UPSC EPFO ಪ್ರವೇಶ ಪತ್ರ ಬಿಡುಗಡೆ

Advertisements

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಎನ್‌ಫೋರ್ಸ್‌ಮೆಂಟ್ ಆಫೀಸರ್ ಅಕೌಂಟ್ಸ್ ಆಫೀಸರ್ ಪರೀಕ್ಷೆಗೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಿದೆ.

ಇಪಿಎಫ್‌ಒ ಪರೀಕ್ಷೆಯ ಪ್ರವೇಶ ಪತ್ರವನ್ನು ಯುಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ದಿನಾಂಕ ಮೇ, 09, 2021 ರವರೆಗೆ ಡೌನ್‌ಲೋಡ್‌ ಮಾಡಲು ಅವಕಾಶವಿದೆ. ಅಭ್ಯರ್ಥಿಗಳು upsc.gov.in ವೆಬ್‌ಸೈಟ್ ಗೆ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಕಡ್ಡಾಯ. ನೀಡಲಾಗಿರುವ ಮಾರ್ಗಸೂಚಿಗಳನ್ನು ಫಾಲೋ ಮಾಡಬೇಕು. ಪರೀಕ್ಷೆ ದಿನಾಂಕ, ಪರೀಕ್ಷಾ ಕೇಂದ್ರ ಇತ್ಯಾದಿ ಮಾಹಿತಿಗಳನ್ನು ಪ್ರವೇಶ ಪತ್ರದಲ್ಲಿ ನೀಡಲಾಗುತ್ತದೆ. ಪ್ರವೇಶ ಪತ್ರದ ಜೊತೆಗೆ ಇತರೆ ಇನ್ನೊಂದು ಅಧಿಕೃತ ಗುರುತಿನ ಚೀಟಿಯನ್ನು ಅಭ್ಯರ್ಥಿಗಳು ತರಬೇಕು.

ಯುಪಿಎಸ್‌ಸಿ ಇಪಿಎಫ್‌ಒ ಪರೀಕ್ಷೆಯನ್ನು ಮೇ. 09,2021 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12ಗಂಟೆ ವರೆಗೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಲಾಗಿದೆ.

Leave a Comment