Tumkur District Court Recruitment 2024: ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 60 ಹುದ್ದೆಗಳು ಖಾಲಿ ಇದ್ದು, ಸ್ಟೆನೋಗ್ರಾಫರ್, ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ತುಮಕೂರು ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ. ತುಮಕೂರು – ಕರ್ನಾಟಕ ಸರ್ಕಾರದಲ್ಲಿ ಪೋಸ್ಟಿಂಗ್ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 10-Apr-2024 ರಂದು ಅಥವಾ ಮೊದಲು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ-ಗ್ರೇಡ್ III, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 12-03-2024
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 10-04-2024
ಹುದ್ದೆ ಹೆಸರು : ಶೀಘ್ರಲಿಪಿಗಾರ-ಗ್ರೇಡ್-III, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ ಹಾಗೂ ಸೇವಕ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ.
ಹುದ್ದೆಗಳ ವಿವರ:
1. ಶೀಘ್ರ ಲಿಪಿಗಾರ ಗ್ರೇಡ್ III (Stenographer Grade III)– ಹುದ್ದೆಗಳ ಸಂಖ್ಯೆ-10 (ಹೊಸ ಹುದ್ದೆ 6, ಬ್ಯಾಕ್‌ಲಾಗ್ ಹುದ್ದೆ 4)
ವೇತನ : ರೂ.27650 -ರೂ.52650 ಶ್ರೇಣಿಯಲ್ಲಿ ವೇತನ ಸಿಗಲಿದೆ.
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಹಿರಿಯ ಶ್ರೇಣಿ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ: ನೇರ ನೇಮಕಾತಿ, ಕೌಶಲ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
2. ಬೆರಳಚ್ಚುಗಾರ ಹುದ್ದೆ (Typist)
ಹುದ್ದೆಗಳ ಸಂಖ್ಯೆ 05 (ಹೊಸ ಹುದ್ದೆ 4, ಬ್ಯಾಕ್‌ಲಾಗ್ ಹುದ್ದೆ 1)
ವೇತನ: ರೂ.21400-ರೂ.42000 ವೇತನ ಶ್ರೇಣಿ ದೊರಕಲಿದೆ.
ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ 3 ವರ್ಷಗಳ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ: ನೇರ ನೇಮಕಾತಿ, ಕೌಶಲ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
3. ಬೆರಳಚ್ಚು-ನಕಲುಗಾರ ಹುದ್ದೆ (Typist-copyist)
ಹುದ್ದೆಗಳ ಸಂಖ್ಯೆ -05 ಹುದ್ದೆ (ಹೊಸ ಹುದ್ದೆ 3, ಬ್ಯಾಕ್‌ಲಾಗ್ ಹುದ್ದೆಗಳು 2)
ವೇತನ: ರೂ.21400-ರೂ.42000 ಶ್ರೇಣಿಯಲ್ಲಿ ವೇತನ ಸಿಗಲಿದೆ.
ವಿದ್ಯಾರ್ಹತೆ:
ಶೈಕ್ಷಣಿಕ ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಆಂಗ್ಲ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
ಆಯ್ಕೆ ವಿಧಾನ: ನೇರ ನೇಮಕಾತಿ, ಕೌಶಲ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
4. ಸೇವಕ ಹುದ್ದೆ (Peon)
ಹುದ್ದೆಗಳ ಸಂಖ್ಯೆ-40
ವೇತನ ಶ್ರೇಣಿ: ರೂ.17000-ರೂ.28950
ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯಲ್ಲಿ ಬರೆಯಲು ಓದಲು ತಿಳಿದಿರಬೇಕು.
ಆಯ್ಕೆಯ ವಿಧಾನ: ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು. ಸೇವಕ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ 1 ಹುದ್ದೆಗೆ 10 ಅಭ್ಯರ್ಥಿಗಳನ್ನು (1:10ರ ಅನುಪಾತದಲ್ಲಿ) ಮಾತ್ರ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 10ನೇ ತರಗತಿಯ ಅಂಕಗಳು ಶ್ರೇಣಿಯಲ್ಲಿದ್ದರೆ (Grade) ಅದನ್ನು ಅಂಕಗಳಾಗಿ ಪರಿವರ್ತಿಸಿ ಗರಿಷ್ಠ ಅಂಕಗಳು, ಪಡೆದ ಅಂಕಗಳು ಮತ್ತು ಶೇಕಡಾವಾರು ನಮೂದುಗಳನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ನಮೂದಿಸದಿದ್ದಲ್ಲಿ ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ತಿರಸ್ಕರಿಸಲಾಗುವುದು.
ವಯೋಮಿತಿ: ಮೇಲಿನ ಎಲ್ಲಾ ಹುದ್ದೆಗಳಿಗೆ ಕನಿಷ್ಠ ವಯೋಮಿತಿ 18 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ
ಪ.ಜಾ,ಪ.ಪಂ ಮತ್ತ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಶುಲ್ಕ:
ಪ್ರವರ್ಗ-2ಎ,2ಬಿ,3ಎ,3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.200, ಪ.ಜಾ, ಪ.ಪಂ, ಪ್ರವರ್ಗ-I ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.
ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು https://tumakuru.dcourts.gov.in ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ Online payment through Net Banking/ Credit Card/ Debit Card/UPI ID/QR Code ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಇದನ್ನು ಹೊರತುಪಡಿಸಿ ಯಾವುದೇ Demond Draft, Postal Order, Money Order, Challan ಇತ್ಯಾದಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಗಳು ಕೌಶಲ ಪರೀಕ್ಷೆ/ ಸಂದರ್ಶನ/ ದಾಖಲೆ ಪರಿಶೀಲನೆ ಸಮಯದಲ್ಲಿ ಈ ಕೆಳಕಂಡ ದಾಖಲೆಗಳನ್ನು ಹಾಜರುಪಡಿಸತಕ್ಕದ್ದು:
ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯ ಪ್ರತಿ
ಶುಲ್ಕವನ್ನು ಪಾವತಿಸಿದ ರಶೀದಿಯ ಪ್ರತಿ
ಎಸ್.ಎಸ್.ಎಲ್.ಸಿ/ ತತ್ಸಮಾನ ಅಂಕಪಟ್ಟಿ
ದ್ವಿತೀಯ ಪಿ.ಯು.ಸಿ/ ತತ್ಸಮಾನ ಅಂಕಪಟ್ಟಿ
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿಗಳನ್ನು ಅಭ್ಯರ್ಥಿಗಳು ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್‌ಸೈಟ್ https://tumakuru.dcourts.gov.in ನಲ್ಲೆ ನೀಡಲಾದ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ 12/03/2024 ರಿಂದ 10/04/2024 ರ ರಾತ್ರಿ 11.59 ರೊಳಗೆ ಸಲ್ಲಿಸಬೇಕು.