ಐಎಫ್ ಎಸ್ ನಲ್ಲಿ 110 ಹುದ್ದೆಗೆ ಅರ್ಜಿ ಆಹ್ವಾನ

Advertisements

ಕೇಂದ್ರ ಲೋಕಸೇವಾ ಆಯೋಗದಿಂದ ಪ್ರತಿವರ್ಷ ಕರೆಯಲಾಗುತ್ತಿರುವ ಐಎಫ್ ಎಸ್ (ಇಂಡಿಯನ್ ಫಾರೆಸ್ಟ್ ಸರ್ವಿಸಸ್ ) ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಸಂಖ್ಯೆ : ಒಟ್ಟು 110 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆನ್ ಲೈನ್ ಅರ್ಜಿ ಈಗಾಗಲೇ ಪ್ರಾಭವಾಗಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮುಖ್ಯ ದಿನಾಂಕ

ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 04-03-2021

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24-03-2021

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 24-03-2021

ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಎಸ್ಸಿ ಪದವಿಯನ್ನು ಪಾಸಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 21ಹಾಗೂ ಗರಿಷ್ಠ ವಯೋಮಿತಿ 32 ಹೊಂದಿರಬೇಕು.

ಅರ್ಜಿ ಶುಲ್ಕ :ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ.100/- ಹಾಗೂ ಎಸ್.ಟಿ, ಎಸ್.ಸಿ, ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾ‌ನ : ಅಭ್ಯರ್ಥಿಗಳಿಗೆ ಎರಡು ಹಂತದಲ್ಲಿ ಲಿಖಿತ ಪರೀಕ್ಷೆ ಗಳನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

https://upsconline.nic.in/mainmenu2.php

Leave a Comment