ವಿಜಯಪುರ ಡಿಸ್ಟ್ರಿಕ್ಟ್ ಕೋರ್ಟ್ ನಲ್ಲಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 26 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-03-2021 (11;59 pm)
ವಿಜಯಪುರ ಡಿಸ್ಟ್ರಿಕ್ಟ್ ಕೋರ್ಟ್ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬಹುದು.
ವಿಜಯಪುರ ಡಿಸ್ಟ್ರಿಕ್ಟ್ ಕೋರ್ಟ್ ನಲ್ಲಿರುವ ಟೈಪಿಸ್ಟ್- ಕಾಪಿಸ್ಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆ: 2
ವಿದ್ಯಾರ್ಹತೆ : ಅಭ್ಯರ್ಥಿಗಳು ಎಸ್‌ಎಸ್‌ಎಲ್ ಸಿ ಯನ್ನು ಯಾವುದೇ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ತೇರ್ಗಡೆ ಹೊಂದಿರಬೇಕು.
ವಯೋಮಿತಿ : ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು. ( 26 ಮಾರ್ಚ್ 2021)
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಿಎಟಿ-1 ಅಭ್ಯರ್ಥಿಗಳಿಗ 5 ವರ್ಷ, ಸಿಎಟಿ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಿಎಟಿ-೧ , ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/- , ಜನರಲ್, ಸಿಎಟಿ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ.2೦೦/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ( ಎಸ್‌ಬಿಐ ಚಲನ್)-30-03-2021
ಆಯ್ಕೆ ಪ್ರಕ್ರಿಯೆ : ಟೈಪಿಂಗ್ ಟೆಸ್ಟ್, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ, ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿ ಓನ್‌ಲೈನ್ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ
ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಓನ್‌ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ