ರಾಯಚೂರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisements

ರಾಯಚೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಯನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ : ಅಂಗನವಾಡಿ ಸಹಾಯಕಿ

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ : ಫೆಬ್ರವರಿ 19, 2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 18, 2021

ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ

ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ವಿಕಲ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಸ್ಥಳೀಯರಿಗೆ ಆದ್ಯತೆ

ಆಸಿಡ್ ದಾಳಿಗೆ ಒಳಗಾದ ಮಹಿಳೆಯರು ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಇತರ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಮೊದಲ ಆದ್ಯತೆ ಮೇರೆಗೆ ನೇರವಾಗಿ ಅವರನ್ನೇ ಆಯ್ಕೆ ಮಾಡಲಾಗುವುದು.

ವಿಧವೆಯರ ಆದ್ಯತೆ:
ವಿಧವೆಯರಲ್ಲಿ ರೈತನ ಪತ್ನಿಗೆ ಮೊದಲ ಆದ್ಯತೆ. ಉಳಿದಂತೆ ಇತರ ವಿಧವೆಯರನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಿದ ನಂತರ ವಿಧವೆಯರಾದರೆ ಪರಿಗಣಿಸಲಾಗುವುದಿಲ್ಲ. ಗರಿಷ್ಠ ಅಂಕ ಪಡೆದ ವಿಧವೆಯರ ಅರ್ಜಿಯನ್ನು ಪರಿಗಣಿಸಲಾಗುವುದು.

ಅಂಗವಿಕಲ ಅಭ್ಯರ್ಥಿಗಳಿಗೆ ಆದ್ಯತೆ : ಕಿವುಡರು, ಮೂಕರು, ಬುದ್ಧಿಮಾಂದ್ಯರು, ಮಾನಸಿಕ ಅಸ್ವಸ್ಥರು , ಕಾರ್ಯಕರ್ತೆ ಹುದ್ದೆ ಅರ್ಹರಿರುವುದಿಲ್ಲ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನಲ್ಲಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿ, ಅರ್ಜಿ ಭರ್ತಿ ಮಾಡಿ, ಮಾರ್ಚ್ 18, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು, ಅಂಚೆ ಅಥವಾ ಖುದ್ದಾಗಿ ಸಲ್ಲಿಸಲು ಅವಕಾಶವಿಲ್ಲ. ಅಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಅಧಿಕೃತ ವೆಬ್ ಸೈಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Comment