ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ದೆಹಲಿ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ದೆಹಲಿ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 16, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಫೆಬ್ರವರಿ 23,2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 16, 2021
ಅರ್ಜಿ ಶುಲ್ಕಪಾವತಿಸಲು ಕೊನೆಯ ದಿನಾಂಕ: ಮಾರ್ಚ್ 17, 2021
ಅರ್ಜಿ ತಿದ್ದುಪಡಿಗೆ ಕೊನೆಯ ದಿನಾಂಕ : ಮಾರ್ಚ್ 18 – 20, 2021
ದೆಹಲಿ ವಿಶ್ವವಿದ್ಯಾಲಯದ ಬೋಧಕೇತರ ಹುದ್ದೆಗಳ ನೇಮಕಾತಿ ಮೂಲಕ 1145 ಹುದ್ದೆಗಳನ್ನು ಭರ್ತಿ ಮಾಡಲಿದೆ.
ಹುದ್ದೆಗಳ ವಿವರ : ಜೂನಿಯರ್ ಅಸಿಸ್ಟೆಂಟ್, ಟೆಲಿಫೋನ್ ಅಪರೇಟರ್, ಅಸಿಸ್ಟೆಂಟ್,ಸ್ಟೆನೋಗ್ರಾಫರ್,ಯೋಗ ವ್ಯವಸ್ಥಾಪಕ, ಹಿರಿಯ ವೈಯಕ್ತಿಕ ಸಹಾಯಕ, ನರ್ಸ್, ಭಾಷಾಂತರಕಾರರು, ಕ್ರಿಡಾ ಕೋಚ್ ಸೇರಿದಂತೆ ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ, ಐಟಿಐ, ಡಿಪ್ಲೋಮಾ ಕೋರ್ಸ್ ತೇರ್ಗಡೆ ಹೊಂದಿರಬೇಕು. ಹಾಗೂ ನಿಗದಿತ ಕಾರ್ಯಾನುಭವವನ್ನು ಹೊಂದಿರಬೇಕು.
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪಿಡ್ಬ್ಯು ಡಿ ಅಭ್ಯರ್ಥಿಗಳು ರೂ.600/-, ಒಬಿಸಿ ಅಭ್ಯರ್ಥಿಗಳು ರೂ.800/-,ಸಾಮಾನ್ಯ ಅಭ್ಯರ್ಥಿಗಳು ರೂ.1000/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಆನ್ಲೈನ್ ಟೆಸ್ಟ್, ಪರ್ಸನಾಲಿಟಿ ಟೆಸ್ಟ್, ಸಂದರ್ಶನ, ಕೌಶಲ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ