UPSC Recruitment 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಸಂಸ್ಥೆಯು ಸಹಾಯಕ ನಿರ್ದೇಶಕ, ಸೈಂಟಿಸ್ಟ್-ಬಿ, ಆಡಳಿತಾಧಿಕಾರಿ ಗ್ರೇಡ್-I ಮತ್ತು ಸ್ಪೆಷಲಿಸ್ಟ್ ಗ್ರೇಡ್ III ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-02-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-02-2024 (23:59 ಗಂಟೆಗಳು)
ಹುದ್ದೆಗಳ ವಿವರ: ಸಹಾಯಕ ನಿರ್ದೇಶಕ, ಸೈಂಟಿಸ್ಟ್-ಬಿ, ಆಡಳಿತಾಧಿಕಾರಿ ಗ್ರೇಡ್-I ಮತ್ತು ಸ್ಪೆಷಲಿಸ್ಟ್ ಗ್ರೇಡ್ III ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ: 122 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಸಂಬಂಧಿತ ಹುದ್ದೆಗೆ ಬೇಕಾದ ಯಾವುದೇ ಪದವಿ/ಪಿಜಿ ತೇರ್ಗಡೆ ಹೊಂದಿರಬೇಕು.
ಅರ್ಜಿ ಶುಲ್ಕ: ಮಹಿಳೆಯರಿಗೆ/ SC/ ST ಮತ್ತು ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ
ಇತರರಿಗೆ ಅರ್ಜಿ ಶುಲ್ಕ: ರೂ. 25/-
SBI ಯ ಯಾವುದೇ ಶಾಖೆಯಲ್ಲಿ ಹಣವನ್ನು ನಗದು ಮೂಲಕ ಅಥವಾ ವೀಸಾ/ಮಾಸ್ಟರ್/ರುಪೇ ಕ್ರೆಡಿಟ್/ಡೆಬಿಟ್ ಕಾರ್ಡ್/ಯುಪಿಐ ಪಾವತಿಯನ್ನು ಬಳಸಿಕೊಂಡು ಅಥವಾ ಯಾವುದೇ ಬ್ಯಾಂಕಿನ ಇಂಟರ್ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿ ಅರ್ಜಿ ಶುಲ್ಕ ಪಾವತಿಸಬಹುದು.
ಪೋಸ್ಟಿಂಗ್: ನವದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಡೆಹ್ರಾಡೂನ್, ಲಕ್ನೋ, ಭೋಪಾಲ್, ನಾಗ್ಪುರ, ಪಾಟ್ನಾ, ಗುವಾಹಟಿ, ಜೈಪುರ ಈ ಸ್ಥಳಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲ್ಲಿ ಪೋಸ್ಟಿಂಗ್ ಮಾಡಲಾಗುತ್ತದೆ:
ವಯಸ್ಸಿನ ಮಿತಿಗಳು: ವಿವಿಧ ಹುದ್ದೆಗಳಿಗೆ ವಯಸ್ಸಿನ ಮಿತಿಯನ್ನು ಜಾಹೀರಾತಿನಲ್ಲಿ ನೀಡಲಾಗಿದೆ. ವಿವಿಧ ವರ್ಗಗಳಿಗೆ ನೀಡಿದ ವಯಸ್ಸಿನ ರಿಯಾಯಿತಿಗಳಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. http://www.upsconline.nic.in ಈ ಲಿಂಕ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಯಾವುದೇ ಇತರ ವಿಧಾನದ ಮೂಲಕ ಕಳುಹಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅಭ್ಯರ್ಥಿಗಳು ತಮ್ಮ ಜನ್ಮ ದಿನಾಂಕ, ಅನುಭವ, ವಿದ್ಯಾರ್ಹತೆಗಳು ಇತ್ಯಾದಿ ದಾಖಲೆಗಳು/ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಬೇಕು. pdf ಫೈಲ್‌ನಲ್ಲಿ ಪ್ರತಿ ಫೈಲ್ ಗಾತ್ರವು 1 MB ಮತ್ತು “ಅಪ್‌ಲೋಡ್ ಇತರ ಡಾಕ್ಯುಮೆಂಟ್ ಮಾಡ್ಯೂಲ್‌ಗೆ 2 MB ಮೀರದ ರೀತಿಯಲ್ಲಿ ಅಪ್‌ಲೋಡ್ ಮಾಡಬೇಕು. ಪೇ ಸ್ಲಿಪ್, ರೆಸ್ಯೂಮ್, ನೇಮಕಾತಿ ಪತ್ರ, ರಿಲೀವಿಂಗ್ ಲೆಟರ್, ಅನ್-ಸೈನ್ಡ್ ಎಕ್ಸ್‌ಪೀರಿಯೆನ್ಸ್ ಸರ್ಟಿಫಿಕೇಟ್ ಇತ್ಯಾದಿಗಳನ್ನು ಅಭ್ಯರ್ಥಿಗಳು ಅಪ್‌ಲೋಡ್ ಮಾಡಬಾರದು.