UPSC EPFO ESIC Recruitment 2024: 2253 ಕೇಂದ್ರ ಸರಕಾರಿ ಹುದ್ದೆಗಳು ಖಾಲಿ ಇದೆ, ಈ ಕೂಡಲೇ ಅರ್ಜಿ ಸಲ್ಲಿಸಿ

Advertisements

UPSC Recruitment 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 2253 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರ್ಸನಲ್ ಅಸಿಸ್ಟೆಂಟ್, ನರ್ಸಿಂಗ್ ಆಫೀಸರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 27-Mar-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ; 07-03-2024
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2024
ಅರ್ಜಿ ನಮೂನೆಗಾಗಿ ಸಂಪಾದನೆ/ತಿದ್ದುಪಡಿ ಸೌಲಭ್ಯದ ದಿನಾಂಕ: 28ನೇ ಮಾರ್ಚ್ 2024 ರಿಂದ 03ನೇ ಏಪ್ರಿಲ್ 2024

ಹುದ್ದೆಗಳ ವಿವರ ಇಲ್ಲಿದೆ;
ಹುದ್ದೆಯ ಹೆಸರು ಮತ್ತು ಸಂಖ್ಯೆ:
ನರ್ಸಿಂಗ್ ಅಧಿಕಾರಿ ಹದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 1930 ಹುದ್ದೆಗಳು ಖಾಲಿ ಇದೆ.
ವೈಯಕ್ತಿಕ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 323 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ: ನರ್ಸಿಂಗ್ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮಾ, ಬಿ.ಎಸ್ಸಿ ಮಾಡಿರಬೇಕು. ವೈಯಕ್ತಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಮಾಡಿರಬೇಕು.

ವಯಸ್ಸಿನ ಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು. OBC ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ, PwBD (UR) ಅಭ್ಯರ್ಥಿಗಳಿಗೆ 10 ವರ್ಷ, PwBD (OBC) ಅಭ್ಯರ್ಥಿಗಳಿಗೆ 10 ವರ್ಷ, PwBD (SC/ST) ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ. ಇತರ ಎಲ್ಲಾ ಅಭ್ಯರ್ಥಿಗಳು ರೂ.25 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ
ನರ್ಸಿಂಗ್‌ ಆಫೀಸರ್‌ ನೋಟಿಫಿಕೇಶನ್‌ ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ
ಪರ್ಸನಲ್‌ ಅಸಿಸ್ಟೆಂಟ್‌ ನೋಟಿಫಿಕೇಶನ್‌ ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ