UPSC Police Jobs 2024: ಕೇಂದ್ರ ಲೋಕಸೇವಾ ಆಯೋಗವು ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 506 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಗಡಿ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಇಂಡೋ-ಟೆಬೆಟನ್ ಗಡಿ ಪೊಲೀಸ್ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿ ಖಾಲಿ ಇರುವ ಗ್ರೂಪ್ ಎ ಅಸಿಸ್ಟಂಟ್ ಕಮಾಂಡಂಟ್ ಹುದ್ದೆಗಳ ಭರ್ತಿ ನಡೆಯಲಿದೆ.
ಅರ್ಜಿಯನ್ನು ಆನ್‌ಲೈನ್ ಮೂಲಕ ಮಾತ್ರವೇ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ನಡೆಯಲಿದೆ. ತಪ್ಪು ಉತ್ತರಗಳಿಗೆ ನೆಗೆಟಿವ್ ಮಾರ್ಕಿಂಗ್ ಇರುತ್ತದೆ.
ಪ್ರಮುಖ ದಿನಾಂಕಗಳು;
ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ; 24-04-2024
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024 ರ 6 ಗಂಟೆ ತನಕ
ಅರ್ಜಿ ತಿದ್ದುಪಡಿಗೆ ಇರುವ ದಿನಾಂಕ: 15-05-2024 – 21-05-2024 ರವರೆಗೆ
ಲಿಖಿತ ಪರೀಕ್ಷೆಯ ದಿನಾಂಕ: 04-08-2024
ಹುದ್ದೆಯ ಕುರಿತು ಹೆಚ್ಚಿನ ವಿವರ ಇಲ್ಲಿದೆ;
ಗಡಿ ಭದ್ರತಾ ಪಡೆ-186 ಹುದ್ದೆಗಳು
ಕೇಂದ್ರ ಮೀಸಲು ಪೊಲೀಸ್ ಪಡೆ : 120 ಹುದ್ದೆಗಳು
ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 100 ಹುದ್ದೆಗಳು
ಇಂಡೋ-ಟೆಬೆಟನ್ ಗಡಿ ಪೊಲೀಸ್ – 58 ಹುದ್ದೆಗಳು
ಸಶಸ್ತ್ರ ಸೀಮಾ ಬಲ – 42 ಹುದ್ದೆಗಳು
ವಿದ್ಯಾರ್ಹತೆ: ಸಿಎಪಿಎಳ್ ಪಡೆಗಳ ಅಸಿಸ್ಟಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ/ತತ್ಸಮಾನ ಶೈಕ್ಷಣಿಕ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ; ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿಯು 20 ವರ್ಷ, ಗರಿಷ್ಠ 25 ವರ್ಷ ಮೀರಿರಬಾರದು. ಒಬಿಸಿ ವರ್ಗ 3 ವರ್ಷ, ಇತರೆ ಹಿಂದುಳಿದ ವರ್ಗದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ: ಅಭ್ಯರ್ಥಿಗಳು ರೂ.200 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪಿಎಸ್‌ಟಿ, ಪಿಇಟಿ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ವೇತನ : ಈ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100 ರಿಂದ 177500 ಮಾಸಿಕ ವೇತನವಿರಲಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.