ಚಿಕ್ಕಮಗಳೂರು ಜಿಲ್ಲೆಯಲ್ಲಿ 87 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆ

Advertisements

ಚಿಕ್ಕಮಗಳೂರು ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಪ್ರಸ್ತುತ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ‌‌ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 05-08-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-09-2021 ಸಂಜೆ 5.30 ರೊಳಗೆ

ಅಂಗನವಾಡಿ ಕಾರ್ಯಕರ್ತೆ ಒಟ್ಟು ಹುದ್ದೆ : 27
ಅಂಗನವಾಡಿ ಸಹಾಯಕಿ ಒಟ್ಟು ಹುದ್ದೆ : 60

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರವೇ ಸಲ್ಲಿಸತಕ್ಕದ್ದು. ಆನ್ಲೈನ್ ಅರ್ಜಿಯೊಂದಿಗೆ ಅಗತ್ಯ ಅರ್ಜಿಗಳನ್ನು ಸಲ್ಲಿಸದೇ ಇದ್ದಲ್ಲಿ, ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು 18-35 ವರ್ಷದ ವಯೋಮಿತಿಯೊಳಗಿರಬೇಕು.

ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಸ್ಥಳೀಯರಾಗಿರಬೇಕು. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ‌ ಪರಿಗಣಿಸುವುದಿಲ್ಲ.

ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 4 ನೇ ತರಗತಿ ತೇರ್ಗಡೆ, ಗರಿಷ್ಠ 9 ನೇ ತರಗತಿಯವರೆಗೆ ತೇರ್ಗಡೆ ಹೊಂದಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆ ಮಾಡಲಾಗುವುದು. 9 ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.

ನೋಟಿಫಿಕೇಶನ್

Leave a Comment