ಕಲಬುರಗಿ ಜಿಲ್ಲೆಯ ಮಹಿಳಾ ಮಕ್ಕಖ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 09 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 51+4=55 ಅಂಗನವಾಡಿ ಕಾರ್ಯಕರ್ತೆ ಮತ್ತು 276 ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭಿಕ ದಿನಾಂಕ: 01-07-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-07-2021
ವಯೋಮಿತಿ : 18 ರಿಂದ 35 ವಯೋಮಿತಿಯೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ತೇರ್ಗಡೆಯಾಗಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು ಹಾಗೂ 9 ನೇ ತರಗತಿ ತೇರ್ಗಡೆಯಾಗಿರಬೇಕು.
ಅಭ್ಯರ್ಥಿಗಳು ಎಲ್ಲಾ ದಾಖಲೆಗಳೊಂದಿಗೆ ಸಂಬಂಧಿಸಿದ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 31-07-2021 ರ ಅಪರಾಹ್ನ 5.30 ಗಂಟೆಯೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.