Advertisements
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ರಾಷ್ಟ್ರೀಯ ಭದ್ರತಾ ಅಕಾಡೆಮಿ ಮತ್ತು ನೌಕಾ ಅಕಾಡೆಮಿ ( ಎನ್‌ಡಿಎ ಮತ್ತು ಎನ್‌ಎ(I)) ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟಿಸಿದೆ.
ಒಟ್ಟು 400 ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 19, 2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದೆ.
ಯುಪಿಎಸ್ಸಿ ಎನ್‌ಡಿಎ(I) ಮತ್ತು ಎನ್‌ಎ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವ ವಿವರ ಇಲ್ಲಿದೆ :
ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಹೋಂ ಪೇಜ್ ನಲ್ಲಿ ಪ್ರವೇಶ ಪತ್ರದ ಲಿಂಕ್ ಕ್ಲಿಕ್ ಮಾಡಿ, ನಂತರ ಇನ್ನೊಂದು ಪುಟ ಬರುತ್ತೆ ಅಲ್ಲಿ ಬರುವ ಲಿಂಕ್ ಕ್ಲಿಕ್ ಮಾಡಿ, ಆಮೇಲೆ ಅಭ್ಯರ್ಥಿಗಳು ರಿಜಿಸ್ಟ್ರೇಶನ್ ಐಡಿ ಮತ್ತು ರೋಲ್ ನಂಬರ್ ನಮೂದಿಸಿ, ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಕಾಣಿಸುತ್ತದೆ.
ಯುಪಿಎಸ್ಸಿ ಅಧಿಕೃತ ವೆಬ್‌ಸೈಟ್ ಲಿಂಕ್ ಇಲ್ಲಿದೆ. https://www.upsc.gov.in/