UPSC : 363 ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಿ : ಇಲ್ಲಿದೆ ವಿವರ

Advertisements

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆ : ಪ್ರಿನ್ಸಿಪಾಲ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 363 ಹುದ್ದೆಯಲ್ಲಿ ಪುರುಷ ಅಭ್ಯರ್ಥಿಗಳಿಗೆ 208 ಹುದ್ದೆ ಹಾಗೂ ಉಳಿದ 155 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗಾಗಿರುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷ ಮೀರಿರಬಾರದು. ಇಲ್ಲಿ ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡುವಂತಿಲ್ಲ. ಆಯ್ಕೆ ಪ್ರಕ್ರಿಯೆಯು ಸಂದರ್ಶನದ ಮೂಲಕ ನಡೆಯುತ್ತದೆ.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಲ್ಲಿ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :23-04-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-05-2021

ಆಫೀಶಿಯಲ್ ವೆಬ್‌ಸೈಟ್ ಲಿಂಕ್‌ ಗಾಗಿ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Comment