ತುಮಕೂರು ಯುನಿವರ್ಸಿಟಿ: ಹುದ್ದೆಗಳಿಗೆ ಅರ್ಜಿ‌ ಆಹ್ವಾನ

Advertisements

ತುಮಕೂರು ವಿಶ್ವವಿದ್ಯಾಲಯ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಕೆಯು ದಿನಾಂಕ ಜೂನ್, 10 ರಂದು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆ : ಸಂಶೋಧನಾ ಸಹಾಯಕ, ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ : ಪೋಸ್ಟ್ ಗ್ರಾಜ್ಯುಯೇಟ್ ಮತ್ತು ಎಂಎ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ವೇತನ : ಸಂಶೋಧನಾ ಸಹಾಯಕ ಹುದ್ದೆಗೆ ಮಾಸಿಕ ರೂ.17,000/-, ಕ್ಷೇತ್ರ ತನಿಖಾಧಿಕಾರಿ ಹುದ್ದೆಗೆ ಮಾಸಿಕ ರೂ.15,000/- ವೇತನ‌ ನಿಗದಿ ಪಡಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 10, ಜೂನ್, 2021 ರೊಳಗೆ ಸಲ್ಲಿಸಬೇಕು.

ವಿಳಾಸ : Dr. Ramesh Salian, Principal Investigator, ICSSR Research Project, University College Arts, Tumkur University, Tumkur- 572103

Leave a Comment