹಣೆ : ಗ್ರಾಜ್ಯುಯೇಶನ್ ಇನ್ ಎನ್ವೆರ್ಮೆಂಟಲ್ ಇಂಜಿನಿಯರಿಂಗ್ / ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾಡಿರಬೇಕು. ಈ ಹುದ್ದೆಗೆ ರೂ.1,00,000/- ರಿಂದ ರೂ. 1,20,000/- ರವರೆಗೆ ವೇತನ ನಿಗದಿಪಡಿಸಲಾಗಿದೆ.
ಜಿಲ್ಲಾ ಮಟ್ಟದಲ್ಲಿ – ಜಲ ಜೀವನ ಮಿಷನ್
ಭೂ ವಿಜ್ಞಾನಿ – ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೋಸ್ಟ್ ಗ್ರಾಜ್ಯುಯೇಶನ್ ಡಿಗ್ರಿ ಇನ್ ಜಿಯಾಲಜಿಯನ್ನು ಅಂಗೀಕೃತ ಯುನಿವರ್ಸಿಟಿಯಿಂದ ಪಡೆದುಕೊಂಡಿರಬೇಕು. ಈ ಹುದ್ದೆಗೆ ಮಾಸಿಕ ರೂ.30,000/- ರಿಂದ ರೂ.35,000/- ರವರೆಗೆ ವೇತನವಿರುತ್ತದೆ.
ಜಿಲ್ಲಾ ಪಂಚಾಯತಿ ಕಚೇರಿ – ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) & ಜಲಜೀವನ ಮಿಷನ್
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು : ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ಯುನಿವರ್ಸಿಟಿಯಿಂದ ಎಂ.ಸಿ.ಎ/ ಸ್ಟಾಟಿಸ್ಟಿಕ್ಸ್. ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್/ ಬಿ.ಇ.ಕಂಪ್ಯೂಟರ್ ಸೈನ್ಸ್ ಪಡೆದುಕೊಂಡಿರಬೇಕು. ಈ ಹುದ್ದೆಗೆ ಮಾಸಿಕ ರೂ.22,000/- ರಿಂದ ರೂ.25,000/- ರವರೆಗೆ ವೇತನವಿರುತ್ತದೆ.
ಗುತ್ತಿಗೆಯ ಅಥವಾ ಹೊರಗುತ್ತಿಗೆ ಅವಧಿ : ಮೇಲಿನ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು.
ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.
ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಸಾಮರ್ಥ್ಯಗಳು, ರೆಸ್ಯೂಮ್ ಹಾಗೂ ಅರ್ಜಿ ಜೊತೆಗೆ “ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತವಾಗಿದ್ದೇನೆ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ. ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ ಬೆಂಗಳೂರು – 560009
ಸ್ನಾತಕ/ ಸ್ನಾತಕೋತ್ತರ ಪದವಿಯನ್ನು ದೂರಶಿಕ್ಷಣ ಮುಖಾಂತರ ಪಡೆದಿದ್ದರೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಕಿರುಪಟ್ಟಿ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ದೂರವಾಣಿ ಮುಖಾಂತರ ತಿಳಿಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಚೇರಿ ಹಾಗೂ ಆಯಾ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು. ಹಾಗೂ ಈ ಸಂದರ್ಭದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಪರೀಕ್ಷೆಗೆ ಹಾಜರಾಗುವುದು.
ಕರ್ನಾಟಕ ಸರಕಾರವು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆ : ಮುಖ್ಯ ಇಂಜಿನಿಯರ್ -01 ಅಧೀಕ್ಷಕ – 05 ಕಾರ್ಯಪಾಲಕ ಅಭಿಯಂತರರು – 34 ಸಹಾಯಕ ಕಾರ್ಯಪಾಲಕ ಅಭಿಯಂತರರು 1-147 ಸಹಾಯಕ ಕಾರ್ಯಪಾಲಕ ಅಭಿಯಂತರರು 11- 37 ಮುಖ್ಯ ಲೆಕ್ಕಾಧಿಕಾರಿ – 01 ಸಹಾಯಕ ಇಂಜಿನಿಯರ್ 1 – 205 ಪತ್ರಾಂಕಿತ ವ್ಯವಸ್ಥಾಪಕರು – 05 ಅಧೀಕ್ಷಕರು – 40 ಲೆಕ್ಕಾಧೀಕ್ಷಕರು – 34 ಸಹಾಯಕ ಸಾಂಖ್ಯಿಕ ಅಧಿಕಾರಿ- – 05 ಕಿರಿಯ ಇಂಜಿನಿಯರ್ -568 ಸಾಂಖ್ಯಿಕ ನಿರೀಕ್ಷಕರು -05 ಪ್ರಥಮ ದರ್ಜೆ ಸಹಾಯಕರು-222 ಪ್ರಥಮ ದರ್ಜೆ ಲೆಕ್ಕ ಸಹಾಯಕರು-32 ಶೀಘ್ರಲಿಪಿಗಾರರು-38 ದ್ವಿತೀಯ ದರ್ಜೆ ಸಹಾಯಕರು-320 ಬೆರಳಚ್ಚುಗಾರರು-254 ವಾಹನ ಚಾಲಕರು-216 ಪಿಯೋನ್ – 466
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-05-2021
ಈ ಮೇಲಿನ ಹುದ್ದೆಗಳಿಗೆ ನೇರ ನೇಮಕಾತಿ, ವರ್ಗಾವಣೆ ಹಾಗೂ ಮುಂಬಡ್ತಿ ಮೂಲಕ ಅಗತ್ಯಕ್ಕೆ ತಕ್ಕ ಹಾಗೆ ನೇಮಕ ಮಾಡಲಾಗುತ್ತದೆ.
ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ/ಪಿಯುಸಿ/ ಪದವಿ/ ಸ್ನಾತಕೋತ್ತರ ಪದವಿ/ ಇಂಜಿನಿಯರಿಂಗ್/ಐಟಿಐ ತೇರ್ಗಡೆ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ವಿಳಾಸವನ್ನು ಸಂಪರ್ಕಿಸಬಹುದು.
ಸರ್ಕಾರದ ಪ್ರಧಾನ ಕಾರ್ಯದರ್ಶಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿಗಳ ಕಟ್ಟಡ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು – 560001