UAS Bangalore Recruitment 2024: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿ; ಎ.4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

Advertisements

UAS Bangalore Recruitment 2024: ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 55 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ವಿವಿಧ ಬೋಧಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾ.26 ರವರೆಗೆ ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ದಿನಾಂಕ ವಿಸ್ತರಣೆ ಮಾಡಿದ್ದು ಎಪ್ರಿಲ್‌ 4 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಹಾಗಾಗಿ ಈ ಹುದ್ದೆಗೆ ಅರ್ಜಿ ಸಲ್ಲಿಸದವರು ಬೇಗನೇ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ; ಎಪ್ರಿಲ್‌, 4, 2024

ಹುದ್ದೆಯ ಕುರಿತ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆ ಹೆಸರು ಮತ್ತು ಸಂಖ್ಯೆ:
ಅಸೋಸಿಯೇಟ್‌ ಪ್ರೊಫೆಸರ್‌: 5 ಹುದ್ದೆಗಳು
ಅಸಿಸ್ಟಂಟ್‌ ಪ್ರೊಫೆಸರ್‌ : 50 ಹುದ್ದೆಗಳು

ಕೃಷಿ ವಿಷಯದ ವಿವಿಧ ಉಪ ವಿಷಯಗಳು, ಆಗ್ರೋನಮಿ, ತೋಟಗಾರಿಕೆ ವಿಷಯ, ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ, ಪ್ಲಾಂಟ್ ಪೇಥಾಲಜಿ, ಬೀಜ ವಿಜ್ಞಾನ ಮತ್ತು ತಂತ್ರಜ್ಞಾನ, ಜೆನೆಟಿಕ್ಸ್‌ ಮತ್ತು ಪ್ಲಾಂಟ್ ಬ್ರೀಡಿಂಗ್, ಸಿರಿಕಲ್ಚರ್, ಆಹಾರ ವಿಜ್ಞಾನಗಳು ಮತ್ತು ನ್ಯೂಟ್ರಿಷನ್, ಪ್ಲಾಂಟ್ ಬಯೋಟೆಕ್ನಾಲಜಿ, ಫಿಶೆರೀಸ್, ಇತರೆ ವಿಷಯಗಳಲ್ಲಿ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು.

ವೇತನ ಶ್ರೇಣಿ
ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವೇತನ ರೂ.1,31,400-2,17,100 ಇರಲಿದೆ
ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ Rs.57,700-1,82,400 ವೇತನ ಇರಲಿದೆ.

ವಿದ್ಯಾರ್ಹತೆ: ಬೋಧಕ ಹುದ್ದೆಗಳಿಗೆ ಸಂಬಂಧಪಟ್ಟಂತೆ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಜೊತೆಗೆ ಪಿಹೆಚ್‌ಡಿ ತೇರ್ಗಡೆ ಮಾಡಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯ ಲಿಂಕ್‌ ಕ್ಲಿಕ್‌ ಮಾಡಿ ವಿವರ ತಿಳಿದುಕೊಳ್ಳಬಹುದು.

ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.2000, ಎಸ್‌ಸಿ / ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ ರೂ.1000 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:
ಬೆಂಗಳೂರು ಕೃಷಿ ವಿಜ್ಞಾನಗಳ ವಿವಿ ವೆಬ್‌ಸೈಟ್‌ ವಿಳಾಸಕ್ಕೆ ಅಭ್ಯರ್ಥಿಗಳು ಭೇಟಿ ನೀಡಬೇಕು
ಅಲ್ಲಿ ಅಸೋಸಿಯೇಟ್‌ ಪ್ರೊಫೆಸರ್‌, ಅಸಿಸ್ಟಂಟ್‌ ಪ್ರೊಫೆಸರ್‌ ಹುದ್ದೆಗೆ ಪ್ರತ್ಯೇಕ ಅರ್ಜಿ ನಮೂನೆಯ ಲಿಂಕ್‌ ಗೆ ಕ್ಲಿಕ್‌ ಮಾಡಬೇಕು.
ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದು ಭರ್ತಿ ಮಾಡಿ, ಪೂರಕ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ವಿಶೇಷ ಸೂಚನೆ: ಅರ್ಜಿಯ ಲಕೋಟೆಯ ಮೇಲೆ ಯಾವ ಹುದ್ದೆಗೆ ಅರ್ಜಿ ಎಂದು ಬರೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ