UPSC Recruitment 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 827 ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕ ವಿಭಾಗೀಯ ವೈದ್ಯಕೀಯ ಅಧಿಕಾರಿ, ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಮಾಡಲಿಚ್ಛಿಸುವವರು ಈ ಅವಕಾಶವನ್ನು ಬಳಸಬಹುದು. ಆಸಕ್ತ ಅಭ್ಯರ್ಥಿಗಳು 30-Apr-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು;
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ಆರಂಭಿಕ ದಿನಾಂಕ: 10-04-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ಕೊನೆಯ ದಿನಾಂಕ: 30-Apr-2024
OTR ಅನ್ನು ಮಾರ್ಪಡಿಸುವ ಕೊನೆಯ ದಿನಾಂಕ: 07-ಮೇ-2024
ಹುದ್ದೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಸಂಸ್ಥೆಯ ಹೆಸರು: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)ಇಲ್ಲಿ ಖಾಲಿ ಇರುವ 827 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಹಾಯಕ ವಿಭಾಗೀಯ ವೈದ್ಯಕೀಯ ಅಧಿಕಾರಿ, ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100-177500/- ವೇತನ ದೊರಕಲಿದೆ.
ಹುದ್ದೆ ಹೆಸರು ಮತ್ತು ಸಂಖ್ಯೆ:
ವೈದ್ಯಕೀಯ ಅಧಿಕಾರಿ (GDMO) – 163 ಹುದ್ದೆಗಳು
ಸಹಾಯಕ ವಿಭಾಗೀಯ ವೈದ್ಯಾಧಿಕಾರಿ- 450 ಹುದ್ದೆಗಳು
ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿ- 14 ಹುದ್ದೆಗಳು
ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ Gr-II -200 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ MBBS ತೇರ್ಗಡೆ ಮಾಡಿರಬೇಕು.
ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2024 ರಂತೆ 32 ವರ್ಷಗಳನ್ನು ಮೀರಿರಬಾರದು ಎಂದು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. OBC ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಇತರ ಎಲ್ಲಾ ಅಭ್ಯರ್ಥಿಗಳು ರೂ.200/- ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಆನ್‌ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ