Tag: Village Administrative Officer Recruitment

  • Karnataka 1000 VAO Jobs: 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿಗೆ ದಿನಾಂಕ ವಿಸ್ತರಣೆ; ಹೊಸ ವೇಳಾಪಟ್ಟಿ ಇಲ್ಲಿದೆ

    Karnataka 1000 VAO Jobs: 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿಗೆ ದಿನಾಂಕ ವಿಸ್ತರಣೆ; ಹೊಸ ವೇಳಾಪಟ್ಟಿ ಇಲ್ಲಿದೆ

    Karnataka VA Recruitment 2024: ಕರ್ನಾಟಕ ಸರಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಹಾಕಲು ಈಗಾಗಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿತ್ತು. ಇದೀಗ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಯನ್ನು ಮಾಡಿದೆ.

    ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 03-04-2024 ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿತ್ತು. ಆದರೆ ಆನ್‌ಲೈನ್‌ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ದಿನಾಂಕ 04-05-2024 ರ ವರೆಗೆ ಅರ್ಜಿಗೆ, 07-05-2024 ರವರೆಗೆ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲು ಕೋರಿದ್ದರಿಂದ ಈ ಕೆಳಗಿನಂತೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.

    ಪ್ರಮುಖ ದಿನಾಂಕಗಳು:( ವಿಸ್ತರಣೆ ಮಾಡಿದ ದಿನಾಂಕ)
    ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-05-2024
    ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ: 18-05-2024

    ಹುದ್ದೆಯ ವಿವರ ಇಲ್ಲಿದೆ; ಉಳಿಕೆ ಮೂಲ ವೃಂದ- 869 ಹುದ್ದೆಗಳು ಮತ್ತು ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ- 131 ಹುದ್ದೆಗಳು

    ವೇತನ: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಆಯ್ಕೆಯಾಗುವವರಿಗೆ ಮಾಸಿಕ ರೂ.21,400-42000ರೂ. ವೇತನ ದೊರಕಲಿದೆ.

    ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ-2ಎ/2ಬಿ/3ಎ/3ಬಿ) ಹುದ್ದೆಗೆ ಅಭ್ಯರ್ಥಿಗಳು ರೂ.750 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು ರೂ.500 ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
    (ಓಮ್ಮೆ ಪಾವತಿ ಮಾಡಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ)

    ವಿದ್ಯಾರ್ಹತೆ: ವಿದ್ಯಾರ್ಹತೆಯ ಕುರಿತ ಹೆಚ್ಚಿನ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

    ವಯೋಮಿತಿ: ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯು ಈ ಕೆಳಕಂಡಂತೆ ನಿಗದಿಪಡಿಸಲಾಗಿದೆ.
    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
    ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

    ಆಯ್ಕೆ ವಿಧಾನ: ಮೇಲ್ಕಂಡ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್‌ -ಒಎಂಆರ್‌ ಮಾದರಿ ಮೂಲಕ ಪರೀಕ್ಷೆ ನಡೆಸಲಾಗುವುದು.

  • Government Job: ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಶೈಕ್ಷಣಿಕ ವಿದ್ಯಾರ್ಹತೆ ತಿದ್ದುಪಡಿ; ಇಲ್ಲಿದೆ ಅಧಿಸೂಚನೆ

    Government Job: ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಶೈಕ್ಷಣಿಕ ವಿದ್ಯಾರ್ಹತೆ ತಿದ್ದುಪಡಿ; ಇಲ್ಲಿದೆ ಅಧಿಸೂಚನೆ

    Government Job: ಕಂದಾಯ ಇಲಾಖೆಯು ಇತ್ತೀಚೆಗೆ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಆನ್‌ಲೈನ್‌ ಮೂಲಕ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲು ಸೂಚಿಸಲಾಗಿತ್ತು. ಈ ಅಧಿಸೂಚನೆ ಫೆ.20 ರಂದು ಹೊರಡಿಸಿತ್ತು. ಇದೀಗ ಈ ಹುದ್ದೆಗಳಿಗೆ ಅವಶ್ಯಕವಾಗಿ ಬೇಕಾದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಕೆಲವೊಂದು ತಿದ್ದುಪಡಿಯನ್ನು ಮಾಡಿ ಪ್ರಕಟಣೆ ಹೊರಡಿಸಲಾಗಿದೆ. ತಿದ್ದುಪಡಿಯಲ್ಲೇನಿದೆ? ಇಲ್ಲಿದೆ ವಿವರ

    1. ಶೈಕ್ಷಣಿಕ ವಿದ್ಯಾರ್ಹತೆ (ತಿದ್ದುಪಡಿ ಮಾಡಲಾದ ಶೈಕ್ಷಣಿಕ ವಿವರ)
      ಗ್ರಾಮ ಆಡಳಿತ ಅಧಿಕಾರಿ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ
      (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಪಿ 33 ಟಿವಿಇ 2021 ದಿನಾಂಕ 30.09.2021 ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018 ರನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
    • ಈ ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
    • ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
    • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಷನ್ ಸ್ಕೂಲಿಂಗ್ (ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ಹೆಚ್ ಎಸ್ ಸಿ
    • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ)
    • (ಐಟಿಐ ಕೋರ್ಸ್ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಎನ್‌ಐಓಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಆಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ ಗೆ ತತ್ಸಮಾನವೆಂದು ಪರಿಗಣಿಸಬಹುದು.)

    ಸೂಚನೆ: ಸರ್ಕಾರದ ಪತ್ರ ದಿನಾಂಕ: 19.02.2024. ರಂತೆ ಒಬ್ಬ ಅಭ್ಯರ್ಥಿಯು ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಿರುವುದರಿಂದ, ಅಭ್ಯರ್ಥಿಗಳು ಒಂದೇ ಅರ್ಜಿಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದಕ್ಕೆ ಅರ್ಜಿ ಸಲ್ಲಿಸಿ ಆದ್ಯತೆಯನ್ನು ಸಹ ನಮೂದಿಸಬಹುದಾಗಿರುತ್ತದೆ. ಅದರಂತೆ ಕಲ್ಯಾಣ-ಕರ್ನಾಟಕ ಮತ್ತು ಉಳಿಕೆ ಮೂಲ ವೃಂದಕ್ಕೆ ಅಭ್ಯರ್ಥಿಗಳ ಅರ್ಜಿಗಳನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುವುದು,

    ದಿನಾಂಕ 20.02.2024 ರಂದು ವಿವರವಾದ ಅಧಿಸೂಚನೆಯನ್ನು ಪ್ರಕಟಿಸಲಾಗಿರುತ್ತದೆ. ಪ್ರಾಧಿಕಾರದ ಅಧಿಸೂಚನೆಯ ಕ್ರಮ ಸಂಖ್ಯೆ: 01 ರ ಶೈಕ್ಷಣಿಕ ವಿದ್ಯಾರ್ಹತೆ ರಲ್ಲಿ ಈ ಕೆಳಗಿನಂತೆ ಪ್ರಕಟಿಸಲಾಗಿತ್ತು.

    1. ಶೈಕ್ಷಣಿಕ ವಿದ್ಯಾರ್ಹತೆ (ಹಿಂದೆ ನೀಡಲಾದ ಶೈಕ್ಷಣಿಕ ವಿವರ)
      ಗ್ರಾಮ ಆಡಳಿತ ಅಧಿಕಾರಿ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ
      (ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 81 ಸೇವನೆ 2017, ದಿ: 27.02.2018 ರನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
    • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
    • ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
    • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಓ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ.
    • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜೆ.ಎಲ್.ಡಿ.ಸಿ)
      (ಅಭ್ಯರ್ಥಿಗಳು ಎನ್‌ಐಓಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ ಗೆ ತತ್ಸಮಾನವೆಂದು ಪರಿಗಣಿಸಬಹುದು.)

    ನೋಟಿಫಿಕೇಶನ್‌