ಹಾವೇರಿ ಜಿಲ್ಲೆಯಲ್ಲಿ 93 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಮಹಿಳೆಯರಿಂದ ಆನ್ಲೈನ್ ಅರ್ಜಿ ಆಹ್ವಾನ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಹಾವೇರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 07 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ‌ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ‌ಮೂಲಕ ಅರ್ಜಿಯನ್ನು ಆಹ್ವಾನಿಸಿದೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ : 22-07-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23-08-2021 ಸಂಜೆ‌ 5 ಗಂಟೆ

ಹುದ್ದೆ: 23 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 70 ಸಹಾಯಕಿಯರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹಾವೇರಿ‌ ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಈ ಕೆಳಗೆ ಕಾಣಿಸಲಾದ ಗ್ರಾಮಗಳ / ನಗರ ಪ್ರದೇಶಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ ಸಹಾಯಕಿಯಾಗಿ ಗೌರವ ಸೇವೆ ಸಲ್ಲಿಸಲು ಮೀಸಲಾತಿ ಹೊಂದಿದ 18 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಗ್ರಾಮೀಣ ‌ಪ್ರದೇಶದಲ್ಲಿ ಅದೇ ಕಂದಾಯ ಗ್ರಾಮದ ಹಾಗೂ ನಗರ ಪ್ರದೇಶದ ‌ಕೇಂದ್ರದ ವ್ಯಾಪ್ತಿಯ ಕಂದಾಯ ವಾರ್ಡಿನ ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯಾಗಲು ಎಸ್ ಎಸ್ ಎಲ್ ಸಿ ತೇರ್ಗಡೆ ಆಗಿರಬೇಕು. ಹೆಚ್ಚಿನ ವಿದ್ಯಾರ್ಹತೆ ಪಡೆದಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಆದರೆ ಆಯ್ಕೆ ಸಮಯದಲ್ಲಿ ಎಸ್ ಎಸ್ ಎಲ್ ಸಿ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9 ನೇ ತರಗತಿ ತೇರ್ಗಡೆ ಹೊಂದಿರಬೇಕು. 9 ನೇ ತರಗತಿ ತೇರ್ಗಡೆ ಹೊಂದಿ ಹೆಚ್ಚಿನ ವಿದ್ಯಾರ್ಹತೆಯನ್ನು ಪಡೆದಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಆದರೆ ಆಯ್ಕೆ ಸಮಯದಲ್ಲಿ 9 ನೇ ತರಗತಿಯ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment