Union Bank Recruitment 2024: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹುದ್ದೆ ಪಡೆಯಲು ಇಚ್ಛೆ ಪಡುವವರಿಗೆ ಸಿಹಿ ಸುದ್ದಿ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank Recruitment 2024) ಸ್ಪೆಷಲಿಸ್ಟ್ ಆಫೀಸರ್ (ಮ್ಯಾನೇಜರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 606 ಸ್ಪೆಷಲಿಸ್ಟ್ ಆಫಿಸರ್ಸ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಭಾರತದಲ್ಲಿ ವೃತ್ತಿ ಜೀವನ ಪ್ರಾರಂಭ ಮಾಡಲು ಇಚ್ಛೆ ಪಡುವ ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 03-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-02-2024
ಹುದ್ದೆ ಸಂಖ್ಯೆ: ಯೂನಿಯನ್ ಬ್ಯಾಂಕ್‌ನಲ್ಲಿ ಒಟ್ಟು 606 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಅಧಿಕಾರಿಗಳು (ಮ್ಯಾನೇಜರ್) ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ವೇತನ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 36,000-89890/- ವೇತ ಸಿಗಲಿದೆ.
ವಯೋಮಿತಿ: ಯೂನಿಯನ್ ಬ್ಯಾಂಕ್‌ನ ವಿವಿಧ ಹುದ್ದೆಗೆ ವಿವಿಧ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಈ ಕುರಿತ ಮಾಹಿತಿಗಾಗಿ ಸಂಸ್ಥೆಯ ನೋಟಿಫಿಕೇಶನ್ ಚೆಕ್ ಮಾಡಬಹುದು. ಉಳಿದ ಹಾಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದ್ದು, ಇದರಲ್ಲಿ OBC (NCL) ಅಭ್ಯರ್ಥಿಗಳಿಗೆ ಮೂರು ವರ್ಷ, SC/ST ಅಭ್ಯರ್ಥಿಗಳಿಗೆ ಐದು ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: SC/ST/PwBD ಅಭ್ಯರ್ಥಿಗಳಿಗೆ ರೂ.175/- ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ ರೂ.850/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಯನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ರೀತಿ ಇಲ್ಲಿದೆ;
ಮೊದಲನೆಯದಾಗಿ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್‌ನ ನೇಮಕಾತಿ ಅಧಿಸೂಚನೆಯನ್ನು ಅಭ್ಯರ್ಥಿಗಳು ಸಂಪೂರ್ಣವಾಗಿ ಪರಿಶೀಲಿಸಬೇಕು.
ನಂತರ ಐಡಿ, ಮೊಬೈಲ್ ಸಂಖ್ಯೆ, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಇತ್ಯಾದಿಗಳನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲೇ ಅಭ್ಯರ್ಥಿಗಳು ಸಿದ್ಧಮಾಡಿಟ್ಟುಕೊಳ್ಳಬೇಕು.
ನಂತರ ವೆಬ್‌ಸೈಟ್‌ನಲ್ಲಿ ಯೂನಿಯನ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ಸ್ (ಮ್ಯಾನೇಜರ್) ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನೀಡಿರುವ ಲಿಂಕನ್ನು ಅಭ್ಯರ್ಥಿಗಳು ಕ್ಲಿಕ್ ಮಾಡಬೇಕು
ಎಲ್ಲಾ ಅಗತ್ಯ ವಿವರಗಳನ್ನು ನಮೂದಿಸಬೇಕು. ಇತ್ತೀಚಿನ ಭಾವಚಿತ್ರ ಜೊತೆ ಅಗತ್ಯ ಪ್ರಮಾಣ ಪತ್ರಗಳ ಸ್ಕ್ಯಾನ್ ಅಪಲೋಡ್ ಮಾಡಬೇಕು.
ನಂತರ ಅರ್ಜಿ ಶುಲ್ಕ ಪಾವತಿಸಿ
ನಂತರ ಕೊನೆಯದಾಗಿ ನೇಮಕಾತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್‌ನ ವೆಬ್‌ಸೈಟ್ www.unionbankofindia.co.in ಭೇಟಿ ನೀಡಿ ವಿವರಗಳನ್ನು ತಿಳಿದುಕೊಳ್ಳಬಹುದು.