Tag: wcd recruitment 2021

  • ಬೀದರ್ 113 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿ ಪರಿಷ್ಕೃತ ಮಾರ್ಗಸೂಚಿಯಂತೆ, ಬೀದರ್ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 17 ಅಂಗನವಾಡಿ ಕಾರ್ಯಕರ್ತೆಯರ ಹಾಗೂ ‌96 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 113 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-07-2021 ರ ಒಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

    ಅಭ್ಯರ್ಥಿಯ ವಯಸ್ಸು 18-35 ವರ್ಷದೊಳಗಿನವರಾಗಿರಬೇಕು. ( ಕಾರ್ಯಕರ್ತರ ಹುದ್ದೆಗಳಿಗೆ ಮಾತ್ರ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ಅಂದರೆ ಗರಿಷ್ಠ 45 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ)

    ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.

    ಅಂಗವಿಕಲರು ಸಹಾಯಕಿ ಹುದ್ದೆಗೆ ಅನರ್ಹರಾಗಿರುತ್ತಾರೆ.

    ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭ : 25-06-2021
    ಅರ್ಜಿಗಳನ್ನು ಸಲ್ಲಿಕೆಯ ಕೊನೆಯ ದಿನಾಂಕ : 31-07-2021
    ಆಯ್ಕೆ ಸಮಿತಿಯಿಂದ ಅರ್ಜಿಗಳ ಪರಿಶೀಲನೆ : 10-08-2021
    ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಮಿತಿಯಿಂದ ಅನುಮೋದನೆ ಪಡೆಯುವುದು : 24-08-2021
    ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿರುವ ಹಾಗೂ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸುವಿಕೆಗೆ ಕಾಲಾವಕಾಶ : 03-09-2021
    ಬಂದ ಆಕ್ಷೇಪಣೆಗಳನ್ನು ಪರಿಶೀಲನೆ : 24-09-2021
    ಅಂತಿಮ ಆಯ್ಕೆ ಪಟ್ಟಿಗೆ ಸಮಿತಿಯಿಂದ ಅನುಮೋದನೆ ಪಡೆಯುವುದು: 22-10-2021

  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 05 ಎಪ್ರಿಲ್ 2021 (5.30pm) ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?:ಆನ್ಲಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-04-2021(5.30)
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ ‌35 ವಯೋಮಿತಿ ಹೊಂದಿರಬೇಕು.
    ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4th,9th ಪಾಸಾಗಿರಬೇಕು.

    ಹುದ್ದೆಗಳ ಸಂಖ್ಯೆ : ಅಂಗನವಾಡಿ ಕಾರ್ಯಕರ್ತೆಯ ಒಟ್ಟು ಹುದ್ದೆ-36

    ಅಂಗನವಾಡಿ ಸಹಾಯಕಿ ಒಟ್ಟು ಹುದ್ದೆ -134

    ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4th,9th ಪಾಸಾಗಿರಬೇಕು.

    ಹುದ್ದೆಗಳ ಸಂಖ್ಯೆ : ಅಂಗನವಾಡಿ ಕಾರ್ಯಕರ್ತೆ ಯ ಒಟ್ಟು ಹುದ್ದೆ-36

    ಅಂಗನವಾಡಿ ಸಹಾಯಕಿ ಒಟ್ಟು ಹುದ್ದೆ -134

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ