UPSC Recruitment 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 147 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೆಳಗೆ ನೀಡಿದ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಸೈಂಟಿಸ್ಟ್-ಬಿ, ಸ್ಪೆಷಲಿಸ್ಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು 11-Apr-2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 23-03-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-04-2024
ಹುದ್ದೆಯ ಕುರಿತ ಮಾಹಿತಿ ಇಲ್ಲಿದೆ.
ಹುದ್ದೆಯ ಹೆಸರು ಮತ್ತು ಸಂಖ್ಯೆ ವಿವರ;
ಸೈಂಟಿಸ್ಟ್-ಬಿ 12 ಹುದ್ದೆಗಳು
ಮಾನವಶಾಸ್ತ್ರಜ್ಞ 1 ಹುದ್ದೆ
ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರೊಫೆಸರ್ 123 ಹುದ್ದೆಗಳು
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ 4 ಹುದ್ದೆಗಳು
ಸಹಾಯಕ ನಿರ್ದೇಶಕ 7 ಹುದ್ದೆಗಳು
ಒಟ್ಟು 147 ಹುದ್ದೆಗಳು ಖಾಲಿ ಇದೆ.
ವಿದ್ಯಾರ್ಹತೆ: ಸೈಂಟಿಸ್ಟ್-ಬಿ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ ಅಥವಾ ಬಿ.ಟೆಕ್, ಸ್ನಾತಕೋತ್ತರ ಪದವಿ ಮಾಡಿರಬೇಕು.
ಮಾನವಶಾಸ್ತ್ರಜ್ಞ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಸ್ನಾತಕೋತ್ತರ ಪದವಿ ಮಾಡಿರಬೇಕು.
ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು MBBS, ಸ್ನಾತಕೋತ್ತರ ಪದವಿ ಮಾಡಿರಬೇಕು.
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಈ ಹುದ್ದೆಗೆ ಡ್ರಿಲ್ಲಿಂಗ್ ಅಥವಾ ಮೈನಿಂಗ್ ಅಥವಾ ಮೆಕ್ಯಾನಿಕಲ್ ಅಥವಾ ಎಲೆಕ್ಟ್ರಿಕಲ್ ಅಥವಾ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.
ಸಹಾಯಕ ನಿರ್ದೇಶಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಿಎಸ್‌ಇ/ಇಸಿಇ/ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಕೆಮಿಕಲ್/ಮೆರೈನ್/ಪ್ರೊಡಕ್ಷನ್/ಇಂಡಸ್ಟ್ರಿಯಲ್/ಇನ್‌ಸ್ಟ್ರುಮೆಂಟೇಶನ್/ಸಿವಿಲ್ ಇಂಜಿನಿಯರಿಂಗ್/ಆರ್ಕಿಟೆಕ್ಚರ್/ಟೆಕ್ಸ್‌ಟೈಲ್ ಕೆಮಿಸ್ಟ್ರಿ/ಟೆಕ್ಸ್‌ಟೈಲ್ ಟೆಕ್ನಾಲಜಿಯಲ್ಲಿ ಬ್ಯಾಚುಲರ್ ಪದವಿ ಮಾಡಿರಬೇಕು.
ವಯೋಮಿತಿ:
ಸೈಂಟಿಸ್ಟ್-ಬಿ 40 ವರ್ಷ, ಮಾನವಶಾಸ್ತ್ರಜ್ಞ 38 ವರ್ಷ, ಸ್ಪೆಷಲಿಸ್ಟ್ ಗ್ರೇಡ್ III- ಸಹಾಯಕ ಪ್ರೊಫೆಸರ್ 40 ವರ್ಷ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ 35 ವರ್ಷ, ಸಹಾಯಕ ನಿರ್ದೇಶಕ 35 ವರ್ಷ ಆಗಿರಬೇಕು. OBC ಅಭ್ಯರ್ಥಿಗಳಿಗೆ 03 ವರ್ಷ,
SC/ST ಅಭ್ಯರ್ಥಿಗಳಿಗೆ 05 ವರ್ಷ, PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಎಲ್ಲಾ ಇತರ ಅಭ್ಯರ್ಥಿಗಳಿಗೆ ರೂ.25/- ಅರ್ಜಿ ಶುಲ್ಕ ವಿಧಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ: ಮೇಲ್ಕಂಡ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.