UPSC : 159 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ ಸಿ)ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 05 ಮೇ, 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-05-2021

ಹುದ್ದೆ ಸ್ಥಳ: ಭಾರತದೆಲ್ಲೆಡೆ

ಹುದ್ದೆ : ಸೆಂಟ್ರಲ್ ಆರ್ಮ್ ಡ್ ಪೊಲೀಸ್ ಫೋರ್ಸಸ್(ಅಸಿಸ್ಟೆಂಟ್ ಕಮಾಂಡೆಂಟ್ಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

ಹುದ್ದೆಗಳ ವಿವರ : ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ ಎಫ್) – 35
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್ ಪಿಎಫ್) – 36
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ ಎಫ್)- 67
ಇಂಡೋ ಟಿಬೆಟಿಯನ್ ಬಾರ್ಡರ್ ಫೋರ್ಸ್ (ಐಟಿಬಿಪಿ)- 20
ಸಹಸ್ರ ಸೀಮಾ ಬಲ್ ( ಎಸ್ ಎಸ್ ಬಿ) – 01

ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು. ಜನರಲ್ ಅಭ್ಯರ್ಥಿಗಳಿಗೆ ರೂ. 200/- ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಫಿಸಿಕಲ್ ಸ್ಟ್ಯಾಂಡರ್ಡ್‌/ಪಿಇಟಿ/ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿ ಯಿಂದ ಡಿಗ್ರಿ ಯನ್ನು ಪಡೆದಿರಬೇಕು.

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗಯ ಗರಿಷ್ಠ 25 ವಯೋಮಿತಿ ಹೊಂದಿರಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಎಕ್ಸ್ ಸರ್ವಿಸ್ ಮೆನ್ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.

ಅಧಿಕೃತ ವೆಬ್‌ಸೈಟ್‌ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ.

ನೋಟಿಫಿಕೇಶನ್‌ಗಾಗಿ ಈ ಲಿಂಕ್‌ ಕ್ಲಿಕ್ ಮಾಡಿ

Leave a Comment