Zilla Panchayat Jobs: ತುಮಕೂರು ಜಿಲ್ಲಾ ಪಂಚಾಯತ್‌ ನೇಮಕಾತಿ- 33 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

Tumkuru Zilla Panchayath: ತುಮಕೂರು ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಭರ್ತಿ ಮಾಡಲಾಗುವುದು. ಈ ಕುರಿತು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ, ಗ್ರಂಥಾಲಯ ಮೇಲ್ವಿಚಾರಕರನ್ನು ಗೌರವ ಸಂಭಾವನೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಒಟ್ಟು 33 ಹುದ್ದೆಗಳು ಖಾಲಿ ಇದ್ದು ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಎಪ್ರಿಲ್‌ 24, 2024 ಕೊನೆಯ ದಿನಾಂಕವಾಗಿದ್ದು, ಆಸಕ್ತರು ಅದೊರಳಗೆ ಅರ್ಜಿ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-04-2024. ಅರ್ಹ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್‌ ಕಾರ್ಯಾಲಯಕ್ಕೆ ದಿನಾಂಕ 24.04-2024 ರ ಸಂಜೆ 5 ಗಂಟೆಯ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವುದು.

ಹುದ್ದೆಯ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆ ಹೆಸರು: ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಯನ್ನು ಭರ್ತಿ ಮಾಡಲು ತುಮಕೂರು ಜಿಲ್ಲಾ ಪಂಚಾಯತ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆ ಸಂಖ್ಯೆ: ಒಟ್ಟು 33 ಹುದ್ದೆಗಳು ಖಾಲಿ ಇದೆ.

ಗೌರವ ಧನ: ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ರೂ.15,197/- ಗೌರವ ಸಂಭಾವನೆಯನ್ನು ನೀಡಲಾಗುವುದು. ಈ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯಾ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 18 ವರ್ಷ ಪೂರೈಸಿರತಕ್ಕದ್ದು. ಸಾಮಾನ್ಯ ವರ್ಗ 35 ವರ್ಷ, 2ಎ,2ಬಿ,3ಎ,3ಬಿ 38 ವರ್ಷ, ಪ.ಜಾತಿ/ಪ.ಪಂಗಡ/ಪ್ರ-1 40 ವರ್ಷ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್‌ ಲಿಸ್ಟ್‌ ಮೂಲಕ ಆಯ್ಕೆ ಮಾಡಲಾಗುವುದು.

ಗ್ರಾಮೀಣ ಅಭ್ಯರ್ಥಿಗೆ ಸಂಬಂಧಪಟ್ಟ ಅಭ್ಯರ್ಥಿ ಪ್ರಮಾಣ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆದು ಸಲ್ಲಿಸತಕ್ಕದ್ದು. ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ದಿನಾಂಕ ಸಂಜೆ 5 ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ಅರ್ಜಿ ನಮೂನೆಯನ್ನು ಜಿಲ್ಲಾ ಪಂಚಾಯಿತಿ ವೆಬ್‌ಸೈಟ್‌ https://zptumakuru.karnataka.gov.in/en ರಲ್ಲಿ ಪಡೆಯಬಹುದಾಗಿದೆ. ಅಥವಾ ಉಪಕಾರ್ಯದರ್ಸಿ (ಆಡಳಿತ), ಜಿಲ್ಲಾ ಪಂಚಾಯತ್‌, ತುಮಕೂರು ಇವರನ್ನು ಈ ಕಚೇರಿಯ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು.