UPSC Recruitment 2024: ಕೇಂದ್ರ ಸರಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್‌ನ್ಯೂಸ್. ಹೌದು, ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) 2024 ರ ಸಿವಿಲ್ ಸರ್ವೀಸಸ್ ಪರೀಕ್ಷೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ನಾಗರಿಕ ಸೇವೇಗಳ ಪರೀಕ್ಷೆಯ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಹುದ್ದೆಯ ಕುರಿತು ಆಸಕ್ತಿ ಹೊಂದಿದ್ದಲ್ಲಿ ಹಾಗೂ ಹುದ್ದೆಯ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿರುವವರು ಅಧಿಸೂಚನೆಯನ್ನು ಓದಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಅಧಿಸೂಚನೆಯ ಪ್ರಕಟಗೊಂಡ ದಿನಾಂಕ: 14-02-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-03-2024 ಸಂಜೆ 06:00 ರವರೆಗೆ. ನೋಂದಾಯಿತ ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿ ಮಾರ್ಚ್ 6 ರಿಂದ ಮಾರ್ಚ್ 12 ರವರೆಗೆ ತಿದ್ದುಪಡಿಗಳನ್ನು ಮಾಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪೂರ್ವಭಾವಿ ಪರೀಕ್ಷೆಯ ದಿನಾಂಕ: 26-05-2024
ಹುದ್ದೆ: ಸಿವಿಲ್ ಸರ್ವಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ಎಲ್ಲಾ ಅರ್ಹತೆಗಳನ್ನು ಪೂರ್ಣಗೊಳಿಸುವವರು ಅರ್ಜಿ ಸಲ್ಲಿಸಬಹುದು.
UPSC ಈ ಕೆಳಗಿನ ಸೇವೆಗಳಿಗೆ ಪರೀಕ್ಷೆಯನ್ನು ನಡೆಸುತ್ತದೆ;
ಭಾರತೀಯ ಆಡಳಿತ ಸೇವೆ (IAS), ಭಾರತೀಯ ಪೊಲೀಸ್ ಸೇವೆ (IPS), ಭಾರತೀಯ ವಿದೇಶಾಂಗ ಸೇವೆ (IFS) ಮತ್ತು ಭಾರತೀಯ ಕಂದಾಯ ಸೇವೆ (IRS) ಗಳಲ್ಲಿ ಪ್ರಮುಖ ಸರ್ಕಾರಿ ಹುದ್ದೆಗಳಿಗೆ ಗ್ರೂಪ್ A ಮತ್ತು B ಮಟ್ಟದ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪರೀಕ್ಷೆ ನಡೆಸಲಾಗುತ್ತದೆ.
ಹುದ್ದೆಗಳ ಸಂಖ್ಯೆ: UPSC ಕಳೆದ ವರ್ಷ ನಾಗರಿಕ ಸೇವೆಗಳಿಗೆ ಒಟ್ಟು 1105 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಆದರೆ ಈ ಬಾರಿ ಒಟ್ಟು 1056 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಒಟ್ಟು 1056 ಹುದ್ದೆಗಳಲ್ಲಿ ಬೆಂಚ್‌ಮಾರ್ಕ್ ಅಸಾಮರ್ಥ್ಯ ವರ್ಗದ ವ್ಯಕ್ತಿಗಳಿಗೆ 40 ಹುದ್ದೆಗಳನ್ನು ಕಾಯ್ದಿರಿಸಲಾಗಿದೆ.
ಅರ್ಜಿ ಶುಲ್ಕ: SC/ ST/ ಸ್ತ್ರೀ ಮತ್ತು PwBD ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳು ರೂ.100 ನ್ನು ಪಾವತಿ ಮಾಡಬೇಕು. ಅಭ್ಯರ್ಥಿಗಳು ನೆಟ್ ಬ್ಯಾಂಕಿಂಗ್ ಸೌಲಭ್ಯದ ಮೂಲಕ ವೀಸಾ/ಮಾಸ್ಟರ್/ರುಪೇ/ಕ್ರೆಡಿಟ್/ಡೆಬಿಟ್ ಕಾರ್ಡ್/ ಯುಪಿಐ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.
ವಯೋಮಿತಿ: ಈ ಹುದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು: 21 ವರ್ಷಗಳು ಆಗಿರಬೇಕು. ಗರಿಷ್ಠ ವಯಸ್ಸು: 32 ವರ್ಷಗಳು ಆಗಿರಬೇಕು. ಅಂದರೆ, ಅಭ್ಯರ್ಥಿಯು 2ನೇ ಆಗಸ್ಟ್, 1992 ಕ್ಕಿಂತ ಮೊದಲು ಮತ್ತು 1 ಆಗಸ್ಟ್, 2003 ಕ್ಕಿಂತ ನಂತರ ಜನಿಸಿದವರು ಅರ್ಜಿ ಸಲ್ಲಿಸಬಾರದು. ಹುದ್ದೆಗಳಿಗೆ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.
ವಿದ್ಯಾರ್ಹತೆ: ಕನಿಷ್ಠ ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಭಾರತದಲ್ಲಿನ ಕೇಂದ್ರ ಅಥವಾ ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಅಥವಾ ಇತರ ಶಿಕ್ಷಣ ಸಂಸ್ಥೆಗಳಲ್ಲಿ ಪದವಿಯನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳು upsconline.nic.in ವೆಬ್‌ಸೈಟ್ ಬಳಸಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿದಾರರು ಆಯೋಗದ ಒನ್ ಟೈಮ್ ರಿಜಿಸ್ಟ್ರೇಶನ್ (OTR) ಪ್ಲಾಟ್‌ಫಾರ್ಮ್‌ನಲ್ಲಿ ಮೊದಲು ನೋಂದಾಯಿಸಿಕೊಳ್ಳಬೇಕು. ನಂತರ ಪರೀಕ್ಷೆಗಾಗಿ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಲು ಮುಂದುವರಿಯುತ್ತದೆ. OTR ಅನ್ನು ಒಮ್ಮೆ ಮಾತ್ರ ನೋಂದಾಯಿಸಬೇಕು. ಇದನ್ನು ವರ್ಷದ ಯಾವುದೇ ಸಮಯದಲ್ಲಿ ಮಾಡಬಹುದು. ಅಭ್ಯರ್ಥಿಯು ಈಗಾಗಲೇ ನೋಂದಾಯಿಸಿಕೊಂಡಿದ್ದರೆ, ಅವನು/ಅವಳು ಪರೀಕ್ಷೆಗಾಗಿ ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಲು ನೇರವಾಗಿ ಮುಂದುವರಿಯಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ