ಕೊಡಗು ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Advertisements

ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕಾರ್ಯಕರ್ತೆಯರನ್ನು ಗುರುತಿಸಲು ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಿ, ಪ್ರಕಟಣೆ ಹೊರಡಿಸಲಾಗಿದೆ. ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 01-08-2021 ರಿಂದ ಪ್ರಾರಂಭವಾಗಿ 31-08-2021 ಸಂಜೆ 5.30 ಘಂಟೆಯೊಳಗೆ ಅಥವಾ ಮುಂಚಿತವಾಗಿ www.anganawadirecruit.kar.nic.in ರಲ್ಲಿ ಆನ್ಲೈನ್ ಮುಖಾಂತರ ಸಲ್ಲಿಸಲು ಸೂಚಿಸಲಾಗಿದೆ.

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕ 31-08-2021 ಕ್ಕೆ ಅಭ್ಯರ್ಥಿಯ ವಯಸ್ಸು 18 ರಿಂದ 35 ವಯೋಮಿತಿಯೊಳಗಿರಬೇಕು. ವಿಕಲಚೇತನ ಅಭ್ಯರ್ಥಿಯಾಗಿದ್ದಲ್ಲಿ ವಯಸ್ಸು 45 ವಯೋಮಿತಿಯೊಳಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

Leave a Comment