34 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆ: ವಿವರ ಇಲ್ಲಿದೆ

Advertisements

ಉಡುಪಿ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 16.04.2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

ಕ್ವಿಕ್ ಲುಕ್
ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23.03.2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-04-2021
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಈಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

ಹುದ್ದೆಗಳ ವಿವರ: ಉಡುಪಿ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 27 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಗೆ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ಹಾಗೂ ಗರಿಷ್ಠ 9 ನೇ ತರಗತಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 35 ಆಯ್ಕೆ ವಯೋಮಿತಿ ಯ ಅದೇ ಗ್ರಾಮದ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

ಆನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment