ಉಡುಪಿ ; ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರ ನೇಮಕ, ಅರ್ಜಿ ಸಲ್ಲಿಕೆಗೆ 30, ಸೆಪ್ಟೆಂಬರ್ ಕಡೇ ದಿನಾಂಕ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಹತೆ, ಅರ್ಜಿ ಶುಲ್ಕ , ಪ್ರಮುಖ ದಿನಾಂಕಗಳು, ವೇತನ ಈ ಕೆಳಗೆ ನೀಡಲಾಗಿದೆ.

ಹುದ್ದೆಯ ವಿವರ : ಶೀಘ್ರಲಿಪಿಗಾರರು

ಹುದ್ದೆ ಸಂಖ್ಯೆ : 8

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-09-2021

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – 04-10-2021

ವೇತನ : ರೂ.ಎಸ್27,650/-ರೂ.52,650/- ರವರೆಗೆ ನಿಗದಿಪಡಿಸಲಾಗಿದೆ.

ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್ ಸಿ/ ಎಸ್ ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಹೊಂದಿರಬೇಕು.

ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 200/-, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ. 100/-, ಎಸ್ ಸಿ/ಎಸ್ ಟಿ/ ಪ್ರವರ್ಗ -1 ಅಭ್ಯರ್ಥಿಗಳಿಗೆ ರೂ. 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳು ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಅಥವಾ, ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೇಟೇರಿಯಲ್ ಪ್ರಾಕ್ಟೀಕಲ್ ಪಠ್ಯ ಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲಭಾಷೆಗಳ ಶೀಘ್ರಲಿಪಿ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯಗಳನ್ನಾಗಿ ಹೊಂದಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ

ಮೇಲಿನ‌ ಅರ್ಹತೆಗಳ ಶೇಕಡಾವಾರು ಅಂಕಗಳು ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನಗಳನ್ನು ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ತೆಗೆದುಕೊಂಡು ಉಕ್ತಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ

ನೋಟಿಫಿಕೇಶನ್

Leave a Comment