ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 03-04-2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?: ಒನ್ ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-04-2021(5.30pm)
ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. CG ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.
ಹುದ್ದೆ ವಿವರ : 20 ಅಂಗನವಾಡಿ ಕಾರ್ಯಕರ್ತೆ ಹಾಗೂ 114 ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ ಎಸ್ ಎಲ್ ಸಿ ಹಾಗೂ ಸಹಾಯಕಿ ಹುದ್ದೆಗೆ ಕನಿಷ್ಠ 4th ಅಥವಾ ಗರಿಷ್ಠ 9th ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಹುದ್ದೆಗೆ ಕನಿಷ್ಠ 18 ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://anganwadirecruit.kar.nic.in/ ಗೆ ಭೇಟಿ ನೀಡಬಹುದು.