Tag: rdpr recruitment 2021

  • RDPR : 2688 ಹುದ್ದೆ ಭರ್ತಿಗೆ ಕರಡು ಅಧಿಸೂಚನೆ

    RDPR : 2688 ಹುದ್ದೆ ಭರ್ತಿಗೆ ಕರಡು ಅಧಿಸೂಚನೆ

    ಕರ್ನಾಟಕ ಸರಕಾರವು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಮುಖ್ಯ ಇಂಜಿನಿಯರ್ -01
    ಅಧೀಕ್ಷಕ – 05
    ಕಾರ್ಯಪಾಲಕ ಅಭಿಯಂತರರು – 34
    ಸಹಾಯಕ ಕಾರ್ಯಪಾಲಕ ಅಭಿಯಂತರರು 1-147
    ಸಹಾಯಕ ಕಾರ್ಯಪಾಲಕ ಅಭಿಯಂತರರು 11- 37
    ಮುಖ್ಯ ಲೆಕ್ಕಾಧಿಕಾರಿ – 01
    ಸಹಾಯಕ ಇಂಜಿನಿಯರ್ 1 – 205
    ಪತ್ರಾಂಕಿತ ವ್ಯವಸ್ಥಾಪಕರು – 05
    ಅಧೀಕ್ಷಕರು – 40
    ಲೆಕ್ಕಾಧೀಕ್ಷಕರು – 34
    ಸಹಾಯಕ ಸಾಂಖ್ಯಿಕ ಅಧಿಕಾರಿ- – 05
    ಕಿರಿಯ ಇಂಜಿನಿಯರ್ -568
    ಸಾಂಖ್ಯಿಕ ನಿರೀಕ್ಷಕರು -05
    ಪ್ರಥಮ‌ ದರ್ಜೆ ಸಹಾಯಕರು-222
    ಪ್ರಥಮ ದರ್ಜೆ ಲೆಕ್ಕ ಸಹಾಯಕರು-32
    ಶೀಘ್ರಲಿಪಿಗಾರರು-38
    ದ್ವಿತೀಯ ದರ್ಜೆ ಸಹಾಯಕರು-320
    ಬೆರಳಚ್ಚುಗಾರರು-254
    ವಾಹನ ಚಾಲಕರು-216
    ಪಿಯೋನ್ – 466

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-05-2021

    ಈ ಮೇಲಿನ ‌ಹುದ್ದೆಗಳಿಗೆ ನೇರ ನೇಮಕಾತಿ, ವರ್ಗಾವಣೆ ಹಾಗೂ ಮುಂಬಡ್ತಿ ಮೂಲಕ ಅಗತ್ಯಕ್ಕೆ ತಕ್ಕ ಹಾಗೆ ನೇಮಕ ಮಾಡಲಾಗುತ್ತದೆ.

    ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ/ಪಿಯುಸಿ/ ಪದವಿ/ ಸ್ನಾತಕೋತ್ತರ ಪದವಿ/ ಇಂಜಿನಿಯರಿಂಗ್‌/ಐಟಿಐ ತೇರ್ಗಡೆ ಹೊಂದಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ವಿಳಾಸವನ್ನು ಸಂಪರ್ಕಿಸಬಹುದು.

    ಸರ್ಕಾರದ ಪ್ರಧಾನ ಕಾರ್ಯದರ್ಶಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿಗಳ‌ ಕಟ್ಟಡ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು – 560001

  • RDPR  : ವಿವಿಧ ಹುದ್ದೆ

    RDPR : ವಿವಿಧ ಹುದ್ದೆ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ‌ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ /ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿಯನ್ನು ಕರೆಯಲಾಗಿದೆ.

    ಹುದ್ದೆಗಳ ವಿವರ : 1. ಕೇಂದ್ರ ಕಚೇರಿ- a. ಸಮಾಲೋಚಕರು – 03 b. ಐ.ಟಿ‌.ಸಮಾಲೋಚಕರು- 01 c. ಡಬ್ಲ್ಯೂ.ಕ್ಯೂ.ಎಮ್.ಎಸ್ ಸಮಾಲೋಚಕರು I – 01. d. ಡಬ್ಲ್ಯೂ. ಕ್ಯೂ.ಎಮ್.ಎಸ್ ಸಮಾಲೋಚಕರು 4,5,6 – 03 e. ಡಬ್ಲ್ಯೂ. ಕ್ಯೂ.ಎಮ್.ಎಸ್ ಐ.ಎಮ್.ಐ.ಎಸ್ ಸಮಾಲೋಚಕರು‌- 01

    1. ವೃತ್ತ ಕಚೇರಿ – ಜಲಜೀವನ ಮಿಷನ್
      a. ಹಿರಿಯ ಸಮಾಲೋಚಕರು- 04

    3. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ – ಜಲಜೀವನ‌ಮಿಷನ್
    a. ಜಿಲ್ಲಾ ಯೋಜನಾ ವ್ಯವಸ್ಥಾಪಕ – 02
    b. ಜಿಲ್ಲಾ MIS ಸಮಾಲೋಚಕರು- 05
    c. ನೀರಿನ ಮಾದರಿಗಳ ಸಂಗ್ರಹಕೋಶದ ಉಸ್ತುವಾರಿ – 32
    d. ಸೂಕ್ಷ್ಮಾಣುಜಿವಿ ಶಾಸ್ತ್ರಜ್ಞ – 80
    e. ಹಿರಿಯ ವಿಶ್ಲೇಷಣೆಗಾರ – 04
    f. ವಿಶ್ಲೇಷಣೆಗಾರ – 06
    g. ಕಿರಿಯ ವಿಶ್ಲೇಷಣೆಗಾರ – 09

    1. ಜಿಲ್ಲಾ ಪಂಚಾಯಿತಿ ಕಛೇರಿ – ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ)
      a. ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು -01
      b. ಜಿಲ್ಲಾ MIS ಸಮಾಲೋಚಕರು -01
      c. ಜಿಲ್ಲಾ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕರು – 01

    ಗುತ್ತಿಗೆ ಅಥವಾ ಹೊರಗುತ್ತಿಗೆ ಅವಧಿ : ಮೇಲಿನ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ‌ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆಯ ಆಧಾರದ ಮೇಲೆ‌ ನೇಮಿಸಿಕೊಳ್ಳಲಾಗುವುದು ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ನವೀಕರಿಸಲಾಗುವುದು. ಒಂದೊಮ್ಮೆ ಅಭ್ಯರ್ಥಿಯ ಕಾರ್ಯಕ್ಷಮತೆ ನಿರೀಕ್ಷಿತ ‌ಮಟ್ಟದಲ್ಲಿ ಇಲ್ಲದಿದ್ದರೆ ಅಂತಹ ಅಭ್ಯರ್ಥಿಗಳ ಕರಾರು ಒಪ್ಪಂದವನ್ನು ಒಂದು ತಿಂಗಳ ನೋಟಿಸ್ ನೀಡಿ ರದ್ದು ಪಡಿಸಲಾಗುವುದು.

    ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳ ಮೀರಿರಬಾರದು.

    ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯ ಗಳು, ಹಾಗೂ ಅರ್ಜಿ ಜೊತೆಗೆ ” ನಿಗದಿತ ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ.ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು – 5600-009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ : 28-04-2021 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ನಂತರ ಬಂದಂತಹ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ವಿದ್ಯಾರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿಯನ್ನು ದೂರ ಶಿಕ್ಷಣ ಮುಖಾಂತರ ಪಡೆದಿದ್ದರೆ, ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

    ಆಯ್ಕೆ ಪ್ರಕ್ರಿಯೆ : ಕಿರು ಪಟ್ಟಿ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ದೂರವಾಣಿ ಮುಖಾಂತರ ತಿಳಿಸಲಾಗುವುದು.

    ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಹಾಗೂ ಆಯಾ ಜಿಲ್ಲಾ ಪಂಚಾಯತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು‌ ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಪರೀಕ್ಷೆಗೆ ಹಾಜರಾಗುವುದು.

    RDPR website: https://rdpr.karnataka.gov.in ಮತ್ತು https://swachhamevajayate.org ( ನೇಮಕಾತಿ ಲಿಂಕ್) ನಲ್ಲಿ ಲಭ್ಯವಿರುತ್ತದೆ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ  Intership ಗಾಗಿ ಅರ್ಜಿ ಆಹ್ವಾನ

    ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ Intership ಗಾಗಿ ಅರ್ಜಿ ಆಹ್ವಾನ

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಗಾಂಧೀ ನರೇಗಾ ಯೋಜನೆಯ ಅನುಷ್ಠಾನದಲ್ಲಿ ದಾಖಲೀಕರಣದಲ್ಲಿ ನೆರವು ನೀಡಲು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಇಂಟರ್ನ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿ( ಸಮಾಜ ವಿಜ್ಞಾನ/ ಸಿವಿಲ್ ಇಂಜಿನಿಯರಿಂಗ್) ಪಡೆದಿರಬೇಕು.

    ಹುದ್ದೆ ಸಂಖ್ಯೆ : ಒಟ್ಟು ಹುದ್ದೆ 05

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಗೌರವಧನ ರೀತಿಯಲ್ಲಿ ರೂ. 15,000/- + 2,000/- ನೀಡಲಾಗುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-04-2021

    ಇಂಟರ್ನ್‌ ಅವಧಿಯು 3 ತಿಂಗಳಾಗಿದ್ದು, ಅಗತ್ಯವಿದ್ದಲ್ಲಿ ವಿಸ್ತರಣೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರಯಾಣ ಮಾಡಲು ನಿಯೋಜಿಸುವ ಜಿಲ್ಲೆ ಹಾಗೂ ವಾಸ ಮಾಡಲು ಸಿದ್ಧರಿರಬೇಕು. ಇಂಟರ್ನ್‌ಶಿಪ್ ಕಾರ್ಯಕ್ರಮಗಳ ಅನುಭವ ಮತ್ತು ಕನ್ನಡ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

    ಆಸಕ್ತ ಅಭ್ಯರ್ಥಿಗಳು ದಿನಾಂಕ 10-04-2021 ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ಇ-ಮೇಲ್ ವಿಳಾಸಕ್ಕೆ ಸಲ್ಲಿಸತಕ್ಕದ್ದು. ಯಾವುದೇ ಹಾರ್ಡ್‌ ಪ್ರತಿಯನ್ನು ಸ್ವೀಕರಿಸುವುದಿಲ್ಲ.

    ಹೆಚ್ವಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ( ಆಡಳಿತ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ರವನ್ನು ಸಂಪರ್ಕಿಸಬಹುದು.
    ದೂರವಾಣಿ ಸಂಖ್ಯೆ : 080-22342163

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆಯ ವಿವರ ಈ ಕೆಳಗಿನಂತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ

    1. ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು- 02
      2.ಜಿಲ್ಲಾ ಯೋಜನಾ ವ್ಯವಸ್ಥಾಪಕರು-01
    2. ಜಿಲ್ಲಾ MIS ಸಮಾಲೋಚಕರು-05
    3. ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು(IEC)-04
      5.ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು

    ಈ ಮೇಲಿನ ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಒಂದು ವರ್ಷದ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಮೇರೆಗೆ ನೇಮಿಸಿಕೊಳ್ಳಲಾಗುವುದು.

    ವಯೋಮಿತಿ

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಆಗಿರಬೇಕು.

    ದೂರ ಶಿಕ್ಷಣದ ಮುಖಾಂತರ ಸ್ನಾತಕೋತ್ತರ ಪದವಿ ಪಡೆದಿದ್ದರೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಆಯ್ಕೆಯಾದ ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಕರಾರು ಒಪ್ಪಂದವನ್ನು ಮಾಡಿಕೊಳ್ಳಬೇಕು.

    ಅನುಭವದ ಆಧಾರದ ಮೇಲೆ ಮಾಸಿಕ ಸಮಾಲೋಚನಾ ಶುಲ್ಕ ನಿಗದಿಪಡಿಸಲಾಗುವುದು.

    ಆಯ್ಕೆಯಾದ ಅಭ್ಯರ್ಥಿಗೆ ಇಲಾಖೆಯಲ್ಲಿನ ಯಾವುದೇ ಹುದ್ದೆಗಳಲ್ಲಿ ವಿಲೀನಗೊಳ್ಳಲು/ಮುಂದುವರೆಯಲು ಯಾವುದೇ ಹಕ್ಕು ಇರುವುದಿಲ್ಲ

    ಅರ್ಜಿ ನಮೂನೆಯಲ್ಲಿ ಮಾಹಿತಿ ಯನ್ನು ತುಂಬಿ, ವಿದ್ಯಾರ್ಹತೆ, ಅನುಭವ ಪ್ರಮುಖ ಸಾಮರ್ಥ್ಯ ಗಳು, ವಯಸ್ಸಿನ ದೃಢೀಕರಣ, resume ಹಾಗೂ ಅರ್ಜಿ ಜೊತೆಗೆ ” ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ” ಎಂಬುದರ ಬಗ್ಗಯ ಟಿಪ್ಪಣಿ ಬರೆದು ಅರ್ಜಿಯ ಹಾರ್ಡ್ ಪ್ರತಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

    ಆಯುಕ್ತರು,
    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
    2ನೇ ಮಹಡಿ,
    ಕೆ.ಹೆಚ್.ಬಿ. ಕಟ್ಟಡ,
    ಕಾವೇರಿ ಭವನ,
    ಕೆ.ಜಿ.ರಸ್ತೆ, ಬೆಂಗಳೂರು-5600009

    ಅಭ್ಯರ್ಥಿಗಳು ದಿನಾಂಕ 20.02.2021 , ಸಂಜೆ 5.30 ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

    ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ಸಮಯದಲ್ಲಿ ಹಾಜರಾಗಿರುವುದು ಹಾಗೂ ಆಯ್ಕೆಯಾದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ನಿಗದಿಸಿದ ದಿನಾಂಕದಂದು ಅಭ್ಯರ್ಥಿಗಳು ಹಾಜರಿರತಕ್ಕದ್ದು.

    ಅರ್ಜಿ ನಮೂನೆಯು RDPR website : https://rdpr.Karnataka.gov.in ಮತ್ತು https://swachhamevajayate.org(ನೇಮಕಾತಿ ಲಿಂಕ್) ನಲ್ಲಿ ಲಭ್ಯವಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ