Vijayapura City Corporation: ವಿಜಯಪುರ ಮಹಾನಗರಪಾಲಿಕೆಗೆ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 05-02-2024 ರಿಂದ 05-03-2024 ರವರೆಗೆ ವಿಜಯಪುರ ಮಹಾನಗರಪಾಲಿಕೆಯ ಆಡಳಿತ ಶಾಖೆಯಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಕಚೇರಿಗೆ ಸಲ್ಲಿತಕ್ಕದ್ದು. ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು;
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 05-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-03-2024 (ಸಾಯಂಕಾರಲ 05.30 ಘಂಟೆಯೊಳಗೆ)
ಹುದ್ದೆಗಳ ವಿವರ;
ಹುದ್ದೆ ಹೆಸರು: ವಿಜಯಪುರ ಮಹಾನಗರ ಪಾಲಿಕೆಯಲ್ಲಿ ʼಪೌರಕಾರ್ಮಿಕರುʼ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ: 93 ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆ;
ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು
ಎರಡು ವರ್ಷಕ್ಕಿಂತ ಕಡಿಮೆಯಿಲ್ಲದಂತೆ ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡಬೇಕು
ವಯೋಮಿತಿ: ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ವರ್ಷ ಹೊಂದಿರಬೇಕು. ದಿನಾಂಕ 09-03-2023 ಕ್ಕೆ ಅನುಗುಣವಾಗುವಂತೆ ಗರಿಷ್ಠ ವಯೋಮಿತಿ 55 ವರ್ಷಗಳನ್ನು ಮೀರಿರಬಾರದು.
ಶೈಕ್ಷಣಿಕ ವಿದ್ಯಾರ್ಹತೆ: ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಭಾಷೆ ಮಾತನಾಡುವ ಕುರಿತು ಜ್ಞಾನವಿರಬೇಕು.
ವೇತನ ಶ್ರೇಣಿ: ಪೌರಕಾರ್ಮಿಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17,000 ರಿಂದ ರೂ.28,950 ರೂ. ವೇತನವಿರುತ್ತದೆ.
ಅರ್ಜಿ ನಮೂನೆಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು:
ಜನ್ಮ ದಿನಾಂಕವನ್ನು ನಮೂದಿಸಿರುವ ಶೈಕ್ಷಣಿಕ/ವಿದ್ಯಾರ್ಹತೆ ದಾಖಲಾತಿಗಳು ಅಥವಾ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಅಥವಾ ಮತದಾರರ ಗುರುತಿನ ಚೀಟಿ ಅಥವಾ ಪ್ರಾವಿಡೆಂಟ್ ಫಂಡ್ ಅಥವಾ ಇ.ಎಸ್.ಐ. ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಯ ವಿಧಾನ
ನಿಗದಿಪಡಿಸಿದ ನಮೂನೆಯಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು. ಬೇರೆ ಯಾವುದೇ ನಮೂನೆಯಲ್ಲಾಗಲೀ ಅಥವಾ ಬೆರಳಚ್ಚು/ಜೆರಾಕ್ಸ್ ಪ್ರತಿಯಲ್ಲಿ ಸಲ್ಲಿಸಲ್ಪಡುವ ಅರ್ಜಿಯನ್ನು ತಿರಸ್ಕರಿಸಲಾಗುವುದು.
ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಬಾರಿ ಅರ್ಜಿ ಸಲ್ಲಿಸಿದ್ದಲ್ಲಿ, ಒಂದು ಅರ್ಜಿಯನ್ನು ಪರಿಗಣಿಸಲಾಗುವುದು. ಉಳಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಸಮಯದ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿಗಳನ್ನು ಖುದ್ದಾಗಿ ಕಚೇರಿಗೆ ಸಲ್ಲಿಸತಕ್ಕದ್ದು. ಅಧಿಸೂಚನೆಯಲ್ಲಿ ನೀಡಿರುವ ಸೂಚನೆಗಳನ್ನು ಅರ್ಜಿ ಭರ್ತಿ ಮಾಡುವ ಮೊದಲು ಕಡ್ಡಾಯವಾಗಿ ಓದಬೇಕು. ಅಲ್ಲಿ ನೀಡಿರುವ ಸೂಚನೆಗಳನ್ವಯವೇ ಅರ್ಜಿ ಭರ್ತಿ ಮಾಡತಕ್ಕದ್ದು. ತಪ್ಪು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹಾಗೂ ಅಂತವರ ವಿರುದ್ಧ ಪಾಲಿಕೆಯ ಕಾನೂನಿನ್ವಯ ಸೂಕ್ರ ಕ್ರಮ ಕೈಗೊಳ್ಳಲಾಗುವುದು.
ವಿಶೇಷ ಸೂಚನೆ: ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಯಾವುದೇ ಅನುಮಾನಗಳಿದ್ದಲ್ಲಿ ಕಚೇರಿಯ ಕೆಲಸದ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಕಚೇರಿಯ ಆಡಳಿತ ಶಾಖೆಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಅರ್ಜಿ ಸಲ್ಲಿಸುವುದು.
ಅಧಿಸೂಚನೆಯಲ್ಲಿ ನೀಡಿದ ಹುದ್ದೆಯ ವಿವರಗಳನ್ನು ಪಾಲಿಕೆ ವೆಬ್‌ಸೈಟ್ www.vijayapuracity.mrc.gov.in ನಲ್ಲಿ ಹಾಗೂ ಮಹಾನಗರ ಪಾಲಿಕೆಯ ಸೂಚನಾ ಫಲಕದಲ್ಲಿ ವೀಕ್ಷಿಸಬಹುದು.