ಯಾದಗಿರಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆ ಮತ್ತು 12 ಅಂಗನವಾಡಿ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 10-12-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-01-2022
ವಯೋಮಿತಿ : ಕನಿಷ್ಠ 18 ವರ್ಷದಿಂದ 35 ವರ್ಷಗಳ ವಯೋಮಿತಿಯೊಳಗಿರತಕ್ಕದ್ದು. ಅಂಗನವಾಡಿ ಕಾರ್ಯಕರ್ತೆ ನೇಮಕಾತಿಯಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಆದ್ದರಿಂದ ಅಂಗವಿಕಲರಿಗೆ 45 ವರ್ಷಗಳ ವಯೋಮಿತಿಯೊಳಗಿರತಕ್ಕದ್ದು.
ಸ್ಥಳೀಯತೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕೇಂದ್ರದ ವ್ಯಾಪ್ತಿಯ ಕಂದಾಯ ಗ್ರಾಮವನ್ನು ಹಾಗೂ ನಗರ ಪ್ರದೇಶದಲ್ಲಿ ಕೇಂದ್ರದ ವ್ಯಾಪ್ತಿಯ ಕಂದಾಯ ವಾರ್ಡ್ ಗಳನ್ನು ಮಾತ್ರ ಪರಿಗಣಿಸಲಾಗುವುದು. ಚುನಾವಣಾ ವಾರ್ಡ್ ಗಳನ್ನು ಪರಿಗಣಿಸಲಾಗುವುದಿಲ್ಲ. ಸ್ಥಳೀಯತೆಯ ಬಗ್ಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಿಂದ 3 ವರ್ಷ ಅವಧಿಯೊಳಗಿನ ತಹಶಿಲ್ದಾರರು/ಉಪತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸುವುದು.
ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸುವುದಿಲ್ಲ.
ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ 04 ನೇ ತರಗತಿ ಗರಿಷ್ಠ 09 ತರಗತಿ ತೇರ್ಗಡೆಯಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ