UPSC Police Jobs 2024: ಕೇಂದ್ರ ಪೊಲೀಸ್‌ ಪಡೆಗಳಲ್ಲಿ 506 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವಿ ಪಾಸಾದವರಿಗೆ ಆದ್ಯತೆ, ಮೇ.14 ಅರ್ಜಿ ಸಲ್ಲಿಸಲು ಕೊನೆಯ ದಿನ

Written By sarkari

Lorem ipsum dolor sit amet consectetur pulvinar ligula augue quis venenatis. 

Advertisements

UPSC Police Jobs 2024: ಕೇಂದ್ರ ಲೋಕಸೇವಾ ಆಯೋಗವು ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 506 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಗಡಿ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಇಂಡೋ-ಟೆಬೆಟನ್‌ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿ ಖಾಲಿ ಇರುವ ಗ್ರೂಪ್‌ ಎ ಅಸಿಸ್ಟಂಟ್‌ ಕಮಾಂಡಂಟ್‌ ಹುದ್ದೆಗಳ ಭರ್ತಿ ನಡೆಯಲಿದೆ.

ಅರ್ಜಿಯನ್ನು ಆನ್‌ಲೈನ್‌ ಮೂಲಕ ಮಾತ್ರವೇ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆಯ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ನಡೆಯಲಿದೆ. ತಪ್ಪು ಉತ್ತರಗಳಿಗೆ ನೆಗೆಟಿವ್‌ ಮಾರ್ಕಿಂಗ್‌ ಇರುತ್ತದೆ.

ಪ್ರಮುಖ ದಿನಾಂಕಗಳು;
ಅಧಿಸೂಚನೆ ಬಿಡುಗಡೆಗೊಂಡ ದಿನಾಂಕ; 24-04-2024
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024 ರ 6 ಗಂಟೆ ತನಕ
ಅರ್ಜಿ ತಿದ್ದುಪಡಿಗೆ ಇರುವ ದಿನಾಂಕ: 15-05-2024 – 21-05-2024 ರವರೆಗೆ
ಲಿಖಿತ ಪರೀಕ್ಷೆಯ ದಿನಾಂಕ: 04-08-2024

ಹುದ್ದೆಯ ಕುರಿತು ಹೆಚ್ಚಿನ ವಿವರ ಇಲ್ಲಿದೆ;
ಗಡಿ ಭದ್ರತಾ ಪಡೆ-186 ಹುದ್ದೆಗಳು
ಕೇಂದ್ರ ಮೀಸಲು ಪೊಲೀಸ್‌ ಪಡೆ : 120 ಹುದ್ದೆಗಳು
ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 100 ಹುದ್ದೆಗಳು
ಇಂಡೋ-ಟೆಬೆಟನ್‌ ಗಡಿ ಪೊಲೀಸ್‌ – 58 ಹುದ್ದೆಗಳು
ಸಶಸ್ತ್ರ ಸೀಮಾ ಬಲ – 42 ಹುದ್ದೆಗಳು

ವಿದ್ಯಾರ್ಹತೆ: ಸಿಎಪಿಎಳ್‌ ಪಡೆಗಳ ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ/ತತ್ಸಮಾನ ಶೈಕ್ಷಣಿಕ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ; ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿಯು 20 ವರ್ಷ, ಗರಿಷ್ಠ 25 ವರ್ಷ ಮೀರಿರಬಾರದು. ಒಬಿಸಿ ವರ್ಗ 3 ವರ್ಷ, ಇತರೆ ಹಿಂದುಳಿದ ವರ್ಗದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ: ಅಭ್ಯರ್ಥಿಗಳು ರೂ.200 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪಿಎಸ್‌ಟಿ, ಪಿಇಟಿ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ವೇತನ : ಈ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56100 ರಿಂದ 177500 ಮಾಸಿಕ ವೇತನವಿರಲಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.