UPSC IFS Exam Notification 2024: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಭಾರತೀಯ ಅರಣ್ಯ ಸೇವಾ ಪರೀಕ್ಷೆ 2024 ರ ಅರಣ್ಯ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಕುರಿತು ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರೀಕ್ಷೆಯ ಕುರಿತ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹುದ್ದೆಯ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ್ದರೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಭಾರತೀಯ ಅರಣ್ಯ ಸೇವಾ ಪರೀಕ್ಷೆಗೆ ಮತ್ತು ನಾಗರಿಕ ಸೇವೆಗಳ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅಪೇಕ್ಷಿಸುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 14-02-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-03-2024 ಸಂಜೆ 06:00 ರವರೆಗೆ
ತಿದ್ದುಪಡಿ ದಿನಾಂಕ: 06-03-2024 ರಿಂದ 12-03-2024
ಪ್ರಿಲಿಮ್ಸ್ ಪರೀಕ್ಷೆಯ ದಿನಾಂಕ: 26-05-2024
ಹುದ್ದೆ: ಭಾರತೀಯ ಅರಣ್ಯ ಸೇವಾ ಪರೀಕ್ಷೆ ನೇಮಕಾತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ
ಹುದ್ದೆ ಸಂಖ್ಯೆ: ಶೀಘ್ರದಲ್ಲೇ ತಿಳಿಸಲಾಗುವುದು
ಅರ್ಜಿ ಶುಲ್ಕ:
SC/ ST/ ಸ್ತ್ರೀ ಮತ್ತು PwBD ಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ರೂ. 100/- ನ್ನು ಅರ್ಜಿ ಶುಲ್ಕವಾಗಿ ಪಾವತಿ ಮಾಡಬೇಕು. ಅಭ್ಯರ್ಥಿಗಳು ಯಾವುದೇ ಬ್ಯಾಂಕಿನ ನೆಟ್ ಬ್ಯಾಂಕಿಂಗ್ ಸೌಲಭ್ಯದ ಮೂಲಕ ಅಥವಾ ವೀಸಾ/ಮಾಸ್ಟರ್/ರುಪೇ/ಕ್ರೆಡಿಟ್/ಡೆಬಿಟ್ ಕಾರ್ಡ್/ಯುಪಿಐ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು.
ವಯೋಮಿತಿ: ಈ ಹುದ್ದೆಗೆ ಕನಿಷ್ಠ ವಯಸ್ಸು: 21 ವರ್ಷ ಆಗಿರಬೇಕು, ಗರಿಷ್ಠ ವಯಸ್ಸು: 32 ವರ್ಷಗಳಾಗಿರಬೇಕು. ವಯೋಮಿತಿ ಸಡಿಲಿಕೆಯನ್ನು ನಿಯಮಗಳ ಅನುಸಾರ ನೀಡಲಾಗುತ್ತದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಗಳು ಪದವಿಯಲ್ಲಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ವಿಜ್ಞಾ/ಸಸ್ಯಶಾಸ್ತ್ರ/ ರಸಾಯನ ಶಾಸ್ತ್ರ, ಭೂ ವಿಜ್ಞಾನ/ ಗಣಿತ/ ಭೌತಶಾಸ್ತ್ರ/ ಅಂಕಿಅಂಶ ಮತ್ತು ಪ್ರಾಣಿ ಶಾಸ್ತ್ರ/ ಕೃಷಿ ಪದವಿ/ ಅರಣ್ಯ ಶಾಸ್ತ್ರದಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
ಭಾರತೀಯ ಅರಣ್ಯ ಸೇವೆ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅವರು ನಾಗರಿಕ ಸೇವೆಗಳಲ್ಲಿ (ಪ್ರಾಥಮಿಕ) ಪರೀಕ್ಷೆಯಲ್ಲಿ ಪಾಸಾಗಬೇಕು. ನಂತರ ಎರಡನೇ ಹಂತದ ಪರೀಕ್ಷೆ ಭಾರತೀಯ ಅರಣ್ಯ ಸೇವೆ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳು ಅರ್ಹರಾಗುತ್ತಾರೆ.
ಅಭ್ಯರ್ಥಿಗಳು ನಾಗರಿಕ ಸೇವೆಗಳ (ಪ್ರಿಲಿಮಿನರಿ) ಪರೀಕ್ಷೆಗಾಗಿ www.upsconline.nic.in ಲಿಂಕ್ ಅನ್ನು ಬಳಸಿಕೊಂಡು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಭಾರತೀಯ ಅರಣ್ಯ ಸೇವೆ (ಮುಖ್ಯ) ಪರೀಕ್ಷೆಗೆ ಅಭ್ಯರ್ಥಿಗಳ ಆಯ್ಕೆಯು ಸ್ಕ್ರೀನಿಂಗ್ ಮೆಕಾನಿಸಂ ಮೂಲಕ ನಡೆಯುತ್ತದೆ. ನಾಗರಿಕ ಸೇವೆಗಳ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು, (ಅವರು ನಿಗದಿತ ಅರ್ಹತಾ ಷರತ್ತುಗಳನ್ನು ಪೂರೈಸುವ ಮೂಲಕ) ಭಾರತೀಯ ಅರಣ್ಯ ಸೇವಾ ಪರೀಕ್ಷೆ ಮತ್ತು ನಾಗರಿಕ ಸೇವಾ ಪರೀಕ್ಷೆ ಎರಡಕ್ಕೂ ಹಾಜರಾಗಲು ಉದ್ದೇಶಿಸಿದ್ದರೆ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಸೂಕ್ತವಾಗಿ ಸೂಚಿಸಿ, ಒಮ್ಮೆ ಅರ್ಜಿ ಸಲ್ಲಿಸಬೇಕು.
UPSC IFS Prelims Exam 2024-ಆನ್‌ಲೈನ್ ಅಪ್ಲೈ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ