ಉಡುಪಿ ಅಂಚೆ ಇಲಾಖೆಯಲ್ಲಿ ಹುದ್ದೆ, ನೇರ ಸಂದರ್ಶನಕ್ಕೆ ಆಹ್ವಾನ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಆದ್ಯತೆ

Advertisements

ಭಾರತೀಯ ಅಂಚೆ ಇಲಾಖೆಯ ವತಿಯಿಂದ ಉಡುಪಿ ನಗರ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮಾ ಏಜೆಂಟ್ ಆಗಿ ಕಾರ್ಯನಿರ್ವಹಿಸಲು ಆಸಕ್ತರನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ.

ಕನಿಷ್ಠ ಎಸ್ ಎಸ್ ಎಲ್ ಸಿ ತೇರ್ಗಡೆಗೊಂಡ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

18 ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್, ಪಾನ್ ಕಾರ್ಡ್, ಎಸ್ ಎಸ್ ಎಲ್ ಸಿ‌ ಅಂಕಪಟ್ಟಿಯ ಮೂಲ ಪ್ರತಿ, ಝೆರಾಕ್ಸ್ ಪ್ರತಿ, ಎರಡು ಪಾಸ್ ಪೋರ್ಟ್ ಸೈಜಿನ ಫೊಟೋ ಜೊತೆಗೆ ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಜುಲೈ 30 ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2520471 ಅಥವಾ ಮೊಬೈಲ್ ನಂಬರ್ 9448291071 ನ್ನು ಸಂಪರ್ಕಿಸುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Leave a Comment