ಯುಪಿಎಸ್ ಸಿ ವಿವಿಧ ಹುದ್ದೆ: ಕೂಡಲೇ ಅರ್ಜಿ ಸಲ್ಲಿಸಿ

Advertisements

ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ ಸಿ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 18, ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-03-2021
ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಇಲ್ಲ.

ಯುಪಿಎಸ್ ಸಿ ನಲ್ಲಿ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್, ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು ಹುದ್ದೆಗಳ ಸಂಖ್ಯೆ 89 ಇದ್ದು, ಇದರಲ್ಲಿ ಇಕಾನಮಿಕ್ ಆಫೀಸರ್ -1, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ 10, ಪ್ರಾಗ್ರಾಮರ್ ಗ್ರೇಡ್ ಎ. 1, ಪಬ್ಲಿಕ್ ಪ್ರಾಸಿಕ್ಯೂಟರ್ 43, ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ 26, ಸೀನಿಯರ್ ಸೈನ್ಟಿಫಿಕ್ ಆಫೀಸರ್-8 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಜನರಲ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.25/-, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳ ನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ : ಎಕಾನಮಿಕ್ ಆಫೀಸರ್, ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವಯೋಮಿತಿ ಹೊಂದಿರಬೇಕು.

ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್, ಪಬ್ಲಿಕ್ ಪ್ರಾಸಿಕ್ಯೂಟರ್, ಪ್ರಾಗ್ರಾಮರ್ ಗ್ರೇಡ್ ಎ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಆಗಿರಬೇಕು.

ಸೀನಿಯರ್ ಸೈನ್ಟಿಫಿಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 38 ವಯೋಮಿತಿ ಹೊಂದಿರಬೇಕು.

ವಿದ್ಯಾರ್ಹತೆ ; ಹುದ್ದೆಗಳಿಗನುಸಾರವಾಗಿ ಅಭ್ಯರ್ಥಿಗಳು ಎಕಾನಮಿಕ್ ಆಫೀಸರ್ ಹುದ್ದೆಗೆ ಪೋಸ್ಟ್ ಗ್ರಾಜ್ಯುಯೇಶನ್, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗೆ ಬಿ.ಇ/ಬಿ.ಟೆಕ್, ಪ್ರೊಗ್ರಾಮರ್ ಗ್ರೇಡ್ ಎ ಹುದ್ದೆಗೆ ಮಾಸ್ಟರ್ಸ್ ಡಿಗ್ರಿ, ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗೆ ಡಿಗ್ರಿ ಇನ್ ಲಾ , ಸೀನಿಯರ್ ಸೈನ್ಟಿಫಿಕ್ ಹುದ್ದೆಗೆ ಮಾಸ್ಟರ್ಸ್ ಡಿಗ್ರಿ ಹೊಂದಿರಬೇಕು.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 18-03-2021 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ: https://www.upsc.gov.in/

Leave a Comment